ETV Bharat / city

ಮುಡಾದಿಂದ‌ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ : 100 ಕೋಟಿ ಮೌಲ್ಯದ ನಿವೇಶನ ವಶಕ್ಕೆ

author img

By

Published : Dec 18, 2021, 4:04 PM IST

Land Encroachment Clear in Mysore
ಮುಡಾದಿಂದ‌ ಒತ್ತುವರಿ ತೆರವು ಕಾರ್ಯಾಚರಣೆ

ಸಿವಿಲ್‌ ನ್ಯಾಯಾಲಯದಲ್ಲಿ ಮೂಡಾ ಪರ ತೀರ್ಪು ಬಂದ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ರಕ್ಷಣೆಯೊಂದಿಗೆ 2 ಅನಧಿಕೃತ ಶೆಡ್ ಗಳನ್ನು ತೆರವುಗೊಳಿಸಿ, ಪ್ರಾಧಿಕಾರದ ವಶಕ್ಕೆ ಪಡೆದು ನಾಮಫಲಕವನ್ನು ಹಾಕಲಾಯಿತು..

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ತಂಡ ಇಂದು ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ 100 ಕೋಟಿ ರೂ. ಮೌಲ್ಯದ 47 ನಿವೇಶನಗಳನ್ನು ವಶಕ್ಕೆ ಪಡೆದಿದೆ.

ಮುಡಾದಿಂದ‌ ಒತ್ತುವರಿ ತೆರವು ಕಾರ್ಯಾಚರಣೆ..

ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್ ನೇತೃತ್ವದಲ್ಲಿ ನಡೆದ ತೆರವು ಕಾರ್ಯಾಚರಣೆಯಲ್ಲಿ ಮೈಸೂರು ತಾಲೂಕು ಕಸಬಾ ಹೋಬಳಿ ಬಸವನಹಳ್ಳಿ ಗ್ರಾಮದ ಸರ್ವೆ ನಂ.118ರಲ್ಲಿ 5.14 ಎಕರೆ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಶಕ್ಕೆ ಪಡೆದಿದೆ.

ಘಟನೆಯ ವಿವರ : 50×80 ಅಳತೆಯ 11 ನಿವೇಶನ ಹಾಗೂ 40×60 ಅಳತೆಯ 36 ನಿವೇಶನದ ಜಮೀನು, ಒಟ್ಟು 100 ಕೋಟಿ ರೂ. ಮೌಲ್ಯದ ಸ್ವತ್ತು ಇದಾಗಿದೆ. ವಿಜಯನಗರ 4ನೇ ಹಂತ, 2ನೇ ಘಟ್ಟ ಬಡಾವಣೆ ನಿರ್ಮಾಣಕ್ಕಾಗಿ ಜಮೀನು ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು.

ಮುಡಾದಿಂದ‌ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ
ಮುಡಾದಿಂದ‌ ಬೃಹತ್ ಒತ್ತುವರಿ ತೆರವು ಕಾರ್ಯಾಚರಣೆ

1991 ಡಿ. 23ರಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಭೂಸ್ವಾಧೀನಪಡಿಸಿಕೊಂಡಿತ್ತು. ಭೂ ಮಾಲೀಕರಿಗೆ ಪರಿಹಾರ ಹಣ ಪಾವತಿ ನಂತರ ಮಹದೇವಯ್ಯ ಎಂಬುವರು ಕ್ರಯದ ಒಪ್ಪಂದ ಮಾಡಿಕೊಂಡಿದ್ದರು.

ಈ ಮಧ್ಯೆ ಸಿವಿಲ್‌ ನ್ಯಾಯಾಲಯದಲ್ಲಿ ಮೂಡಾ ಪರ ತೀರ್ಪು ಬಂದ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ರಕ್ಷಣೆಯೊಂದಿಗೆ 2 ಅನಧಿಕೃತ ಶೆಡ್‌ಗಳನ್ನು ತೆರವುಗೊಳಿಸಿ, ಪ್ರಾಧಿಕಾರದ ವಶಕ್ಕೆ ಪಡೆದು ನಾಮಫಲಕವನ್ನು ಹಾಕಲಾಯಿತು. ಕಾರ್ಯಾಚರಣೆಯಲ್ಲಿ ಮುಡಾ ಅಧಿಕಾರಿಗಳು ಭಾಗಿಯಾಗಿದ್ದರು.

ಇದನ್ನೂ ಓದಿ: ಹಿರಿಯ ಅಧಿಕಾರಿಗಳು ತಂಗಿದ್ದ ಹೋಟೆಲ್ ಮೇಲೆ ಪುಂಡರಿಂದ ಕಲ್ಲು ತೂರಾಟ : 6 ವಾಹನಗಳು ಜಖಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.