ETV Bharat / entertainment

ಕಾವೇರಿ ಮೇಲೆ ಮೊದಲ ಹಕ್ಕು ನಮ್ಮದೇ: ನಟ ಉಪೇಂದ್ರ

author img

By ETV Bharat Karnataka Team

Published : Sep 27, 2023, 4:41 PM IST

Upendra tweet on Cauvery: ಕಾವೇರಿ ವಿಚಾರವಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಉಪೇಂದ್ರ ಟ್ವೀಟ್​ ಮಾಡಿದ್ದಾರೆ.

actor Upendra
ನಟ ಉಪೇಂದ್ರ

ರಾಜ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಈಗಾಗಲೇ ರಾಜ್ಯದ ಹಲವೆಡೆ ಪ್ರತಿಭಟನೆ, ಬಂದ್​ ನಡೆದಿದೆ. ಕನ್ನಡ ಚಿತ್ರರಂಗ ಕೂಡ ಹೋರಾಟಕ್ಕೆ ಬೆಂಬಲ ಸೂಚಿಸಿದೆ. ಇದೀಗ ನಟ, ನಿರ್ದೇಶಕ ರಿಯಲ್​ ಸ್ಟಾರ್ ಉಪೇಂದ್ರ ಕೂಡ ಟ್ವೀಟ್​ ಮೂಲಕ ಕಾವೇರಿ ಮೇಲೆ ಮೊದಲ ಹಕ್ಕು ನಮ್ಮದೇ ಎಂದು ತಿಳಿಸಿ, ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ನಟ ಉಪೇಂದ್ರ ಟ್ವೀಟ್​: ನಟ ಉಪೇಂದ್ರ ಅವರು ಸಾಮಾಜಿಕ ಜಾಲತಾಣ ವೇದಿಕೆ X (ಹಿಂದಿನ ಟ್ವಿಟರ್​​) ನಲ್ಲಿ ಕನ್ನಡದ ಖ್ಯಾತ ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಬರಹವನ್ನು ಹಂಚಿಕೊಂಡಿದ್ದು, ಅದಕ್ಕೆ 'ಕಾವೇರಿ ವಿವಾದ' ಎಂದು ಶೀರ್ಷಿಕೆ ಕೊಟ್ಟಿದ್ದಾರೆ. ಜೊತೆಗೆ ಈ ಪೋಸ್ಟ್​​ಗೆ ಕೈಮುಗಿಯುವ ಎಮೋಜಿಯನ್ನೂ ಹಾಕಿಕೊಂಡಿದ್ದಾರೆ.

ಪೋಸ್ಟ್​​ನಲ್ಲಿ, ''ಯಾವುದೇ ಭೂಭಾಗಕ್ಕೆ ಅದರದ್ದೇ ಆದ ಅನುಕೂಲಗಳು ಮತ್ತು ಅನಾನುಕೂಲಗಳು ಇರುತ್ತವೆ. ಅಲ್ಲಿನ ನೈಸರ್ಗಿಕ ಸಂಪತ್ತಿನ ಒಡೆತನ ಮತ್ತು ಅದರ ಮೊದಲ ಬಳಕೆಯ ಹಕ್ಕು ಆಯಾ ಪ್ರದೇಶದ ಜನಸಮುದಾಯದ್ದಾಗಿರುತ್ತದೆ. ಭೂಮಿಯ ಮೇಲಿನ ಖನಿಜ ಸಂಪತ್ತು, ಭೂಮಿಯ ಮೇಲಿನ ಅರಣ್ಯ ಉತ್ಪನ್ನಗಳು ಹೇಗೆ ಆಯಾ ಸರ್ಕಾರದ ಆಸ್ತಿಯೋ, ಹಾಗೆಯೇ ಆಪ್ರದೇಶದಲ್ಲಿ ಸುರಿಯುವ ಮಳೆ ಹಾಗೂ ಹರಿಯುವ ನೀರಿಗೂ ಆ ಪ್ರದೇಶದ ಜೀವ ವೈವಿಧ್ಯವೇ ಪ್ರಥಮ ಹಕ್ಕುದಾರ ಆಗಿರುತ್ತಾನೆ. ಹಾಗಾಗಿ ಕಾವೇರಿ ನೀರಿನ ಮೊದಲ ಹಕ್ಕು ನಿರ್ವಿವಾದವಾಗಿ ಕರ್ನಾಟಕ್ಕದ್ದೇ ಆಗಿರುತ್ತದೆ. ನಮ್ಮ ಅಗತ್ಯತೆಯನ್ನು ಪೂರೈಸಿದ ನಂತರವಷ್ಟೇ ಇತರರಿಗೆ ನೆರವಾಗುವ ಪ್ರಶ್ನೆ ಉದ್ಭವಿಸುತ್ತದೆ. -ಕೆ.ಪಿ ಪೂರ್ಣಚಂದ್ರ ತೇಜಸ್ವಿ'' ಎಂದು ಬರೆಯಲಾಗಿದೆ.

  • ಈಗಾಗಲೇ ಸರಿಯಾಗಿ ಮಳೆಯಾಗದೇ ನೀರಿನ ಅಭಾವ ಸಾಕಷ್ಟು ಇರುವುದರಿಂದ ಕಾವೇರಿ ನೀರಿನ ಹಂಚಿಕೆಯ ವಿಷಯದಲ್ಲಿ ನಮ್ಮ ರೈತಾಪಿ ಬಾಂಧವರಿಗೆ ಸಮಸ್ಯೆ ಆಗದಂತೆ ತಜ್ಞರು ನಿರ್ಣಯ ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.
    ನಮ್ಮ ರೈತರ ನೀರಿನ ಸಮಸ್ಯೆಗೆ ಒಂದು ಶಾಶ್ವತ ಪರಿಹಾರವನ್ನೂ ಆದಷ್ಟು ಬೇಗ ತಜ್ಞರು ಹುಡುಕಿ ಕಾರ್ಯರೂಪಕ್ಕೆ ತರಲಿ ಎಂದು ಆಶಿಸೋಣ

    — Upendra (@nimmaupendra) September 20, 2023 " class="align-text-top noRightClick twitterSection" data=" ">

ಈ ಮೊದಲಿನ ಟ್ವೀಟ್: ಇದಕ್ಕೂ ಮುನ್ನ ಸೆಪ್ಟೆಂಬರ್​ 20 ರಂದು ಕೂಡ ನಟ ಉಪೇಂದ್ರ ಕಾವೇರಿ ಕುರಿತು ಟ್ವೀಟ್​ ಮಾಡಿದ್ದರು. ''ಈಗಾಗಲೇ ಸರಿಯಾಗಿ ಮಳೆಯಾಗದೇ ನೀರಿನ ಅಭಾವ ಸಾಕಷ್ಟು ಇರುವುದರಿಂದ ಕಾವೇರಿ ನೀರಿನ ಹಂಚಿಕೆಯ ವಿಷಯದಲ್ಲಿ ನಮ್ಮ ರೈತಾಪಿ ಬಾಂಧವರಿಗೆ ಸಮಸ್ಯೆ ಆಗದಂತೆ ತಜ್ಞರು ನಿರ್ಣಯ ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ. ನಮ್ಮ ರೈತರ ನೀರಿನ ಸಮಸ್ಯೆಗೆ ಒಂದು ಶಾಶ್ವತ ಪರಿಹಾರವನ್ನೂ ಆದಷ್ಟು ಬೇಗ ತಜ್ಞರು ಹುಡುಕಿ ಕಾರ್ಯರೂಪಕ್ಕೆ ತರಲಿ ಎಂದು ಆಶಿಸೋಣ'' ಎಂದು ಟ್ವೀಟ್​​ ಮಾಡಿದ್ದರು.

ಇದನ್ನೂ ಓದಿ: ಆಸ್ಕರ್ 2024: ನಾಮನಿರ್ದೇಶನ ಪ್ರಕ್ರಿಯೆಗೆ ಮಲಯಾಳಂನ '2018: ಎವ್ರಿಒನ್​​ ಈಸ್ ಎ ಹೀರೋ' ಎಂಟ್ರಿ

ನಿನ್ನೆ ಅಭಿನಯ ಚಕ್ರವರ್ತಿ ಸುದೀಪ್​ ಕೂಡ ಟ್ವೀಟ್​ ಮೂಲಕ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಮಳೆಯ ಅಭಾವದಿಂದ ಸಮಸ್ಯೆ ಸೃಷ್ಟಿಯಾಗಿದೆ. ನಾವು ಕಾವೇರಿಯನ್ನೇ ನಂಬಿದ್ದೇವೆ. ಸಂಬಂಧಪಟ್ಟ ಸಮಿತಿಯವರು ರಾಜ್ಯದ ಬರ ಪರಿಸ್ಥಿತಿಯನ್ನು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು. ನಮ್ಮ ಮುಖ್ಯಮಂತ್ರಿಗಳು ತಮಿಳುನಾಡು ಸಿಎಂ ಜೊತೆ ಮಾತುಕತೆ ನಡೆಸಬೇಕು. ಆದಷ್ಟು ಬೇಗ ಸಮಸ್ಯೆ ಬಗೆಹರಿಯಲಿ. ಕನ್ನಡದ ನೆಲ, ಜಲ, ಭಾಷೆಯ ಎಲ್ಲಾ ಹೋರಾಟಗಳಲ್ಲಿಯೂ ನಾನು ಸದಾ ನಿಮ್ಮೊಂದಿಗಿದ್ದೇನೆ ಎಂದು ಕಿಚ್ಚ ಸುದೀಪ್​ ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ: ಕನ್ನಡದ ನೆಲ, ಜಲ, ಭಾಷೆಯ ಎಲ್ಲಾ ಹೋರಾಟಗಳಲ್ಲೂ ಸದಾ ನಿಮ್ಮೊಂದಿಗೆ: ಕಿಚ್ಚ ಸುದೀಪ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.