ETV Bharat / city

ಸಿದ್ದರಾಮಯ್ಯರ ಸಂಸ್ಕೃತಿ ಜನ್ರಿಗೆ ಗೊತ್ತಿದೆ : ಕೇಂದ್ರ ಸಚಿವ ಭಗವಂತ ಖೂಬಾ

author img

By

Published : Oct 1, 2021, 4:45 PM IST

Updated : Oct 1, 2021, 5:03 PM IST

ದೇಶಾದ್ಯಂತ ರಸಗೊಬ್ಬರ ಕೊರತೆ ಇಲ್ಲ. ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ..

minister Bhagwanth Khuba
ಕೇಂದ್ರ ಸಚಿವ ಭಗವಂತ ಖೂಬಾ

ಮೈಸೂರು : ತಾಲಿಬಾನ್ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಎಷ್ಟು ಪ್ರೀತಿ ಇದೆ ಎಂದು ಜನರಿಗೆ ಗೊತ್ತಿದೆ. ಅವರ ಸಂಸ್ಕೃತಿಯನ್ನು ತೋರಿಸಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಕುಟುಕಿದರು.

ಮೈಸೂರಿನ ವಿದ್ಯಾರಣ್ಯಪುರಂದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಯಾವ ಸಂಸ್ಕೃತಿಯಲ್ಲಿ ಬೆಳೆದು, ಯಾವ ರೀತಿ ಆಡಳಿತ ಮಾಡಿದ್ದಾರೆ ಅಂತಾ ರಾಜ್ಯದ ಜನರು ಮರೆತಿಲ್ಲ. ಜಾತಿ ರಾಜಕಾರಣ, ತುಷ್ಠೀಕರಣ ರಾಜಕಾರಣ ಎಲ್ಲವನ್ನು ನೋಡಿದ್ದೇವೆಂದರು.

ಕೇಂದ್ರ ಸಚಿವ ಭಗವಂತ ಖೂಬಾ

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಸಂಧಾನ ಸಫಲ : ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ತಾತ್ಕಾಲಿಕ ವಿರಾಮ

ದೇಶಾದ್ಯಂತ ರಸಗೊಬ್ಬರ ಕೊರತೆ ಇಲ್ಲ. ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ತೈಲ ಬೆಲೆ ಏರಿಕೆಗೆ ಸಮರ್ಥನೆ : ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಸರ್ಕಾರದ ಆಯಿಲ್ ಬಾಂಡ್ ನೀತಿಯೇ ಕಾರಣ. ದೇಶದ ಸುರಕ್ಷತೆ ಆದ್ಯತೆಯಿಂದ 135 ಕೋಟಿ ಜನರು ಬೆಲೆ ಏರಿಕೆಯನ್ನು ಒಪ್ಪಿಕೊಳ್ಳುತ್ತಿದ್ದಾರೆ ಎಂದರು.

Last Updated : Oct 1, 2021, 5:03 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.