ETV Bharat / city

ಐಟಿ ದಾಳಿ ಹಿಂದೆ ರಾಜಕೀಯದ ಅನುಮಾನವಿದೆ: ಸಿದ್ದರಾಮಯ್ಯ

author img

By

Published : Oct 9, 2021, 1:18 PM IST

Political suspicion behind IT raid: Opposition leader Siddaramaiah
ಐಟಿ ದಾಳಿ ಹಿಂದೆ ರಾಜಕೀಯದ ಅನುಮಾನವಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಆಪ್ತರನ್ನೇ ಆಯ್ಕೆ ಮಾಡಿಕೊಂಡು ಐಟಿ ದಾಳಿ ನಡೆದಿದೆ. ಹೀಗಾಗಿ ಇದರ ಹಿಂದೆ ರಾಜಕೀಯದ ಅನುಮಾನ ಇದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಆಪ್ತರನ್ನೇ ಆಯ್ಕೆ ಮಾಡಿಕೊಂಡು ಐಟಿ ದಾಳಿ ಮಾಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಂಶಯ ವ್ಯಕ್ತಪಡಿಸಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಐಟಿ ದಾಳಿಯಲ್ಲಿ ರಾಜಕೀಯ ಇದೆ ಎಂಬುದು ನನ್ನ ಅನುಮಾನ. ನನಗಂತು ಇದರಲ್ಲಿ ರಾಜಕೀಯ ವಾಸನೆ ಬರುತ್ತಿದೆ ಎಂದು ಹೇಳಿದರು.

ಐಟಿ ದಾಳಿ ಹಿಂದೆ ರಾಜಕೀಯದ ಅನುಮಾನವಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಉಪಚುನಾವಣೆ ಫಲಿತಾಂಶ ಭವಿಷ್ಯದ ಚುನಾವಣೆ ದಿಕ್ಸೂಚಿ ಅಂತ ಹೇಳುವುದಿಲ್ಲ. ಹಾಗೇ ಹೇಳುವುದಕ್ಕೂ ಸಾಧ್ಯವಿಲ್ಲ. ಆದರೆ ಈ ಫಲಿತಾಂಶದಿಂದ ಈ ಸರ್ಕಾರದ ಮೇಲೆ ಜನರ ಅಭಿಪ್ರಾಯ ಏನು ಎಂಬುದು ಗೊತ್ತಾಗುತ್ತೆ. ಕೇಂದ್ರ ಹಾಗೂ ರಾಜ್ಯ ಎರಡೂ ಸರ್ಕಾರಗಳಿಂದ ಜನ ಬೇಸತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಅನ್ನು ಎರಡೂ ಕ್ಷೇತ್ರಗಳಲ್ಲಿ ಗೆಲ್ಲಿಸುತ್ತಾರೆ. ಜೆಡಿಎಸ್ ನವರು ಒಳ್ಳೆಯ ಉದ್ದೇಶದಿಂದಂತೂ ಅಲ್ಪಸಂಖ್ಯಾತರಿಗೆ ಟಿಕೆಟ್ ಕೊಟ್ಟಿಲ್ಲ. ಅಲ್ಪಸಂಖ್ಯಾತರ ಮತಗಳನ್ನು ವಿಂಗಡಿಸುವುದೇ ಅವರ ಉದ್ದೇಶ. ಆದರೆ ಜನ ಬುದ್ದಿವಂತರಿದ್ದಾರೆ. ಇಂತಹ ತಂತ್ರಗಳು ಜನರಿಗೆ ಅರ್ಥವಾಗುತ್ತವೆ ಎಂದರು.

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ'

ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದು ಊಹಾಪೋಹ, ಸೋನಿಯಾ ಗಾಂಧಿಯವರೂ ಕರೆದಿಲ್ಲ. ಆ ಬಗ್ಗೆ ಚರ್ಚೆಯೂ ಆಗಿಲ್ಲ. ಸುಮ್ಮನೆ ಊಹಾಪೋಹದ ಚರ್ಚೆಗಳು ಬೇಡ. ನಾನು ಎಂದೂ ಆ ಯೋಚನೆ ಮಾಡಿಯೂ ಇಲ್ಲ. ನಾನು ರಾಜ್ಯ ರಾಜಕಾರಣದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಉಪ ಚುನಾವಣೆ ಬೆನ್ನಲ್ಲೇ ವಿಧಾನ ಪರಿಷತ್ ಟಿಕೆಟ್‌ಗಾಗಿ ಲಾಬಿ ಕೂಡ ಶುರುವಾಗಿದ್ದು, ದಲಿತ ಎಡಗೈ ಸಮುದಾಯಕ್ಕೆ ಸೇರಿರುವ ಡಾ.ಡಿ. ತಿಮ್ಮಯ್ಯಗೆ ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಟಿಕೆಟ್ ನೀಡುವಂತೆ ಅಭಿಮಾನಿಗಳಿಗೆ ಮಾಜಿ ಸಿದ್ದರಾಮಯ್ಯಗೆ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.