ETV Bharat / entertainment

ಬಾನ ದಾರಿಯಲ್ಲಿ.."ನಿನ್ನನ್ನು ನೋಡಿದ ನಂತರ" ಹಾಡು ಬಿಡುಗಡೆ

author img

By

Published : Jan 5, 2023, 5:47 PM IST

ಬಾನ ದಾರಿಯಲ್ಲಿ ಚಿತ್ರೀಕರಣ ಮುಕ್ತಾಯ - ಕ್ರಿಕೆಟ್ ಪ್ಲೇಯರ್ ಆಗಿ ಗಣಿ - "ನಿನ್ನನ್ನು ನೋಡಿದ ನಂತರ" ಹಾಡು ಬಿಡುಗಡೆ.

banadariyalli movie song
ಬಾನ ದಾರಿಯಲ್ಲಿ ಸಿನಿಮಾ ಹಾಡು ಬಿಡುಗಡೆ

'ಬಾನ ದಾರಿಯಲ್ಲಿ'‌ ಈ ಪದ ಕೇಳಿದ್ರೆ ನಮಗೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನೆನಪಾಗುತ್ತಾರೆ. ಈ ಪದವೀಗ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಹೊಸ ಚಿತ್ರದ ಟೈಟಲ್. ನಿರ್ದೇಶಕ ಪ್ರೀತಂ ಗುಬ್ಬಿ ಮತ್ತು ಗಣಿ ಕಾಂಬಿನೇಷನ್​​ನಲ್ಲಿ ಮೂಡಿ ಬರುತ್ತಿರುವ ಸ್ಯಾಂಡಲ್​ವುಡ್​ನ ಬಹು ನಿರೀಕ್ಷಿತ ಚಿತ್ರ. ಈ ಬಾನದಾರಿಯಲ್ಲಿ ಚಿತ್ರದ ಮೊದಲ ಹಾಡು ಬಿಡುಗಡೆ ಆಗಿದ್ದು, ಗಣಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಸಾಹಿತಿ ಕವಿರಾಜ್ ಅವರು ಬರೆದಿರುವ "ನಿನ್ನನ್ನು ನೋಡಿದ ನಂತರ" ಎಂಬ ಗೀತೆ ಆನಂದ್ ಆಡಿಯೋ ಮೂಲಕ ಬಿಡುಗಡೆ ಆಗಿದೆ. ಹಿರಿಯ ಪತ್ರಕರ್ತ ಬಿ.ಎನ್ ಸುಬ್ರಹ್ಮಣ್ಯ ಈ ಹಾಡನ್ನು ಬಿಡುಗಡೆ ಮಾಡಿ ಬಾನ ದಾರಿಯಲ್ಲಿ ಚಿತ್ರದ ಯಶಸ್ವಿಗೆ ಶುಭ ಕೋರಿದರು.

ಲವ್ ಸ್ಟೋರಿ ಜೊತೆಗೆ ಕ್ರಿಕೆಟ್ ಕಥೆ: ನಿರ್ದೇಶಕ ಪ್ರೀತಂ ಗುಬ್ಬಿ, ಇದು ಕೋವಿಡ್​ ಸಮಯದಲ್ಲಿ ಅಂದರೆ ಸುಮಾರು ಎರಡೂವರೆ ವರ್ಷಗಳ ಹಿಂದೆ ನಾನು ಹಾಗೂ ಪ್ರೀತಾ ಜಯರಾಂ ಸೇರಿ ಮಾಡಿದ ಕಥೆ. ಈಗ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡುತ್ತಿದ್ದೇವೆ. ಈ ಚಿತ್ರ ಲವ್ ಸ್ಟೋರಿ ಜೊತೆಗೆ ಕ್ರಿಕೆಟ್ ಕಥೆ ಹೊಂದಿದೆ ಎಂದರು.

banadariyalli movie song
ಬಾನ ದಾರಿಯಲ್ಲಿ ತಂಡ

ಆನಂದ್ ಆಡಿಯೋಗೆ ಧನ್ಯವಾದ ಅರ್ಪಿಸಿದ ಗಣಿ: ಗೋಲ್ಡನ್ ಸ್ಟಾರ್ ಗಣೇಶ್ ಮಾತನಾಡಿ, ನಾನು ಮೊದಲು ಆನಂದ್ ಆಡಿಯೋ ಅವರಿಗೆ ಧನ್ಯವಾದ ಹೇಳುತ್ತೇನೆ. ಏಕೆಂದರೆ ನನ್ನ ಸಿನಿ ಜರ್ನಿಯಲ್ಲೇ ಅತಿ ಹೆಚ್ಚು ಮೊತ್ತ ಕೊಟ್ಟು ಈ ಚಿತ್ರದ ಆಡಿಯೋ ರೈಟ್ಸ್ ಪಡೆದುಕೊಂಡಿದ್ದಾರೆ ಎಂದರು. ಇನ್ನು ಈ ಹಾಡನ್ನು ಕವಿರಾಜ್ ಬರೆದಿದ್ದಾರೆ. ಹುಡುಗಾಟ ಚಿತ್ರದ ಮಂದಾಕಿನಿಯೇ ಹಾಡಿನಿಂದ ಶುರುವಾದ ನಮ್ಮ ಜರ್ನಿ ಈ ಹಾಡಿನ ತನಕ ಮುಂದುವರೆದಿದೆ. ನನ್ನ ಅನೇಕ ಹಿಟ್ ಹಾಡುಗಳನ್ನು ಕವಿರಾಜ್ ಅವರೇ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ಈ ಚಿತ್ರದ ಮತ್ತೊಂದು ಹೈಲೆಟ್. ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ಉತ್ತಮವಾಗಿ ನಿರ್ದೇಶಿಸಿದ್ದಾರೆ ಎಂದು ತಿಳಿಸಿದರು. ಈ ಚಿತ್ರದ ಡಬ್ಬಿಂಗ್ ಮಾಡಬೇಕಾದರೆ ಕೆಲವೊಮ್ಮೆ ಬಹಳ ಭಾವುಕನಾದೆ ಎಂದೂ ಕೂಡ ತಿಳಿಸಿದರು.

  • " class="align-text-top noRightClick twitterSection" data="">

ನಾಯಕಿಯರಾದ ರುಕ್ಮಿಣಿ ವಸಂತ್ ಹಾಗು ರೀಷ್ಮಾ ನಾಣಯ್ಯ ಸೇರಿದಂತೆ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಪ್ರೀತಾ ಜಯರಾಮ್ - ಪ್ರೀತಂ ಗುಬ್ಬಿ ಸೇರಿ ಒಳ್ಳೆಯ ಕಥೆ ಬರೆದಿದ್ದಾರೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಅದ್ಭುತವಾಗಿದೆ. ಕೀನ್ಯಾ ಭಾಗದ ಚಿತ್ರೀಕರಣವನ್ನು ಮರೆಯಲು ಸಾಧ್ಯವಾಗುತ್ತಿಲ್ಲ. ನಾನು ಈ ಚಿತ್ರದಲ್ಲಿ ಕ್ರಿಕೆಟ್ ಆಟಗಾರನಾಗಿ ಕಾಣಿಸಿಕೊಂಡಿದ್ದೇನೆ. ಹಾಗಾಗಿ ನಮ್ಮ ಚಿತ್ರ ತಂಡ ಹಾಗೂ ಸ್ಟಾರ್ ರಿಪೋರ್ಟ್​ರ್ಸ್ ತಂಡದ ನಡುವೆ ಕ್ರಿಕೆಟ್ ಪಂದ್ಯ ಏರ್ಪಡಿಸಲಾಗಿತ್ತು ಅಂತಾ ಗಣೇಶ್ ಹೇಳಿದರು.

ಇದನ್ನೂ ಓದಿ: ಎಲ್ರೂ ಚೆನ್ನಾಗಿರೋಣ ಎಂಬುದೇ ನನ್ನ ಆಸೆ: ಫ್ಯಾನ್ಸ್ ವಾರ್​ಗೆ ಶಿವ ರಾಜ್​ಕುಮಾರ್ ಪ್ರತಿಕ್ರಿಯೆ

ರುಕ್ಮಿಣಿ ವಸಂತ್ ಮಾತನಾಡಿ ಬಾನ ದಾರಿಯಲ್ಲಿ ಚಿತ್ರ ಬಹಳ ಚೆನ್ನಾಗಿ ಮೂಡಿ ಬಂದಿದೆ. ಸದ್ಯ ಬಿಡುಗಡೆ ಆಗಿರುವ ಹಾಡು ಅಷ್ಟೇ ಇಂಪಾಗಿದೆ. ನಾನು ಈ ಹಾಡಿಗಾಗಿ ಸರ್ಫಿಂಗ್ ಅಭ್ಯಾಸ ಮಾಡಿದ್ದು ಸಖತ್ ಚಾಲೆಜಿಂಗ್ ಆಗಿತ್ತು ಎಂದು ತಿಳಿಸಿದರು. ಬಳಿಕ ರೀಷ್ಮಾ ನಾಣಯ್ಯ ಮಾತನಾಡಿ ಹಾಡು ಅದ್ಭುತವಾಗಿದೆ. ಗಣೇಶ್ ಹಾಗೂ ರಂಗಾಯಣ ರಘು ಅವರು ನನಗೆ ಸಾಕಷ್ಟು ಹೇಳಿಕೊಟ್ಟಿದ್ದಾರೆ. ಕಳೆದ ವರ್ಷ ಅನೇಕ ಕನ್ನಡ ಚಿತ್ರಗಳು ಗೆದ್ದು ದಾಖಲೆ ನಿರ್ಮಿಸಿದೆ. ಈ ವರ್ಷವೂ ಎಲ್ಲಾ ಕನ್ನಡ ಚಿತ್ರಗಳು ದೊಡ್ಡಮಟ್ಟದ ಯಶಸ್ಸು ಕಾಣಲಿ ಎಂದರು.

ಬಾನ ದಾರಿಯಲ್ಲಿ ಹಾಡು ಹುಟ್ಟಿದ ಸಮಯವನ್ನು ವರ್ಣಿಸಿದ ಗೀತ ರಚನೆಕಾರ ಕವಿರಾಜ್, ಮುಂಬೈನ ಖ್ಯಾತ ಯಶ್ ರಾಜ್ ಸ್ಟುಡಿಯೋದಲ್ಲಿ ಈ ಹಾಡಿನ ರೆಕಾರ್ಡಿಂಗ್ ನಡೆದಿದೆ. ಖ್ಯಾತ ಗಾಯಕ ಸೋನು ನಿಗಮ್ ಸುಮಧುರವಾಗಿ ಹಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ ಎಂದು ತಿಳಿಸಿದರು. ಶ್ರೀವಾರಿ ಟಾಕೀಸ್ ಲಾಂಛನದಲ್ಲಿ ಸಂತೋಷ್ ಹಾಗೂ ವೇಣು ಬಾನ ದಾರಿಯಲ್ಲಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಸದ್ಯ ಗೋಲ್ಡನ್ ಸ್ಟಾರ್​ ಗಣೇಶ್ ಕ್ರಿಕೆಟ್ ಪ್ಲೇಯರ್ ಆಗಿ ಕಾಣಿಸಿಕೊಂಡಿರೋದು ಅವರ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಛಾಯಾಗ್ರಾಹಕ ಅಭಿಲಾಷ್ ಕಲ್ಲತ್ತಿ ಸೇರಿದಂತೆ ಅನೇಕ ತಂತ್ರಜ್ಞರು ಈ ಸಂದರ್ಭದಲ್ಲಿ ‌ಉಪಸ್ಥಿತರಿದ್ದರು.

ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ 'ಬಾನ ದಾರಿಯಲ್ಲಿ' ಗಿಫ್ಟ್ ರೆಡಿ ಮಾಡಿಕೊಂಡ ಗೋಲ್ಡನ್ ಸ್ಟಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.