ETV Bharat / entertainment

'ಕಾಂತಾರ ನೋಡುವ ಕುತೂಹಲ ಹೆಚ್ಚಾಗಿದೆ': ಬಾಲಿವುಡ್​​ ನಟಿ ಕಂಗನಾ ರಣಾವತ್

author img

By

Published : Oct 18, 2022, 6:44 PM IST

'ಕಾಂತಾರ ಸಿನಿಮಾ ಕುತೂಹಲ ಹೆಚ್ಚಿಸಿದೆ. ಸಿನಿಮಾ ನೋಡಲು ಹೆಚ್ಚು ಕಾಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಸಿನಿಮಾ ನೋಡುವೆ' ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ತಿಳಿಸಿದ್ದಾರೆ.

Actress Kangana Ranaut curious to watch Kantara movie
ಕಾಂತಾರ ಕುರಿತು ಬಾಲಿವುಡ್​​ ನಟಿ ಕಂಗನಾ ರಣಾವತ್ ಪೋಸ್ಟ್

ಕನ್ನಡ ಮಾತ್ರವಲ್ಲದೇ ಭಾರತೀಯ ಚಿತ್ರರಂಗದ ದಶದಿಕ್ಕುಗಳಿಂದಲೂ ಕಾಂತಾರ ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದವರು ಕಾಂತಾರ ನೋಡಿ ಮೆಚ್ಚಿಕೊಂಡಿದ್ದಾರೆ.

ಬೇರೆ ಬೇರೆ ಚಿತ್ರರಂಗದ ಸೂಪರ್​ ಸ್ಟಾರ್​ಗಳು ಸಹ ಸಿನಿಮಾ ನೋಡಿ ಅನುಭವ ಹಂಚಿಕೊಳ್ಳುತ್ತಿದ್ದಾರೆ. 'ಕಾಂತಾರ ಸಿನಿಮಾ ಕುತೂಹಲ ಹೆಚ್ಚಿಸಿದೆ. ಸಿನಿಮಾ ನೋಡಲು ಹೆಚ್ಚು ಕಾಯಲು ಸಾಧ್ಯವಿಲ್ಲ. ಶೀಘ್ರದಲ್ಲೇ ಸಿನಿಮಾ ನೋಡುವೆ' ಎಂದು ಬಾಲಿವುಡ್​​ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾಗಳನ್ನು, ಸಿನಿಮಾ ರಂಗದವರನ್ನು ತೆಗಳುತ್ತಾ ಬಂದಿರುವ ನಟಿ ಕಂಗನಾ ರಣಾವತ್, ಇತ್ತೀಚಿನ ದಿನಗಳಲ್ಲಿ ದಕ್ಷಿಣ ಭಾರತದ ಸಿನಿಮಾಗಳನ್ನು, ಕಲಾವಿದರನ್ನು ಹೊಗಳುತ್ತಿದ್ದಾರೆ. ಇದೀಗ ಕಾಂತಾರ ಸಿನಿಮಾ ನೋಡುವ ಕುತೂಹಲ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 'OMG... ನನ್ನನ್ನು ತವರಿಗೆ ಕರೆದೊಯ್ತು ಕಾಂತಾರ'.. ತುಳುನಾಡ ಬೆಡಗಿ ಶಿಲ್ಪಾ ಶೆಟ್ಟಿ ಮೆಚ್ಚುಗೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.