ETV Bharat / city

ಕಠಿಣ ಕ್ರಮವನ್ನು ತೆಗೆದುಕೊಂಡರೆ ಅದು ಹೇಗೆ ಅಪರಾಧವಾಗುತ್ತದೆ: ಸಿ.ಟಿ. ರವಿ

author img

By

Published : Apr 30, 2022, 4:16 PM IST

ಪಿಎಸ್​ಐ ಪರೀಕ್ಷೆಯ ಬಗ್ಗೆ ಸೂಕ್ತ ತನಿಖೆಗೆ ಸರ್ಕಾರ ಮುಂದಾಗಿದೆ. ಪ್ರಕರಣ ತಿಳಿಯುತ್ತಿದ್ದಂತೆ ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತದೆ. ಕಠಿಣ ಕ್ರಮವನ್ನು ತೆಗೆದುಕೊಂಡರೆ ಅದು ಹೇಗೆ ಅಪರಾಧವಾಗುತ್ತದೆ ಎಂದು ಸಿ ಟಿ ರವಿ ಪ್ರಶ್ನಿಸಿದ್ದಾರೆ.

c t ravi reaction about PSI test illegal scam in Tumakuru
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ

ತುಮಕೂರು: ಪಿಎಸ್ಐ ಪರೀಕ್ಷೆಯಲ್ಲಿನ ಅಕ್ರಮದ ಕುರಿತು ಕಠಿಣ ಕ್ರಮವನ್ನು ಭಾರತೀಯ ಜನತಾ ಪಕ್ಷ ತೆಗೆದುಕೊಂಡಿದೆ. ಕಠಿಣ ಕ್ರಮವನ್ನು ತೆಗೆದುಕೊಂಡರೆ ಅದು ಹೇಗೆ ಅಪರಾಧವಾಗುತ್ತದೆ. ಕ್ರಮ ತೆಗೆದುಕೊಳ್ಳದಿದ್ದರೆ ತಪ್ಪಾಗುತ್ತಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಅಕ್ರಮದ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಹಾಗೂ ಅದನ್ನು ಮುಚ್ಚಿಹಾಕಿದ್ದರೆ ಅದು ಅಪರಾಧವಾಗುತ್ತಿತ್ತು. ಅಕ್ರಮ ಬೆಳಕಿಗೆ ಬಂದ ತಕ್ಷಣ ಅದರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ, ಅದನ್ನು ಮುಚ್ಚಿ ಹಾಕಿಲ್ಲ. ವ್ಯವಸ್ಥೆಯಲ್ಲಿ ಭ್ರಷ್ಟಾಚಾರವನ್ನು ಬಿತ್ತಿದ್ದು, ಬೆಳೆಸಿದ್ದು ಕಾಂಗ್ರೆಸ್ ಪಕ್ಷವಾಗಿದೆ ಎಂದು ಆರೋಪಿಸಿದರು.

ಕಾಂಗ್ರೆಸ್​ ಅರ್ಕಾವತಿ ಹಗರಣದಲ್ಲಿ ಮಾಡಿದ್ದೇನು?. ಕಳ್ಳತನವಾಗಿದ್ದ ವಾಚನ್ನು ಕಟ್ಟಿಕೊಂಡಿದ್ದು ಯಾರು?. ಪ್ರತಿಪಕ್ಷದ ಯಾರೇ ಇದನ್ನು ಮಾಡಿದ್ದರು ಅವರು ಸುಮ್ಮನಿರುತ್ತಿದ್ದರಾ ಎಂದು ಕಾಂಗ್ರೆಸ್​ ನಾಯಕರನ್ನು ಸಿ ರವಿ ಪ್ರಶ್ನಿಸಿದರು.

ಇದನ್ನೂ ಓದಿ: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪ​​: ರವೀಂದ್ರ ಹಾರೋಹಳ್ಳಿ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.