ETV Bharat / entertainment

ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣ: ರಾಜ್ ಕುಂದ್ರಾಗೆ ನಿರೀಕ್ಷಣಾ ಜಾಮೀನು

author img

By

Published : Dec 13, 2022, 3:00 PM IST

Updated : Dec 13, 2022, 3:11 PM IST

ಅಶ್ಲೀಲ ವಿಡಿಯೋ ತಯಾರಿಸಿದ ಪ್ರಕರಣದಲ್ಲಿ ಉದ್ಯಮಿ ರಾಜ್ ಕುಂದ್ರಾ ಹಾಗು ಮತ್ತಿಬ್ಬರು ನಟಿಯರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

anticipatory bail to businessman Raj Kundra
ರಾಜ್ ಕುಂದ್ರಾಗೆ ನಿರೀಕ್ಷಣಾ ಜಾಮೀನು

ಅಶ್ಲೀಲ ವಿಡಿಯೋ ತಯಾರಿಕೆ ಹಿನ್ನೆಲೆಯಲ್ಲಿ ದಾಖಲಾದ ಪ್ರಥಮ ವರ್ತಮಾನ ವರದಿ (ಎಫ್‌ಐಆರ್‌)ಗೆ ಸಂಬಂಧಿಸಿದಂತೆ ಬಾಲಿವುಡ್​ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಜಾಮೀನು ನೀಡಿದೆ. ನಟಿಯರಾದ ಶೆರ್ಲಿನ್ ಚೋಪ್ರಾ, ಪೂನಂ ಪಾಂಡೆ ಸೇರಿದಂತೆ ಇತರರಿಗೂ ನಿರೀಕ್ಷಣಾ ಜಾಮೀನು ಸಿಕ್ಕಿದೆ. ನ್ಯಾಯಮೂರ್ತಿಗಳಾದ ಎಂ ಕೆ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರಿದ್ದ ನ್ಯಾಯಪೀಠವು ಆರೋಪಿಗಳು ತನಿಖೆಗೆ ಸಹಕರಿಸುವಂತೆ ಸೂಚಿಸಿದೆ.

ಎರಡೂ ಕಡೆಯ ವಕೀಲರ ವಾದ ಆಲಿಸಿದ ಬಳಿಕ ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ. ಅರ್ಜಿದಾರರೊಬ್ಬರ ಪರ ವಾದಿಸಿದ ಹಿರಿಯ ವಕೀಲ ಆರ್.ಬಸಂತ್, ಪ್ರಕರಣದಲ್ಲಿ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ಆರೋಪಿಗಳು ತನಿಖೆಗೆ ಪೊಲೀಸರಿಗೆ ಸಹಕರಿಸುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ದುನಿಯಾ ವಿಜಯ್ - ಪಾನಿಪುರಿ ಕಿಟ್ಟಿ ಜಗಳ; ಕೇಸ್ ರೀ ಓಪನ್ ಮಾಡಿಸಿದ ವಿಜಯ್

ರಾಜ್​ ಕುಂದ್ರಾ ವಿರುದ್ಧ ಅಶ್ಲೀಲ ವಿಡಿಯೋಗಳನ್ನು ವಿತರಿಸಿದ/ಪ್ರಸಾರ ಮಾಡಿದ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಎಫ್‌ಐಆರ್‌ನಲ್ಲಿ ಶೆರ್ಲಿನ್ ಚೋಪ್ರಾ, ಪೂನಂ ಪಾಂಡೆ ಅವರನ್ನೂ ಸಹ ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಆರೋಪಿಗಳೆಂದು ಹೆಸರಿಸಲಾದ ನಟಿಯರು ವಿಡಿಯೋ ಪ್ರಸಾರದಲ್ಲಿ ಯಾವುದೇ ರೀತಿಯಲ್ಲಿಯೂ ಭಾಗಿಯಾಗಿಲ್ಲ ಎಂದು ಕುಂದ್ರಾ ಅವರ ವಕೀಲರು ಕೋರ್ಟ್‌ಗೆ ತಿಳಿಸಿದರು.

Last Updated : Dec 13, 2022, 3:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.