ETV Bharat / crime

ಮಾರಕಾಸ್ತ್ರಗಳನ್ನು ಹಿಡಿದು ಸುಲಿಗೆ ಆರೋಪ: ನಾಲ್ವರ ಬಂಧನ, ಚಿನ್ನ ವಶಕ್ಕೆ

author img

By

Published : Aug 22, 2021, 1:54 AM IST

ರಾತ್ರಿ ವೇಳೆ ಓಡಾಡುವವರನ್ನು ಹೆದರಿಸಿ, ಸುಲಿಗೆ ಮಾಡುತ್ತಿದ್ದ ನಾಲ್ವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

police arrested four extortionists in Bengaluru
ಮಾರಕಾಸ್ತ್ರಗಳನ್ನು ಹಿಡಿದು ಸುಲಿಗೆ ಆರೋಪ: ನಾಲ್ವರ ಬಂಧನ, ಚಿನ್ನ ವಶಕ್ಕೆ

ಬೆಂಗಳೂರು: ಮಾರಕಾಸ್ತ್ರಗಳನ್ನು ಹಿಡಿದು ಸುಲಿಗೆ ಮಾಡುತ್ತಿದ್ದ ನಾಲ್ವರನ್ನು ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.

ರಾತ್ರಿ ವೇಳೆ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವ ದುಷ್ಕರ್ಮಿಗಳು ಸಾರ್ವಜನಿಕರಿಗೆ ಹೆದರಿಸಿ ಸುಲಿಗೆ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳ ಬಂಧನದಿಂದ ನಾಲ್ಕು ಸುಲಿಗೆ ಪ್ರಕರಣಗಳು ಪತ್ತೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ವಿದೇಶಿ ಪ್ರಜೆಯ ಹೊಟ್ಟೆಯಲ್ಲಿ 11 ಕೋಟಿ ರೂ. ಮೌಲ್ಯದ ಮಾದಕ ವಸ್ತು ಪತ್ತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.