ETV Bharat / entertainment

ಮಲಯಾಳಂ ಚಿತ್ರರಂಗಕ್ಕೆ 'ದಿಯಾ' ಹೀರೋ ದೀಕ್ಷಿತ್ ಶೆಟ್ಟಿ ಎಂಟ್ರಿ

author img

By ETV Bharat Karnataka Team

Published : Dec 28, 2023, 2:28 PM IST

'ಒಪ್ಪೀಸ್' ಸಿನಿಮಾ ಮೂಲಕ ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

Dheekshith Shetty
ದೀಕ್ಷಿತ್ ಶೆಟ್ಟಿ

ಕನ್ನಡ ಚಿತ್ರರಂಗದ ನಟ ನಟಿಯರು ಬಹುಭಾಷಾ ಸಿನಿಮಾಗಳಲ್ಲಿ ಕಮಾಲ್ ಮಾಡುತ್ತಿದ್ದಾರೆ. ಸೂಪರ್ ಹಿಟ್ 'ದಿಯಾ' ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ 'ದಸರಾ' ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ನಟನಾಗಿ ಗಡಿ ಮೀರಿ ಅಪಾರ ಸಂಖ್ಯೆಯ ಪ್ರೇಕ್ಷಕರಿಗೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಾಗಿ 'ದಸರಾ' ಸಿನಿಮಾದಲ್ಲಿ ಬಣ್ಣ ಹಚ್ಚಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿರುವ ಈ ಚಾಕ್ಲೇಟ್ ಹೀರೋ ಸದ್ಯ ಮಲಯಾಳಂ ಇಂಡಸ್ಟ್ರೀಗೂ ಪಾದಾರ್ಪಣೆ ಮಾಡಿದ್ದಾರೆ.

ಒಪ್ಪೀಸ್ ಸಿನಿಮಾ: ಹೌದು, ಪ್ಯಾರಾ ಸೈಕಲಾಜಿಕಲ್ ಕಥಾಹಂದರ ಹೊಂದಿರುವ 'ಒಪ್ಪೀಸ್' ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ ನಡೆದಿದೆ. 10 ವರ್ಷಗಳ ಕಾಲ ವಿದೇಶದಲ್ಲಿದ್ದ ವ್ಯಕ್ತಿ ತಾನು ಹುಟ್ಟಿ ಬೆಳೆದ ಕೇರಳಗೆ ವಾಪಸ್ ಆದಾಗ ಏನಾಗುತ್ತದೆ ಅನ್ನೋದೇ ಕಥೆಯ ತಿರುಳು. ಸೌಜನ್ ಜೋಸೆಫ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಪ್ರದ್ಯುಮ್ನ ಕೊಳ್ಳೇಗಾಲ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಎಂ ಜಯಚಂದ್ರನ್ ಮ್ಯೂಸಿಕ್ ಈ ಚಿತ್ರಕ್ಕಿದೆ. 2024ರ ಫೆಬ್ರವರಿಯಿಂದ ಒಪ್ಪೀಸ್ ಸಿನಿಮಾದ ಶೂಟಿಂಗ್ ಶುರುವಾಗಲಿದೆ.

Dheekshith Shetty
ದೀಕ್ಷಿತ್ ಶೆಟ್ಟಿ

ಮಾರ್ಚ್ 8ಕ್ಕೆ ಬ್ಲಿಂಕ್ ರಿಲೀಸ್​: ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಬಂದು 'ದಿಯಾ' ಚಿತ್ರದ ಮೂಲಕ ಪ್ರೇಕ್ಷಕರ ಮನ ಸೆಳೆದಿರುವ ನಟ ದೀಕ್ಷಿತ್ ಶೆಟ್ಟಿ. ಸದ್ಯ ನಟನೀಗ 'ಬ್ಲಿಂಕ್' ಶೀರ್ಷಿಕೆಯ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ರವಿಚಂದ್ರ ಎ.ಜೆ ಎಂಬುವರು ಈ ಚಿತ್ರಕ್ಕೆ ಹಣ ಹೂಡಿದ್ದಾರೆ. ಶ್ರೀನಿಧಿ ಬೆಂಗಳೂರು ಅವರು ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. 2024ರ ಮಾರ್ಚ್ 8ಕ್ಕೆ ಬ್ಲಿಂಕ್ ಸಿನಿಮಾ ರಿಲೀಸ್ ಆಗಲಿದೆ.

Dheekshith Shetty
'ಒಪ್ಪೀಸ್' ಸಿನಿಮಾ ಮೂಲಕ ಮಲಯಾಳಂ ಚಿತ್ರರಂಗಕ್ಕೆ ದೀಕ್ಷಿತ್ ಶೆಟ್ಟಿ ಎಂಟ್ರಿ

ಇದನ್ನೂ ಓದಿ: 'chef ಚಿದಂಬರ'ದ ಅನು ಪಾತ್ರದಲ್ಲಿ ರೆಚೆಲ್ ಡೇವಿಡ್; ಶೀಘ್ರ ಬಿಡುಗಡೆಗೆ ಸಿದ್ಧತೆ

ದೀಕ್ಷಿತ್ ಶೆಟ್ಟಿ ಮುಂದಿನ ಸಿನಿಮಾಗಳು: ಅಷ್ಟೇ ಅಲ್ಲದೇ, ದೀಕ್ಷಿತ್ ಶೆಟ್ಟಿ ಅವರು ಅಲ್ಲು ಅರವಿಂದ್ ಪ್ರೆಸೆಂಟ್ ಮಾಡುತ್ತಿರುವ 'ಗರ್ಲ್ ಫ್ರೆಂಡ್' ಸಿನಿಮಾದಲ್ಲಿಯೂ ಅಭಿನಯಿಸುತ್ತಿದ್ದಾರೆ. ಇತ್ತೀಚೆಗಷ್ಟೇ ದೀಕ್ಷಿತ್ ಶೆಟ್ಟಿ ಸರಳವಾಗಿ ಜನ್ಮದಿನ ಆಚರಿಸಿಕೊಂಡಿದ್ದರು. ಬರ್ತ್ ಡೇ ಸ್ಪೆಷಲ್ ಆಗಿ ಗರ್ಲ್ ಫ್ರೆಂಡ್ ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಿ ಚಿತ್ರತಂಡ ಶುಭಾಶಯ ಕೋರಿತ್ತು. ರಂಗಿತರಂಗ, ಅವನೇ ಶ್ರೀಮನ್ನಾರಾಯಣ ಹಾಗೂ ಸ್ಪೂಕಿ ಕಾಲೇಜುಗಳಂತಹ ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಹೆಚ್.ಕೆ ಪ್ರಕಾಶ್ ನಿರ್ಮಾಣದ 'ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ' ಸಿನಿಮಾದಲ್ಲಿಯೂ ದಿಯಾ ಹೀರೋ ಬಣ್ಣ ಹಚ್ಚಿದ್ದಾರೆ. ಇನ್ನೂ, ದೀಕ್ಷಿತ್ ನಟನೆಯ ಮತ್ತೊಂದು ಚಿತ್ರ ಕೆಟಿಎಂ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ. ಇದರ ಜೊತೆಗೆ ತಮಿಳು ಸಿನಿಮಾದಲ್ಲಿಯೂ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸಸ್ಪೆನ್ಸ್ ಥ್ರಿಲ್ಲರ್ ಕಥೆಯಲ್ಲಿ ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.