ETV Bharat / entertainment

ಹೆಸರಿಡದ ಚಿತ್ರಕ್ಕೆ ಗ್ರೀನ್​​ ಸಿಗ್ನಲ್​ ಕೊಟ್ಟ ಕ್ರೇಜಿಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್

author img

By

Published : Dec 13, 2022, 12:56 PM IST

ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ನಿರ್ದೇಶನದಲ್ಲಿ ವಿಕ್ರಮ್ ರವಿಚಂದ್ರನ್ ಹೊಸ ಸಿನಿಮಾ ಮಾಡಲಿದ್ದಾರೆ.

actor vikram ravichandran new movie details
ಕಾರ್ತಿಕ್ ರಾಜನ್ ನಿರ್ದೇಶನದಲ್ಲಿ ವಿಕ್ರಮ್ ರವಿಚಂದ್ರನ್ ಹೊಸ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ತ್ರಿವಿಕ್ರಮ ಸಿನಿಮಾ ಮೂಲಕ ಭರವಸೆ ನಟನಾಗಿ ಗಮನ ಸೆಳೆದ ನಟ ವಿಕ್ರಮ್ ರವಿಚಂದ್ರನ್. ಚೊಚ್ಚಲ ಚಿತ್ರದಲ್ಲಿ ಆ್ಯಕ್ಟಿಂಗ್, ಡ್ಯಾನ್ಸ್ ಮೂಲಕ ಕನ್ನಡಿಗರ ಹೃದಯ ಕದ್ದ ಕ್ರೇಜಿಸ್ಟಾರ್ ಪುತ್ರ ವಿಕ್ರಮ್ ರವಿಚಂದ್ರನ್ ಮತ್ತೊಂದು ಸಿನಿಮಾಗೆ ಸಜ್ಜಾಗಿದ್ದಾರೆ. ಈ ಬಾರಿ ಗ್ಯಾಂಗ್​​​ಸ್ಟರ್ ಸಬ್ಜೆಕ್ಟ್ ಸಿನಿಮಾ ಆಯ್ಕೆ ಮಾಡಿಕೊಂಡಿದ್ದು, ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿದೆ.

ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ನಿರ್ದೇಶನದ ಮೊದಲ ಸಿನಿಮಾ ಇದಾಗಿದೆ. ಗ್ಯಾಂಗ್​ಸ್ಟರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಕಥೆ ಕೇಳಿ ವಿಕ್ರಮ್ ರವಿಚಂದ್ರನ್ ಗ್ರೀನ್ ಸಿಗ್ನಲ್ ನೀಡಿದ್ದು, ಎರಡನೇ ಸಿನಿಮಾದಲ್ಲಿ ಮಾಸ್ ಹೀರೋ ಆಗಿ ವಿಕ್ರಮ್ ತೆರೆ ಮೇಲೆ ಮಿಂಚಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ಕನ್ನಡದಲ್ಲಿ 'ಹೆಡ್ ಬುಷ್' ಸಿನಿಮಾದಲ್ಲಿ ಸಹ ನಿರ್ದೇಶಕನಾಗಿ ಕೆಲಸ ಮಾಡಿರುವ ಕಾರ್ತಿಕ್ ರಾಜನ್ ಇದೇ ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಡುತ್ತಿದ್ದಾರೆ.

ಚಿತ್ರದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಸದ್ಯದಲ್ಲೇ ಟೈಟಲ್, ತಾರಾಬಳಗ, ತಂತ್ರಜ್ಞರು ಹಾಗೂ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳೋದಾಗಿ ನಿರ್ದೇಶಕ ಕಾರ್ತಿಕ್ ರಾಜನ್ ತಿಳಿಸಿದ್ದಾರೆ. ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಿತ್ರದಲ್ಲಿ ಸಂಗೀತ ನಿರ್ದೇಶನ ಹೊಣೆ ಹೊತ್ತಿದ್ದಾರೆ.

ಇದನ್ನೂ ಓದಿ: ಜನ್ಮದಿನದ ಸಂಭ್ರಮದಲ್ಲಿ ಚಂದನದ ಗೊಂಬೆ.. ಭಾರತೀಯ ಚಿತ್ರರಂಗದ ಯಶಸ್ವಿ ನಟಿ ಜೂಲಿ ಲಕ್ಷ್ಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.