ಶಿವಮೊಗ್ಗ: ಹಿಂದೂಪರ ಕಾರ್ಯಕರ್ತ ಹರ್ಷ ಕೊಲೆ ಬಳಿಕ ಪರಿಸ್ಥಿತಿ ಉದ್ವಿಗ್ನಗೊಂಡ ಕಾರಣ ನಿಷೇಧಾಜ್ಞೆ ವಿಧಿಸಿ ಶಾಲಾ-ಕಾಲೇಜು ಬಂದ್ ಮಾಡಲಾಗಿತ್ತು. ಇದೀಗ ನಗರ ಸಹಜ ಸ್ಥಿತಿಗೆ ಮರಳಿದ್ದು, ಒಂದು ವಾರದ ಬಳಿಕ ಇಂದಿನಿಂದ ಶಾಲಾ-ಕಾಲೇಜು ಪುನಾರಂಭಗೊಂಡಿವೆ.
ಇಂದಿನಿಂದ ಶಾಲಾ, ಕಾಲೇಜುಗಳು ಪುನಾರಂಭವಾಗುತ್ತಿವೆ. ಆದ್ರೆ ನಗರದಲ್ಲಿ ಮಾರ್ಚ್ 4 ರವರೆಗೆ 144 ಸೆಕ್ಷನ್ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆ ಅವಧಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ತುರ್ತು ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ.
ಕಳೆದ ಭಾನುವಾರ ರಾತ್ರಿ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಯಾಗಿತ್ತು.
ಇದನ್ನೂ ಓದಿ: ಮೃತ ಹಿಂದೂ ಕಾರ್ಯಕರ್ತ ವಿಶ್ವನಾಥ್ ಶೆಟ್ಟಿ ಮನೆಗೆ ನಟ ಪ್ರಥಮ್ ಭೇಟಿ, ಆರ್ಥಿಕ ನೆರವು