ETV Bharat / city

ತುಮಕೂರು ಪಾಲಿಕೆ ಚುನಾವಣೆಗೆ ಮೀಸಲಾತಿ: ಹೈಕೋರ್ಟ್ ಮೆಟ್ಟಿಲೇರಲು ಜೆಡಿಎಸ್-ಕಾಂಗ್ರೆಸ್ ಸಿದ್ಧತೆ

author img

By

Published : Feb 16, 2021, 11:59 AM IST

ತುಮಕೂರು ಮಹಾನಗರ ಪಾಲಿಕೆ ಚುನಾವಣೆಗೆ ಈಗಾಗಲೇ ಚುನಾವಣೆ ದಿನಾಂಕ ನಿಗದಿಪಡಿಸಲಾಗಿದೆ. ಆದರೆ, ಪಾಲಿಕೆ ಚುನಾವಣೆಗೆ ಮೀಸಲಾತಿ ನಿಗದಿಪಡಿಸಿರುವುದನ್ನು ಪ್ರಶ್ನಿಸಿ, ಹೈಕೋರ್ಟ್ ಮೆಟ್ಟಿಲೇರಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಸಿದ್ಧತೆ ನಡೆಸಿವೆ.

tumkur-mahanagara-palike-election
ಪಾಲಿಕೆ ಚುನಾವಣೆಗೆ ಮೀಸಲಾತಿ ನಿಗದಿ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲು ಜೆಡಿಎಸ್-ಕಾಂಗ್ರೆಸ್ ಸಿದ್ಧತೆ!

ತುಮಕೂರು: ತುಮಕೂರು ಮಹಾನಗರ ಪಾಲಿಕೆ ಚುನಾವಣೆಗೆ ಮೀಸಲಾತಿ ನಿಗದಿಪಡಿಸಿರುವುದನ್ನು ಪ್ರಶ್ನಿಸಿ, ಹೈಕೋರ್ಟ್ ಮೆಟ್ಟಿಲೇರಲು ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಸಿದ್ಧತೆ ನಡೆಸಿವೆ.

ತುಮಕೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗಿದೆ. ಮೇಯರ್, ಉಪ ಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಸಲು ಪ್ರಾದೇಶಿಕ ಆಯುಕ್ತರು ಫೆಬ್ರವರಿ 26ರಂದು ದಿನಾಂಕ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಮತ್ತು ಉಪಮೇಯರ್ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿದೆ.

ತುಮಕೂರು ಮಹಾನಗರ ಪಾಲಿಕೆ ಆಡಳಿತ ನಡೆಸಲು ಯಾವ ಪಕ್ಷಕ್ಕೂ ಬಹುಮತ ಇಲ್ಲ. ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಂಡು ಎರಡು ಬಾರಿ ಅಧಿಕಾರ ನಡೆಸಿದ್ದು, ಬಿಜೆಪಿ ವಿರೋಧ ಪಕ್ಷದಲ್ಲಿತ್ತು.

ಓದಿ: ಕಲಬುರಗಿ ಜಿಲ್ಲೆಯಲ್ಲಿ ದುಡುಕಿದ ಲವರ್ಸ್​​: ಮರದ ಟೊಂಗೆಯಲ್ಲಿ ನೇಣು ಹಾಕಿಕೊಂಡ ಪ್ರೇಮಿಗಳು!

ಜೆಡಿಎಸ್ ಮತ್ತು ಕಾಂಗ್ರೆಸ್​ನಲ್ಲಿ ಪರಿಶಿಷ್ಟ ಪಂಗಡದ ಯಾವ ಸದಸ್ಯರು ಇಲ್ಲ. ಬಿಜೆಪಿ ಅಧಿಕಾರ ಹಿಡಿಯುವ ಸಲುವಾಗಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ನಿಗದಿಪಡಿಸಿದೆ. ರಾಜ್ಯದಲ್ಲಿ ತಮ್ಮದೇ ಪಕ್ಷದ ಆಡಳಿತದಲ್ಲಿ ಇರುವುದರಿಂದ ವ್ಯವಸ್ಥಿತವಾಗಿ ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.