ETV Bharat / crime

ಬೆಂಗಳೂರಲ್ಲಿ ಖತರನಾಕ್ ಮೊಬೈಲ್ ಕಳ್ಳನ ಬಂಧನ

author img

By

Published : Apr 8, 2021, 4:07 AM IST

ಹಗಲು ದರೋಡೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು ಆತನಿಂದ 75 ಸಾವಿರ ರೂ. ಬೆಲೆಯ ವಿವಿಧ ಕಂಪನಿಯ 5 ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೊಬೈಲ್ ಕಳ್ಳ
ಮೊಬೈಲ್ ಕಳ್ಳ

ಬೆಂಗಳೂರು: ವಿಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಹಗಲು ದರೋಡೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದು, ಈತ ದ್ವಿಚಕ್ರ ವಾಹನದಲ್ಲಿ ಬಂದು ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಎಂದು ತಿಳಿದುಬಂದಿದೆ.

ಕಳೆದ ತಿಂಗಳು ವಿಜಯನಗರದ 9ನೇ ಕ್ರಾಸ್ ಬಳಿ ದಂಪತಿ ಮೊಬೈಲ್ ಕಸಿದು ಪರಾರಿಯಾಗಿದ್ದ. ಈ ಬಳಿಕ ಆರೋಪಿ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕನಿಖೆ ನಡಿಸಿದ ಪೊಲೀಸರು ನಿನ್ನೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ಸೂಫಿಯಾನ್ (20) ಬಂಧಿತ ಆರೋಪಿಯಾಗಿದ್ದು, ಈತನ ಬಂಧನದಿಂದ ಬೆಂಗಳೂರು ನಗರದ ವಿವಿಧೆಡೆ ಸುಲಿಗೆ ಮಾಡಿರುವುದು ಬೆಳಕಿಗೆ ಬಂದಿದೆ.

ಆರೋಪಿಯಿಂದ 75 ಸಾವಿರ ರೂ. ಬೆಲೆಯ ವಿವಿಧ ಕಂಪನಿಯ 5 ಮೊಬೈಲ್ ಫೋನ್ ಮತ್ತು ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.