ETV Bharat / city

ಕೇಂದ್ರ ಸರ್ಕಾರದ ವಿರುದ್ಧ ಕೋಲಾರ,ತುಮಕೂರಿನಲ್ಲಿ ಪ್ರತಿಭಟನೆ

author img

By

Published : Jan 8, 2020, 6:51 PM IST

Protest
Protest

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು‌ ಮತ್ತು ಎಡ ಪಕ್ಷಗಳು ಭಾರತ್ ಬಂದ್​ಗೆ ಕರೆ ನೀಡಿದ ಹಿನ್ನೆಲೆ ಇಂದು ಕೋಲಾರ ಮತ್ತು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೋಲಾರ/ ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು‌ ಮತ್ತು ಎಡ ಪಕ್ಷಗಳು ಭಾರತ್ ಬಂದ್​ಗೆ ಕರೆ ನೀಡಿದ ಹಿನ್ನೆಲೆ ಇಂದು ಕೋಲಾರ ಮತ್ತು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ಕೋಲಾರದಲ್ಲಿ ಭಾರತ್ ಬಂದ್​ಗೆ ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದವು. ಕೋಲಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೊತೆಗೆ ಖಾಲಿ ಮಡಿಕೆಗಳನ್ನ ತಲೆ ಮೇಲೆ ಹೊತ್ತು ಗೋವಿಂದಾ.. ಗೋವಿಂದಾ.. ಎಂದು ಪ್ರದಕ್ಷಿಣೆ ಹಾಕುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ್ರು.

ಈ ವೇಳೆ ರೈತರು ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು ಹಾಗೂ ಸ್ವಾಮಿನಾಥನ್ ವರದಿ ಜಾರಿಯಾಗಬೇಕೆಂದು ಒತ್ತಾಯಿಸಿದ್ರು‌. ಪ್ರತಿಭಟನೆ ಹಿನ್ನೆಲೆ ಪೊಲೀಸ್​ ಬಂದೋಬಸ್ತ್​ಗಾಗಿ ಒಂದು ಕೆಎಸ್​ಆರ್​ಪಿ, ಡಿಆರ್ ತುಕ್ಕಡಿ ಸೇರಿದಂತೆ 150 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು.

ತುಮಕೂರಿನಲ್ಲೂ ಸಹ ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಟೌನ್ ಹಾಲ್ ವೃತ್ತದಿಂದ ಬಿಎಸ್ಎನ್ಎಲ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಎಐಟಿಯುಸಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಣ್ಣ ಮಾತನಾಡಿ, ಕೇಂದ್ರ ಸರ್ಕಾರದ ನೀತಿಗಳು ಕಾರ್ಮಿಕರ ಪರವಾಗಿರದೇ, ಕೇವಲ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ. ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮಾಡುವಲ್ಲಿ ವಿಫಲವಾಗಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾಮಾಜಿಕ ಭದ್ರತೆಯಿಂದ ವಂಚಿತರಾಗಿದ್ದಾರೆ. ರೈತರ ಬೆಳೆಗೆ ಸೂಕ್ತ ಪರಿಹಾರ ಸಿಗದೆ ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ ಎಂದರು.

ಸರ್ಕಾರ ತಕ್ಷಣವೇ ಸ್ವಾಮಿನಾಥನ್ ವರದಿ ಜಾರಿಗೆ ಮಾಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಕನಿಷ್ಠ 10,000 ಪಿಂಚಣಿ ಜಾರಿ ಮಾಡಬೇಕು, ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡಬಾರದು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.

Intro:ತುಮಕೂರು:


Body:ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಟೌನ್ ಹಾಲ್ ವೃತ್ತದಿಂದ ಬಿಎಸ್ಎನ್ಎಲ್ ಕಚೇರಿಗೆ ಪ್ರತಿಭಡನಾ ಮೆರವಣಿಗೆ ನಡೆಸಿ ಬಿ.ಎಸ್.ಎನ್.ಎಲ್ ಕಚೇರಿ ಮುಂದೆ ವಿವಿಧ ಕಾರ್ಮಿಕ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಎಐಟಿಯುಸಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಣ್ಣ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ, ಜನವಿರೋಧಿ ನೀತಿಗಳನ್ನು ವಿರೋಧಿಸಿ ಇಂದು ಅಖಿಲ ಭಾರತ ಮಟ್ಟದಲ್ಲಿ ವಿವಿಧ ಸಂಘಟನೆಗಳ ಮೂಲಕ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೀಡಿಕಾರಿದರು.

ಕೇಂದ್ರ ಸರ್ಕಾರದ ನೀತಿಗಳು ಕಾರ್ಮಿಕರ ಪರವಾಗಿರದೇ ಕೇವಲ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ. ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿ ಮಾಡುವಲ್ಲಿ ವಿಫಲವಾಗಿದೆ, ಇಂತಹ ಕೇಂದ್ರ ಸರ್ಕಾರಕ್ಕೆ ನಾಚಿಕೆಯಾಗಬೇಕು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಾಮಾಜಿಕ ಭದ್ರತೆಯಿಂದ ವಂಚಿತರಾಗಿದ್ದಾರೆ. ರೈತರು ಬೆಳೆಗೆ ಸೂಕ್ತ ಪರಿಹಾರ ಸಿಗದೆ ಆತ್ಮಹತ್ಯೆಯ ಹಾದಿ ತುಳಿಯುತ್ತಿದ್ದಾರೆ ಎಂದರು. ತಕ್ಷಣವೇ ಸ್ವಾಮಿನಾಥನ್ ವರದಿ ಯೋಜನೆಯನ್ನು ಜಾರಿಗೆ ಮಾಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು, ಕನಿಷ್ಠ 10,000 ಪಿಂಚಣಿ ಜಾರಿಮಾಡಬೇಕು, ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡಬಾರದು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.
ಬೈಟ್: ಎನ್. ಶಿವಣ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಐಟಿಯುಸಿ.


Conclusion:ವರದಿ
ಸುಧಾಕರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.