ETV Bharat / city

Mysuru Dussehra: ರಾಜಮಾತೆಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ. ಸೋಮಶೇಖರ್

author img

By

Published : Oct 5, 2021, 6:51 PM IST

ದಸರಾ ಮಹೋತ್ಸವ ನಿಮಿತ್ತ ರಾಜಮಾತೆ ಪ್ರಮೋದಾದೇವಿ ಅವರಿಗೆ ಫಲಪುಷ್ಪ ತಾಂಬೂಲ ನೀಡಿ ಗೌರವಿಸಿ ಸಚಿವ ಎಸ್.ಟಿ. ಸೋಮಶೇಖರ್ ಇಂದು ಅಧಿಕೃತವಾಗಿ ಆಹ್ವಾನಿಸಿದರು.

minister s t somashekar invites Rajamatha pramoda devi for dasara
ರಾಜಮಾತೆಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ. ಸೋಮಶೇಖರ್

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಇಂದು ಅಧಿಕೃತವಾಗಿ ಆಹ್ವಾನಿಸಿದರು. ರಾಜಮಾತೆಗೆ ಫಲಪುಷ್ಪ ತಾಂಬೂಲ ನೀಡಿ ಗೌರವಿಸಿ ಆಹ್ವಾನ ನೀಡಲಾಯಿತು. ಸಚಿವರ ಆಹ್ವಾನ ಸ್ವೀಕರಿಸಿದ ಪ್ರಮೋದಾದೇವಿ ಅವರು ದಸರಾ ಆಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ರಾಜಮಾತೆಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಎಸ್.ಟಿ. ಸೋಮಶೇಖರ್

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಪ್ರತಿ ವರ್ಷದ ಪದ್ಧತಿಯಂತೆ ದಸರಾ ಮಹೋತ್ಸವಕ್ಕೆ ರಾಜಮಾತೆ ಆಹ್ವಾನಿಸಲಾಯಿತು. ದಸರಾಗೆ ಪೂರ್ಣ ಸಹಕಾರ ನೀಡುವಂತೆ ಕೋರಲಾಯಿತು. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಅರಮನೆಯ ಕಾರ್ಯಕ್ರಮಗಳಿಗೂ ಯಾವುದೇ ಅಡಚಣೆಯಾಗದ ರೀತಿಯಲ್ಲಿ ಸಹಕಾರ ನೀಡುವಂತೆ ಅವರೂ ಕೋರಿದರು. ಅದಕ್ಕೆ ಸಂಪೂರ್ಣ ಸಹಕಾರ ಕೊಡುವುದಾಗಿ ತಿಳಿಸಲಾಗಿದೆ ಎಂದರು.

ಅ.7ರಿಂದ 15 ರವರೆಗೆ ದಸರಾ ನಡೆಯಲಿದೆ. ದಸರಾ ಉದ್ಘಾಟನೆ ಕಾರ್ಯಕ್ರಮಕ್ಕೆ 400 ಜನರಿಗೆ ಅವಕಾಶ ನೀಡಲಾಗಿದೆ. ಚಾಮುಂಡಿಬೆಟ್ಟದಲ್ಲಿ ಯಾವುದೇ ನಿರ್ಬಂಧ ಇಲ್ಲ. ದೇವರ ದರ್ಶನ ಮಾಡುವವರು ಮಾಡಬಹುದು ಎಂದು ಹೇಳಿದರು.

ಚಾಮುಂಡಿಬೆಟ್ಟದಲ್ಲಿ ದಸರಾ ಉದ್ಘಾಟನೆ, ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ಜಂಬೂ ಸವಾರಿ ನಡೆಯಲಿದೆ. ಇದನ್ನು ಹೊರತು ಬೇರೆ ಯಾವುದೇ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಜಂಬೂ ಸವಾರಿ ವೀಕ್ಷಣೆಗೆ 500 ಜನರಿಗೆ ಅವಕಾಶವಿದ್ದು, ಯಾವ ರೀತಿ ಅವಕಾಶ ಕಲ್ಪಿಸಬೇಕು ಎಂಬುದನ್ನು ಚರ್ಚಿಸಿ ತೀರ್ಮಾನಿಸಲಾಗುವುದು ಎಂದರು.

ಇದನ್ನೂ ಓದಿ: Mysuru Dasara: ನಾಡಹಬ್ಬ ದಸರಾಗೆ ಸರ್ಕಾರದ ಮಾರ್ಗಸೂಚಿ ಹೀಗಿದೆ..

ರಾಜಮಾತೆಗೆ ಆಹ್ವಾನ ನೀಡುವ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್. ನಾಗೇಂದ್ರ, ಮೈಸೂರು ಮೇಯರ್ ಸುನಂದಾ ಪಾಲನೇತ್ರ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್. ಮಂಜುನಾಥಸ್ವಾಮಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಪಾಲಿಕೆ ಆಯುಕ್ತರಾದ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಮೈಸೂರು ನಗರ ಬಿಜೆಪಿ ಅಧ್ಯಕ್ಷರಾದ ಶ್ರೀವತ್ಸ ಸೇರಿದಂತೆ ಇತರ ಗಣ್ಯರು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.