ETV Bharat / city

ಶಕ್ತಿಧಾಮ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಿವ ರಾಜಕುಮಾರ್ ದಂಪತಿ ಭಾಗಿ

author img

By

Published : Aug 15, 2022, 1:35 PM IST

Updated : Aug 15, 2022, 4:43 PM IST

ಬನ್ನಿ ಮಂಟಪದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವ ಎಸ್ ಟಿ ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು.

Shiva Rajkumar couple in Shakti Dham Independence Day celebrations
ಶಕ್ತಿಧಾಮ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಿವ ರಾಜಕುಮಾರ್ ದಂಪತಿ ಭಾಗಿ

ಮೈಸೂರು: ಶಕ್ತಿಧಾಮದ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಮಕ್ಕಳ ಜೊತೆ ನಟ ಶಿವರಾಜ್ ಕುಮಾರ್ ದಂಪತಿ ಭಾಗವಹಿಸಿದ್ದು, ಧ್ವಜಾರೋಹಣ ಕಾರ್ಯಕ್ರಮವನ್ನು ಗೀತಾ ಶಿವರಾಜ್ ಕುಮಾರ್ ನೆರವೇರಿಸಿದರು.

ಶಕ್ತಿಧಾಮ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಿವ ರಾಜಕುಮಾರ್ ದಂಪತಿ ಭಾಗಿ

ಬನ್ನಿ ಮಂಟಪದಲ್ಲಿ ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್​ ಟಿ ಸೋಮಶೇಖರ್​: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಬನ್ನಿ ಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಅವರು, ಹರ್ ಘರ್ ತಿರಂಗಾ ಅಭಿಯಾನ ಮೈಸೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದೆ. ಬಾಬು ಜಗಜೀವನ್ ರಾಮ್ ಅವರ ಹೆಸರಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 100 ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಶೈಕ್ಷಣಿಕ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, “ವಿವೇಕ” ಯೋಜನೆಯಡಿ ಮೊದಲ ಬಾರಿಗೆ 8000 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

Minister ST Somasekhar hoisted the flag.
ಸಚಿವ ಎಸ್.ಟಿ ಸೋಮಶೇಖರ್ ಧ್ವಜಾರೋಹಣ ನೆರವೇರಿಸಿದರು.

ರಾಜ್ಯದ ಸುಮಾರು 28 ಸಾವಿರ ಗ್ರಾಮಗಳಲ್ಲಿ ತಲಾ ಒಂದು ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸಿ, ಯುವಕರಿಗೂ ಆರ್ಥಿಕ ನೆರವು, ಬ್ಯಾಂಕ್ ವ್ಯವಸ್ಥೆ, ತರಬೇತಿ ಹಾಗೂ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ವಿದ್ಯಾನಿಧಿ ಯೋಜನೆಯನ್ನು ನೇಕಾರರ ಮಕ್ಕಳಿಗೆ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಹಾಗೂ ಮೀನುಗಾರರ ಮಕ್ಕಳಿಗೂ ವಿಸ್ತರಿಸಲಾಗಿದೆ. 10 ರಿಂದ 12 ಸಾವಿರ ನೇಕಾರರ ಮಕ್ಕಳಿಗೆ, 50 ಸಾವಿರ ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಹಾಗೂ ಮೀನುಗಾರರ ಮಕ್ಕಳಿಗೆ ಇದರ ಲಾಭ ದೊರೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಈ ವರ್ಷದ ಬಜೆಟ್​ನಲ್ಲಿ ಯಶಸ್ವಿನಿ ಯೋಜನೆಯನ್ನು ಪುನಾರಂಭಿಸಲು ಮಹತ್ವದ ಘೋಷಣೆ ಮಾಡಿದ್ದು, ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಅಕ್ಟೋಬರ್ 2ರಂದು ಯೋಜನೆಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ.

Independence day programme
ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ ಕಾರ್ಯಕ್ರಮ

ಕೋವಿಡ್ ಸಂಕಷ್ಟದಿಂದ ಕಳೆದ ಎರಡು ವರ್ಷ ಸರಳವಾಗಿ ದಸರಾ ಆಚರಣೆ ಮಾಡಲಾಗಿತ್ತು. ಈ ಬಾರಿ ಚಾಮುಂಡೇಶ್ವರಿ ದೇವಿಯ ಕೃಪೆಯಿಂದ ಆ ಭೀತಿ ದೂರವಾಗಿದ್ದು, ಈ ಬಾರಿ ನಾಡಹಬ್ಬ ದಸರಾ ಮಹೋತ್ಸವವನ್ನು ಸಾಂಪ್ರದಾಯಿಕವಾಗಿ, ಅದ್ಧೂರಿಯಾಗಿ ಆಚರಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಹಮ್ಮಿಕೊಂಡಿದ್ದ ‘ಹರ್ ಘರ್ ತಿರಂಗಾ' ಅಭಿಯಾನ ಮೈಸೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದ್ದು, ಈ ಅಭಿಯಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ನಮ್ಮ ದೇಶಪ್ರೇಮ ಸ್ವಾತಂತ್ರ‍್ಯ ದಿನಾಚರಣೆಗಷ್ಟೇ ಸೀಮಿತಗೊಳ್ಳಬಾರದು. ದೇಶಪ್ರೇಮ ನಮ್ಮಲ್ಲಿ ಪ್ರತಿದಿನವೂ, ಪ್ರತಿಕ್ಷಣವೂ ಇರಬೇಕು. ವೈವಿಧ್ಯತೆಯಲ್ಲಿ ಏಕತೆ ನಮ್ಮ ದೇಶದ ವಿಶೇಷತೆಯಾಗಿದೆ. ನಾವೆಲ್ಲರೂ ಒಂದೇ ಎಂಬ ಭಾವನೆ ನಮ್ಮನ್ನು ಬೆಸೆಯಬೇಕು ಎಂದು ಇದೇ ಸಂದರ್ಭದಲ್ಲಿ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದರು.

ಇದನ್ನೂ ಓದಿ : 75ನೇ ಸ್ವಾತಂತ್ರ್ಯೋತ್ಸವ.. ವಂದೇ ಮಾತರಂ ಹಾಡಿನಲ್ಲಿ ಕನ್ನಡ ತಾರೆಯರ ಮೆರಗು

Last Updated :Aug 15, 2022, 4:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.