ETV Bharat / city

ಬೈಕ್​ಗೆ ಕ್ಯಾಂಟರ್​ ಡಿಕ್ಕಿ: ವಿದ್ಯಾರ್ಥಿ ಸೇರಿ ಸ್ಥಳದಲ್ಲೇ ಇಬ್ಬರು ಸಾವು

author img

By

Published : Oct 30, 2019, 5:36 PM IST

ಬೈಕ್​ಗೆ ಕ್ಯಾಂಟರ್ ಡಿಕ್ಕಿ

ಬೈಕ್​ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ‌ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ಬೈಕ್​ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ‌ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಾರನಹಳ್ಳಿ ಗ್ರಾಮದ ಕಾರ್ಪೆಂಟರ್ ಕೇಶವ (18) ಹಾಗೂ ಗಿರೀಶ್ (12) ಮೃತರು. ಆಯನೂರು ಕಡೆಗೆ ಬೈಕ್​ನಲ್ಲಿ ಹೊರಟಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸಾವರರಿಬ್ಬರು‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಗಿರೀಶ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕುಂಸಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕ್ಯಾಂಟರ್ ಹಾಗೂ ಡ್ರೈವರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Intro:ಬೈಕ್ ಗೆ ಕ್ಯಾಂಟರ್ ಡಿಕ್ಕಿ: ಕಾರ್ಪೆಂಟರ್ ಸೇರಿ ಪಿಯು ವಿದ್ಯಾರ್ಥಿ ಸ್ಥಳದಲ್ಲೆ ಸಾವು.

ಶಿವಮೊಗ್ಗ: ಬೈಕ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ‌ ದಾರುಣ ಸಾವು‌ ಕಂಡಿರುವ ಘಟನೆ ಶಿವಮೊಗ್ಗದ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. Body:ಶಿವಮೊಗ್ಗ ತಾಲೂಕು ಹಾರನಹಳ್ಳಿ ಗ್ರಾಮದ ಕಾರ್ಪೆಂಟರ್ ಉದ್ಯೋಗಿ ಕೇಶವ(18) ಹಾಗೂ ಗಿರೀಶ್(12) ಹಾರನಹಳ್ಳಿ ಗ್ರಾಮದಿಂದ ಆಯನೂರು ಕಡೆ ಬೈಕ್ ನಲ್ಲಿ ಹೊರಟಾಗ ವೇಗವಾಗಿ ಬಂದ ಕ್ಯಾಂಟರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬೈಕ್ ಸಾವರಿಬ್ಬರು‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. Conclusion:ಗಿರೀಶ್ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುಂಸಿ ಪೊಲೀಸರು ಕ್ಯಾಂಟರ್ ಹಾಗೂ ಡ್ರೈವರ್ ನನ್ನು ವಶಕ್ಕೆ ಪಡೆದು ಕೇಸು ದಾಖಲಿಸಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.