ETV Bharat / city

ಮೈಸೂರು: ಚಾಕುವಿನಿಂದ ಮನಬಂದಂತೆ ಚುಚ್ಚಿ ಯುವಕನ ಬರ್ಬರ ಕೊಲೆ

author img

By

Published : Dec 16, 2021, 11:12 AM IST

Murder
ಯುವಕನ ಬರ್ಬರ ಹತ್ಯೆ

ಮೈಸೂರಿನ ರಮ್ಮನಹಳ್ಳಿಯಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದುಷ್ಕರ್ಮಿಗಳು ಯುವಕನಿಗೆ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ. ಬಳಿಕ ಹಳ್ಳಕ್ಕೆ ತಳ್ಳಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಅಟ್ಟಹಾಸ ಮೆರೆದಿದ್ದಾರೆ.

ಮೈಸೂರು: ಯುವಕನಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಹೊರವಲಯದ ರಮ್ಮನಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಅರ್ಜುನ್ (24) ಎಂಬಾತ ಕೊಲೆಯಾದ ಯುವಕ.

ಜೆಸಿಬಿ ವಾಹನ ಚಾಲಕನಾಗಿದ್ದ ಅರ್ಜುನ್​ಗೆ ಕಳೆದ ರಾತ್ರಿ ಫೋನ್ ಮಾಡಿ, ಗ್ರಾಮದ ಹೊರ ವಲಯಕ್ಕೆ ಕರೆಸಿಕೊಂಡು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ ಎನ್ನಲಾಗ್ತಿದೆ.

ಮೈಸೂರಿನ ಹೊರವಲಯದಲ್ಲಿ ಅರ್ಜುನ್​ನನ್ನು ಅಟ್ಟಾಡಿಸಿಕೊಂಡು ಬಂದ ಕಿಡಿಗೇಡಿಗಳು, ಚಾಕುವಿನಿಂದ ಮನಬಂದಂತೆ ಚುಚ್ಚಿದ್ದಾರೆ. ಕೊನೆಗೆ ಹಳ್ಳಕ್ಕೆ ತಳ್ಳಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ.

ಈ ಕುರಿತು ಸ್ಥಳಕ್ಕೆ ಹೆಚ್ಚುವರಿ ಎಸ್​ ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೈಸೂರು ಮೆಡಿಕಲ್ ಕಾಲೇಜು ಶವಾಗಾರಕ್ಕೆ ಅರ್ಜುನ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.