ETV Bharat / entertainment

ದೂದ್​ ಪೇಡಾ ದಿಗಂತ್​ ನಟನೆಯ 'ಪೌಡರ್​' ಚಿತ್ರಕ್ಕೆ ಕಿಚ್ಚ ಸುದೀಪ್​ ಸಾಥ್​

author img

By ETV Bharat Karnataka Team

Published : Aug 26, 2023, 12:31 PM IST

ದೂದ್​ ಪೇಡಾ ದಿಗಂತ್ ನಟನೆಯ 'ಪೌಡರ್​' ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು.

Actor Diganth starrer Powder Movie
'ಪೌಡರ್​'

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಯ ಚಿತ್ರಗಳ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿರುವ ನಟ ದೂದ್​ ಪೇಡಾ ದಿಗಂತ್​. ಫಿಟ್ನೆಸ್​ ಹೀರೋ ಅಂತಲೇ ಕರೆಸಿಕೊಂಡಿರುವ ಈ ಹ್ಯಾಂಡ್ಸಮ್​ ಹಂಕ್​ ಹೊಸ ಸಿನಿಮಾದೊಂದಿಗೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ. ಚಿತ್ರಕ್ಕೆ 'ಪೌಡರ್​' ಎಂದು ವಿಭಿನ್ನವಾಗಿ ಟೈಟಲ್​ ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು.

Actor Diganth starrer Powder Movie
'ಪೌಡರ್​' ಚಿತ್ರತಂಡ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್​ ಮಾಡುವ ಮೂಲಕ ಚಾಲನೆ ನೀಡಿದರು. ನಿರ್ಮಾಪಕ ಕಾರ್ತಿಕ್​ ಗೌಡ ಅವರ ತಂದೆ ರಾಮಕೃಷ್ಣೇಗೌಡ ಕ್ಯಾಮರಾ ಸ್ವಿಚ್ಡ್​​ ಆನ್​ ಮಾಡಿದರು. ಈ ಶುಭ ಸಂದರ್ಭದಲ್ಲಿ ದಿಗಂತ್​, ಧನಂಜಯ್, ಸಂತೋಷ್ ಆನಂದರಾಮ್, ರೋಹಿತ್ ಪದಕಿ, ಧೀರೇನ್ ರಾಮಕುಮಾರ್, ನವೀನ್ ಶಂಕರ್, ಕೆ.ಮಂಜು, ಭೂಮಿ ಶೆಟ್ಟಿ, ನಾಗಭೂಷಣ್, ಟಿವಿಎಫ್ ಸಂಸ್ಥಾಪಕರಾದ ಅರುಣಭ್ ಕುಮಾರ್, ವಿಜಯ್ ಕೋಶಿ, ಚೈತನ್ಯ ಕುಂಬಕೋಣಂ ಮುಂತಾದವರು ಹಾಜರಿದ್ದರು.

"ನಮ್ಮ ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ 'ಪೌಡರ್'. ಬಹು ತಾರಾಗಣವಿರುವ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್​ನಲ್ಲಿ ಆರಂಭವಾಗಲಿದೆ. 2024ರ ಏಪ್ರಿಲ್ 5ರಂದು ಚಿತ್ರ‌ವನ್ನು ಬಿಡುಗಡೆಗೊಳಿಸಲು ನಿರ್ಧರಿಸಿದ್ದೇವೆ" ಎಂದು ನಿರ್ಮಾಪಕ ಕಾರ್ತಿಕ್ ಗೌಡ ತಿಳಿಸಿದರು.

Actor Diganth starrer Powder Movie
ಶರ್ಮಿಳಾ ಮಾಂಡ್ರೆ, ದಿಗಂತ್, ಧನ್ಯಾ ರಾಮ್​ಕುಮಾರ್

ಕೆ.ಆರ್‌.ಜಿ ಸ್ಟುಡಿಯೋಸ್ ಜೊತೆಗೂಡಿ ಈ ಚಿತ್ರ ನಿರ್ಮಾಣ ಮಾಡುತ್ತಿರುವುದಕ್ಕೆ ಟಿವಿಎಫ್ ಸಂಸ್ಥೆಯ ಅರುಣಭ್ ಕುಮಾರ್ ಸಂತಸ ವ್ಯಕ್ತಪಡಿಸಿದರು. ಬಳಿಕ ನಿರ್ದೇಶಕ ಜನಾರ್ಧನ್​ ಚಿಕ್ಕಣ್ಣ ಮಾತನಾಡಿ, "ಕಾಮಿಡಿ ಜಾನರ್​ನ ಈ ಕಥೆ ಎಲ್ಲರಿಗೂ ಹಿಡಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು. "ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಟಿವಿಎಫ್ ಎರಡು ದೊಡ್ಡ ಸಂಸ್ಥೆಗಳು ಸೇರಿ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ನಟಿಸುತ್ತಿರುವುದು ನನಗೆ ನಿಜಕ್ಕೂ ಖುಷಿಯ ವಿಚಾರ" ಎಂದು ನಾಯಕ ನಟ ದಿಗಂತ್​ ಹೇಳಿದರು.

Actor Diganth starrer Powder Movie
'ಪೌಡರ್​' ಸಿನಿಮಾದ ಮುಹೂರ್ತ ಸಮಾರಂಭ

ಚಿತ್ರಕಥೆ: 'ಪೌಡರ್' ಒಂದು ಹಾಸ್ಯಮಯ ಚಿತ್ರವಾಗಿದ್ದು, ಒಂದು ಸಣ್ಣ ಊರಿನ ಯುವಕರಿಗೆ ದೊಡ್ಡ ಪ್ರಮಾಣದ ಕೊಕೇನ್ ಸಿಗುತ್ತದೆ. ಒಂದು ಕಡೆ ಆ ಕೊಕೇನ್​ಗಾಗಿ ಹುಡುಕಾಟದಲ್ಲಿರುವ ದುಷ್ಟರ ಗುಂಪು, ಇನ್ನೊಂದು ಕಡೆ ಆ ಕೊಕೇನ್ ಮಾರಿ ದಿಢೀರ್ ಶ್ರೀಮಂತರಾಗಬೇಕೆಂಬ ಯುವಕರ ಗುಂಪು. ಮತ್ತೊಂದು ಕಡೆ ತಮ್ಮ ಅಧಿಪತ್ಯ ಸ್ಥಾಪಿಸುವುದಕ್ಕೆ ಪ್ರಯತ್ನಿಸುತ್ತಿರುವ ಒಬ್ಬ ಮಾಸ್ಟರ್ ಮೈಂಡ್. ಈ ಹಾವು - ಏಣಿ ಆಟದಲ್ಲಿ ಗೆಲ್ಲುವವರು ಯಾರು? ಎಂಬುದನ್ನು ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುತ್ತಿದೆ.

Actor Diganth starrer Powder Movie
'ಪೌಡರ್​' ಚಿತ್ರತಂಡ

ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ಈ ಚಿತ್ರದಲ್ಲಿ ದಿಗಂತ್, ಧನ್ಯಾ ರಾಮ್​ಕುಮಾರ್, ಶರ್ಮಿಳಾ ಮಾಂಡ್ರೆ, ಅನಿರುದ್ಧ್ ಆಚಾರ್ಯ, ರಂಗಾಯಣ ರಘು, ಅಚ್ಯುತ್ ಕುಮಾರ್, ರವಿಶಂಕರ್ ಗೌಡ ಮುಂತಾದವರಿದ್ದಾರೆ. ಈ ಚಿತ್ರಕ್ಕೆ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಸೀನ್ ರೋಲ್ಡನ್ ಸಂಗೀತ ಸಂಯೋಜಿಸುತ್ತಿದ್ದಾರೆ. ದೀಪಕ್ ವೆಂಕಟೇಶನ್ ಕಥೆ ಮತ್ತು ಚಿತ್ರಕಥೆ ಬರೆದಿದ್ದು, ಶಾಂತಿ ಸಾಗರ್ ಅವರ ಛಾಯಾಗ್ರಹಣವಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಕೆ.ಆರ್.ಜಿ ಸ್ಟುಡಿಯೋಸ್, ಟಿವಿಎಫ್ ಮೋಷನ್ ಪಿಕ್ಚರ್ಸ್ ಸಂಸ್ಥೆ ಜೊತೆಯಾಗಿ ನಿರ್ಮಾಣ ಮಾಡುತ್ತಿದೆ. 2024ರ ಏಪ್ರಿಲ್​ 5ರಂದು 'ಪೌಡರ್​' ತೆರೆ ಕಾಣಲಿದೆ.

Actor Diganth starrer Powder Movie
'ಪೌಡರ್​' ಸಿನಿಮಾದ ಮುಹೂರ್ತ ಸಮಾರಂಭ

ಇದನ್ನೂ ಓದಿ: ರಾಷ್ಟ್ರ ಪ್ರಶಸ್ತಿ ಗೆದ್ದ ಖುಷಿಯಲ್ಲಿ ಅಲ್ಲು ಅರ್ಜುನ್​: ಪುಷ್ಪ 2 ರಿಲೀಸ್​ ಯಾವಾಗ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.