ETV Bharat / entertainment

ಸಡಿಲವಾದ ಉಡುಪಿನಲ್ಲಿ ಕಾಣಿಸಿಕೊಂಡ ಕತ್ರಿನಾ ಕೈಫ್.. ಮತ್ತೆ ಹರಡಿದ ಪ್ರೆಗ್ನೆನ್ಸಿ ವದಂತಿ

author img

By

Published : Aug 16, 2022, 2:32 PM IST

ಸೋಮವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಸಡಿಲವಾದ ಸ್ವೆಟ್‌ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸಿದ್ದ ನಟಿ ಕತ್ರಿನಾ ಕೈಫ್ ಅವರನ್ನು ನೋಡಿದ ನೆಟಿಜನ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರೆಗ್ನೆನ್ಸಿ ವದಂತಿಗಳನ್ನು ಹುಟ್ಟುಹಾಕಿದ್ದಾರೆ.

Katrina Kaif
ಕತ್ರಿನಾ ಕೈಫ್

ಹೈದರಾಬಾದ್ (ತೆಲಂಗಾಣ): ಬಾಲಿವುಡ್ ನಟಿ ಕತ್ರಿನಾ ಕೈಫ್ ಸೋಮವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಅವರು ಸಡಿಲವಾದ ಸ್ವೆಟ್‌ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸಿದ್ದರು. ಅವರನ್ನು ನೋಡಿದ ನೆಟಿಜನ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರೆಗ್ನೆನ್ಸಿ ವದಂತಿಗಳನ್ನು ಹುಟ್ಟುಹಾಕಿದ್ದಾರೆ.

ಈ ಮಧ್ಯೆ, ಸೋಮವಾರ, ಕತ್ರಿನಾ ತಮ್ಮ ಮುಂಬೈನ ನಿವಾಸದಲ್ಲಿ ತ್ರಿವರ್ಣ ಧ್ವಜದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ. ಕತ್ರಿನಾ ಮತ್ತು ವಿಕ್ಕಿ ಸುಮಾರು ಎರಡು ವರ್ಷಗಳ ಕಾಲ ಡೇಟಿಂಗ್ ಮಾಡಿ ಬಳಿಕ ಕಳೆದ ವರ್ಷ ಡಿ.9 ರಂದು ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ ಬರ್ವಾರಾದಲ್ಲಿ ಸ್ನೇಹಿತರು ಹಾಗೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದರು.

ಇದನ್ನೂ ಓದಿ: ಕೈ ಕೈ ಹಿಡಿದು ನಡೆದ ಕತ್ರಿನಾ-ವಿಕ್ಕಿ.. ವಿಡಿಯೋ​ ವೈರಲ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.