ETV Bharat / city

ಮೈಸೂರಿನಲ್ಲಿ ಭಾರತ್ ಬಂದ್​ಗೆ ಬೆಂಬಲ: ಅಣಕು ಶವಯಾತ್ರೆ ಮೂಲಕ ಪ್ರತಿಭಟನೆ

author img

By

Published : Mar 26, 2021, 2:21 PM IST

ಭಾರತ್ ಬಂದ್​ಗೆ ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ರಾಜ್ಯ ರೈತ ಸಂಘ, ಕನ್ನಡಪರ ಸಂಘಟನೆಗಳು ಹಾಗೂ ಕರ್ನಾಟಕ ರಾಜ್ಯದ ಬೆಳಗಾರರ ಸಂಘದ ರೈತರು ಮೈಸೂರಿನ ಗನ್ ಹೌಸ್ ವೃತ್ತದಿಂದ ಅಣಕು ಶವಯಾತ್ರೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ
ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್​ಗೆ ಮೈಸೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿವಿಧ ರೈತ ಸಂಘಟನೆಗಳು ಅಣಕು ಶವಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದವು.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮೈಸೂರಿನಲ್ಲಿ ಪ್ರತಿಭಟನೆ

ರಾಜ್ಯ ರೈತ ಸಂಘ, ಕನ್ನಡಪರ ಸಂಘಟನೆಗಳು ಹಾಗೂ ಕರ್ನಾಟಕ ರಾಜ್ಯದ ಬೆಳಗಾರರ ಸಂಘದ ರೈತರು ಮೈಸೂರಿನ ಗನ್ ಹೌಸ್ ವೃತ್ತದಿಂದ ಅಣಕು ಶವಯಾತ್ರೆ ಮಾಡಿ, ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಈ ವೇಳೆ ಈಟಿವಿ ಭಾರತದೊಂದಿಗೆ ಮಾತನಾಡಿದ ರೈತ ಸಂಘದ ಹಸಿರು ಸೇನೆಯ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯದೆ ನಿರ್ಲಕ್ಷ್ಯ ತೋರುತ್ತಿದೆ. ಈ 3 ಕಾಯ್ದೆಗಳು ರೈತರ ಪಾಲಿಗೆ ಮರಣ ಶಾಸನಗಳು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.