ETV Bharat / entertainment

ಹ್ಯಾಪಿ ಹುಟ್ದಬ್ಬ 'ಮಿಸಸ್​ ರಾಮಾಚಾರಿ'! ದೂರದೂರಿನಲ್ಲಿ ಸೆಲೆಬ್ರೇಷನ್​, ಫ್ಯಾನ್ಸ್​ಗೆ ನಿರಾಶೆ

author img

By

Published : Mar 7, 2023, 10:31 AM IST

ನಟಿ ರಾಧಿಕಾ ಪಂಡಿತ್ 39ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

birthday
ರಾಧಿಕಾ ಪಂಡಿತ್

ಕನ್ನಡ ಚಿತ್ರರಂಗದ ಬ್ಯೂಟಿಫುಲ್​ ತಾರೆ ರಾಧಿಕಾ ಪಂಡಿತ್​ ಅವರು ಕೆಲವು ವರ್ಷಗಳಿಂದ ಸಿನಿರಂಗದಿಂದ ದೂರವೇ ಉಳಿದಿದ್ದಾರೆ. ಆದರೆ ಅಭಿಮಾನಿಗಳಿಗೆ ಅವರ ಮೇಲಿನ ಕ್ರೇಜ್ ಕಮ್ಮಿಯಾಗಿಲ್ಲ. ಸ್ಯಾಂಡಲ್​ವುಡ್​ ರಾಕಿಂಗ್​ ಸ್ಟಾರ್​​ ಯಶ್​ ಅವರನ್ನು ಮದುವೆಯಾದಾಗಿನಿಂದ ಸಂಸಾರ, ಮಕ್ಕಳು ಅಂತ ಫುಲ್ ಬ್ಯುಸಿಯಾಗಿದ್ದಾರೆ. ಆದರೆ ತಮ್ಮ ಫ್ಯಾನ್ಸ್​ ಜೊತೆ ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಂಪರ್ಕದಲ್ಲಿದ್ದಾರೆ.

ಇಂದು ಮಿಸಸ್​ ರಾಮಾಚಾರಿ 39ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಜನ್ಮದಿನವನ್ನು ಸ್ಪೆಷಲ್​ ಆಗಿಯೇ ಆಚರಿಸಿಕೊಳ್ಳುತ್ತಿದ್ದಾರೆ. ಈ ಪ್ರಯುಕ್ತ ಒಂದು ದಿನ ಮುಂಚಿತವಾಗಿಯೇ ಅಭಿಮಾನಿಗಳಿಗೆ ಅಪ್ಡೇಟ್​ ನೀಡಿದ್ದಾರೆ. ಪ್ರತಿ ವರ್ಷ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಸೆಲೆಬ್ರೇಟ್​ ಮಾಡುತ್ತಿದ್ದರು. ಈ ಬಾರಿ ತಾವು ಮನೆಯಿಂದ ದೂರ ಇರುವುದಾಗಿ ತಿಳಿಸಿದ್ದಾರೆ. ದೂರದ ಊರಿನಲ್ಲಿ ಬರ್ತ್ಡೇ ಆಚರಿಸಿಕೊಳ್ಳುತ್ತಿರುವುದಾಗಿ ಇನ್​ಸ್ಟಾಗ್ರಾಂ ಪೋಸ್ಟ್​ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಮಸಾಲೆ ವ್ಯಾಪಾರದ ಕಡೆ ಇದ್ದ ಗಮನ.. ಹೀರೋ ಆಗುವ ಕನಸು ಕಂಡಿರಲಿಲ್ಲವಂತೆ ಟಾಲಿವುಡ್ ಸ್ಟಾರ್ ವೆಂಕಟೇಶ್​​​​

"ಇದೇ ಮೊದಲ ಬಾರಿಗೆ ಮನೆಯಿಂದ ದೂರ ಹೋಗಿ ನನ್ನ ಬರ್ತ್​ಡೇ ಸೆಲೆಬ್ರೇಟ್​ ಮಾಡುತ್ತಿದ್ದೇನೆ. ನನ್ನ ಪ್ರೀತಿಯ ಫ್ಯಾನ್ಸ್​ಗೆ ಇದರಿಂದ ಬೇಸರ ಆಗಬಹುದೆಂದು ನನಗೆ ಗೊತ್ತಿದೆ. ಹಾಗಾಗಿ ಒಂದು ಆ್ಯಕ್ಟಿವಿಟಿ ಪ್ಲ್ಯಾನ್​ ಮಾಡಿದ್ದೇನೆ. ಆ ಮೂಲಕ ನಿಮ್ಮ ಸಂಪರ್ಕದಲ್ಲಿ ನಾನಿರಬಹುದು" ಎಂದು ರಾಧಿಕಾ ತಮ್ಮ ಫೋಟೋ ಹಂಚಿಕೊಂಡು ಕ್ಯಾಪ್ಶನ್​ ಬರೆದುಕೊಂಡಿದ್ದಾರೆ.​

ಈ ಪೋಸ್ಟ್​ಗೆ ಅಭಿಮಾನಿಗಳು ಕಮೆಂಟ್​ಗಳ ಸುರಿಮಳೆಯಾಗಿದೆ. ಫ್ಯಾನ್ಸ್ ಒಟ್ಟು ಸೇರಿ ನಟಿಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ. ರಾಧಿಕಾ ತಮ್ಮ ಹುಟ್ಟುಹಬ್ಬಕ್ಕೆ ಎಲ್ಲಿಗೆ ತೆರಳುತ್ತಿದ್ದಾರೆ ಎಂಬುದು ರಿವೀಲ್​ ಆಗಿಲ್ಲ. ಕೆಲವೊಂದಿಷ್ಟು ಅಭಿಮಾನಿಗಳು ತಮ್ಮ ನೆಚ್ಚಿನ ನಟಿಯ ಜನ್ಮದಿನದ ಪ್ರಯುಕ್ತ ಹಲವು ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ.

ದುಬೈನಲ್ಲಿ ಯಶ್ ಹುಟ್ಟುಹಬ್ಬ​: ಜನವರಿ 8 ರಂದು ಯಶ್​ ಜನ್ಮದಿನವಿತ್ತು. ಆ ದಿನ ಅವರೂ​ ಕೂಡ ತಮ್ಮ ಅಭಿಮಾನಿಗಳ ಕೈಗೆ ಸಿಕ್ಕಿರಲಿಲ್ಲ. ಕುಟುಂಬ ಮತ್ತು ಆಪ್ತ ಸ್ನೇಹಿತರೊಂದಿಗೆ ದುಬೈನಲ್ಲಿ ಬರ್ತ್​ಡೇ ಸೆಲೆಬ್ರೇಟ್​ ಮಾಡಿಕೊಂಡಿದ್ದರು.

ಚಂದನವನದ ಮಾದರಿ ದಂಪತಿ: ಯಶ್​ ಮತ್ತು ರಾಧಿಕಾ ಮೊಗ್ಗಿನ ಮನಸು ಸಿನಿಮಾ ಮೂಲಕ ಜೊತೆಯಾಗಿ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟರು. ಆ ಬಳಿಕ ಈ ಜೋಡಿ ಅಭಿನಯಿಸಿದ ಎಲ್ಲಾ ಸಿನಿಮಾಗಳು ಸೂಪರ್​ ಹಿಟ್​ ಆಗಿದ್ದವು. ಅದಾಗಲೇ ಇವರಿಬ್ಬರು ಜಸ್ಟ್​ ಪ್ರೆಂಡ್ಸ್​ ಅಲ್ಲ ಎಂಬುದು ಕನ್ನಡ ಪ್ರೇಕ್ಷಕರಿಗೆ ಅರಿವಾಗಿತ್ತು. ಮಿಸ್ಟರ್​ ಅಂಡ್​ ಮಿಸಸ್​ ರಾಮಾಚಾರಿ ಚಿತ್ರ ಈ ಎಲ್ಲಾ ಗಾಸಿಪ್​ಗಳಿಗೆ ವಿದಾಯ ಹೇಳಿ ಕನ್ನಡಕ್ಕೆ ಹೊಸ ತಾರಾ ಜೋಡಿಯನ್ನು ನೀಡುವ ಭರವಸೆ ಕೊಟ್ಟಿತು. ಇದಾಗಿ ಕೆಲವೇ ದಿನಗಳಲ್ಲಿ ಗೋವಾದಲ್ಲಿ ವಿಜೃಂಭಣೆಯಿಂದ ನಿಶ್ಚಿತಾರ್ಥ ಮಾಡಿಕೊಂಡರು. ಡಿಸೆಂಬರ್​ 9, 2016ರಂದು ಸಪ್ತಪದಿ ತುಳಿದು ವೈವಾಹಿಕ ಜೀವನಕ್ಕೆ ಮುನ್ನುಡಿ ಬರೆದರು. ತಾರಾ ದಂಪತಿಗೆ ಐರಾ ಮತ್ತು ಯಥರ್ವ ಎಂಬ ಇಬ್ಬರು ಮುದ್ದು ಮಕ್ಕಳಿದ್ದಾರೆ.

ಇದನ್ನೂ ಓದಿ: ಟಾಲಿವುಡ್​ಗೆ ಕಾಲಿಟ್ಟ ಬಿಟೌನ್​ ಬೆಡಗಿ; ಎನ್​ಟಿಆರ್​ ಸಿನಿಮಾಗೆ ಜಾನ್ವಿ ಕಪೂರ್​ ನಾಯಕಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.