ETV Bharat / city

ಕೋವಿಡ್ 3ನೇ ಅಲೆ ಭೀತಿ: ಆಂಧ್ರದ ಗಡಿ ತಾಲೂಕುಗಳಲ್ಲಿ ಹದ್ದಿನ ಕಣ್ಣು

author img

By

Published : Aug 12, 2021, 9:53 AM IST

tumkuru
tumkuru

ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜಿಲ್ಲೆಯ ದೇವಾಲಯಗಳಿಗೆ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ವಾರಂತ್ಯದಲ್ಲಿ ಆಗಮಿಸಲಿದ್ದಾರೆ. ಹೀಗಾಗಿ ಸಂಭಾವ್ಯ ಮೂರನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಇಂದಿನಿಂದ (ಆಗಸ್ಟ್ 12) ಜಿಲ್ಲೆಯು ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ತಾಲೂಕುಗಳಲ್ಲಿ ಜನ ಸಂಚಾರದ ಮೇಲೆ ತೀವ್ರ ನಿಗಾ ಇರಿಸುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಜಿಲ್ಲೆಯ ದೇವಾಲಯಗಳಿಗೆ ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ವಾರಂತ್ಯದಲ್ಲಿ ಆಗಮಿಸಲಿದ್ದಾರೆ. ಹೀಗಾಗಿ ಸಂಭಾವ್ಯ ಮೂರನೇ ಅಲೆಯನ್ನು ಸಮರ್ಪಕವಾಗಿ ನಿಯಂತ್ರಿಸಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ತುಮಕೂರು ಡಿಸಿ ಆದೇಶ
ತುಮಕೂರು ಡಿಸಿ ಆದೇಶ

ಜಿಲ್ಲೆಯ ಪ್ರವಾಸಿ ಕೇಂದ್ರ, ಪ್ರೇಕ್ಷಣೀಯ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ಸಂಪೂರ್ಣ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಶನಿವಾರ, ಭಾನುವಾರ, ಸೋಮವಾರ ಹಾಗೂ ಸಾರ್ವತ್ರಿಕ ರಜಾ ದಿನಗಳಂದು ಪ್ರೇಕ್ಷಣೀಯ ಪ್ರದೇಶಗಳಾದ ದೇವರಾಯನದುರ್ಗ ಬಸದಿ ಬೆಟ್ಟ, ರಾಮದೇವರ ಬೆಟ್ಟ, ಸಿದ್ದರಬೆಟ್ಟ ಸೇರಿದಂತೆ ವಿವಿಧ ಗಿರಿಧಾಮಗಳು ಸಾರ್ವಜನಿಕರಿಗೆ ಮುಕ್ತವಾಗಿರುವುದಿಲ್ಲ.

ಕೋವಿಡ್ 19 ಮೂರನೇ ಅಲೆಯನ್ನು ಜಿಲ್ಲೆಯಲ್ಲಿ ನಿಯಂತ್ರಿಸುವ ಸಲುವಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ದೈನಂದಿನ ಪೂಜಾ ಕಾರ್ಯಕ್ರಮಗಳನ್ನು ಹೊರತುಪಡಿಸಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದೇವಸ್ಥಾನಗಳಲ್ಲಿ ವಿಶೇಷ ದಿನಗಳಂದು ನಡೆಯುವ ಆಚರಣೆ ಧಾರ್ಮಿಕ ಸೇವೆಗಳು ಉತ್ಸವಗಳು ಹಾಗು ಜಾತ್ರೆಗಳನ್ನು ನಿಷೇಧಿಸಲಾಗಿದೆ. ವಸತಿಗೃಹಗಳಲ್ಲಿ ತಂಗಲು ಬರುವ ಹೊರರಾಜ್ಯದವರು 72 ಗಂಟೆಯೊಳಗೆ ಆರ್​​ಟಿಪಿಸಿಆರ್ ಟೆಸ್ಟ್ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಅಲ್ಲದೆ ವಸತಿಗೃಹಗಳಲ್ಲಿ ಕೋವಿಡ್ 19 ನಿಯಮಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಆದೇಶದಲ್ಲಿ ಸೂಚಿಸಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಲ್ಲಿ ನಿತ್ಯ ಸೋಂಕು ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಗಡಿ ಭಾಗದ ಕೂಡ ಕೂಡ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ವಹಿಸಲು ನಿರ್ಧರಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.