ETV Bharat / entertainment

ತೆಲುಗು ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹ್ಯಾಟ್ರಿಕ್ ಹೀರೋ.. ಹೊಸ ಲುಕ್​ನಲ್ಲಿ ಮಿಂಚಲಿರುವ ಶಿವಣ್ಣ

author img

By

Published : Oct 26, 2022, 6:57 PM IST

ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗ್ರೀನ್ ಸಿಗ್ನಲ್ ನೀಡಿದ್ದಾರೆ.

Hat trick hero Shiva Rajkumar  Telugu director Karthik Advaith  Shiva Rajkumar and Karthik Advaith movie set  Hat trick hero Shiva Rajkumar movies  Telugu director Karthik Advaith films  ತೆಲುಗು ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್  ಗ್ರೀನ್ ಸಿಗ್ನಲ್ ಕೊಟ್ಟ ಹ್ಯಾಟ್ರಿಕ್ ಹೀರೋ  ಹೊಸ ಲುಕ್​ನಲ್ಲಿ ಮಿಂಚಲಿರುವ ಶಿವಣ್ಣ  ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್  ಶಿವಣ್ಣ ಸ್ಯಾಂಡಲ್​ವುಡ್ ಬ್ಯುಸಿಯೆಸ್ಟ್ ನಟ  ಆಕ್ಷನ್ ಥ್ರಿಲ್ಲರ್ ಸಿನಿಮಾ  ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭ
ತೆಲುಗು ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹ್ಯಾಟ್ರಿಕ್ ಹೀರೋ

ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳ ಪ್ರೀತಿಯ ನಟ ಹಾಗು ನಿರ್ಮಾಪಕರ ಪಾಲಿನ ಅಚ್ಚುಮೆಚ್ಚಿನ ಹೀರೋ ಅಂದ್ರೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್. ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಮಾಡ್ತಾ ಇರೋ ಶಿವಣ್ಣ ಸ್ಯಾಂಡಲ್​ವುಡ್ ಬ್ಯುಸಿಯೆಸ್ಟ್ ನಟ. ಶಿವಣ್ಣ 125ನೇ ಸಿನಿಮಾ ‘ವೇದ’ ಡಿಸೆಂಬರ್​ನಲ್ಲಿ ತೆರೆ ಕಾಣಲು ಸಜ್ಜಾಗಿ ನಿಂತಿದೆ. ಘೋಸ್ಟ್, ನೀ ಸಿಗೋವರೆಗೂ, ಫಾರ್ಟಿಫೈವ್, ಕರಟಕ ದಮನಕ ಸಿನಿಮಾಗಳಲ್ಲಿ ಶಿವಣ್ಣ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಚಿತ್ರಕ್ಕೆ ಅವರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತೆಲುಗು ನಿರ್ದೇಶಕರೊಬ್ಬರು ಹೇಳಿರುವ ಕಥೆ ಕೇಳಿ ಇಂಪ್ರೆಸ್ ಆಗಿರುವ ಶಿವಣ್ಣ, ಅವರೊಂದಿಗೆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ.

Hat trick hero Shiva Rajkumar  Telugu director Karthik Advaith  Shiva Rajkumar and Karthik Advaith movie set  Hat trick hero Shiva Rajkumar movies  Telugu director Karthik Advaith films  ತೆಲುಗು ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್  ಗ್ರೀನ್ ಸಿಗ್ನಲ್ ಕೊಟ್ಟ ಹ್ಯಾಟ್ರಿಕ್ ಹೀರೋ  ಹೊಸ ಲುಕ್​ನಲ್ಲಿ ಮಿಂಚಲಿರುವ ಶಿವಣ್ಣ  ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್  ಶಿವಣ್ಣ ಸ್ಯಾಂಡಲ್​ವುಡ್ ಬ್ಯುಸಿಯೆಸ್ಟ್ ನಟ  ಆಕ್ಷನ್ ಥ್ರಿಲ್ಲರ್ ಸಿನಿಮಾ  ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭ
ತೆಲುಗು ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹ್ಯಾಟ್ರಿಕ್ ಹೀರೋ

ಅಂದ್ಹಾಗೆ ಶಿವರಾಜ್ ಕುಮಾರ್​ಗೆ ಆ್ಯಕ್ಷನ್ ಕಟ್ ಹೇಳ್ತಿರುವುದು ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್. ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ‘ಪಾಯುಮ್ ಒಲಿ ನೀ ಎನಕ್ಕು’ ಚಿತ್ರ ನಿರ್ದೇಶಿಸಿದ್ದಾರೆ. ಇದೀಗ ಸ್ಯಾಂಡಲ್​ವುಡ್ ಅಂಗಳಕ್ಕೆ ಎಂಟ್ರಿ ಕೊಡ್ತಿರುವ ಇವರಿಗೆ ನಿರ್ದೇಶಕನಾಗಿ ಇದು ಎರಡನೇ ಸಿನಿಮಾ.

ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್​ನಲ್ಲಿ, ಡಿಫ್ರೆಂಟ್ ರೋಲ್​ನಲ್ಲಿ ಕಾಣಸಿಕೊಳ್ಳಲಿದ್ದಾರೆ. ಸಿನಿಮಾ ಕಥೆ ಕೇಳಿ ಶಿವಣ್ಣ ಕೂಡ ಎಕ್ಸೈಟ್ ಆಗಿದ್ದಾರೆ. ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದೆ. ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭವಾಗಲಿದೆ. ಬಹಳ ದೊಡ್ಡ ಮೊಟ್ಟದಲ್ಲಿ ಸಿನಿಮಾ ನಿರ್ಮಾಣ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಚಿತ್ರದ ಟೈಟಲ್, ನಾಯಕಿ, ತಾರಾಬಳಗ, ತಾಂತ್ರಿಕ ವರ್ಗ ಇದೆಲ್ಲದರ ಬಗ್ಗೆ ಮುಂಬರುವ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳುವುದಾಗಿ ನಿರ್ದೇಶಕ ಕಾರ್ತಿಕ್ ಅದ್ವೈತ್ ತಿಳಿಸಿದ್ದಾರೆ.

Hat trick hero Shiva Rajkumar  Telugu director Karthik Advaith  Shiva Rajkumar and Karthik Advaith movie set  Hat trick hero Shiva Rajkumar movies  Telugu director Karthik Advaith films  ತೆಲುಗು ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್  ಗ್ರೀನ್ ಸಿಗ್ನಲ್ ಕೊಟ್ಟ ಹ್ಯಾಟ್ರಿಕ್ ಹೀರೋ  ಹೊಸ ಲುಕ್​ನಲ್ಲಿ ಮಿಂಚಲಿರುವ ಶಿವಣ್ಣ  ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್  ಶಿವಣ್ಣ ಸ್ಯಾಂಡಲ್​ವುಡ್ ಬ್ಯುಸಿಯೆಸ್ಟ್ ನಟ  ಆಕ್ಷನ್ ಥ್ರಿಲ್ಲರ್ ಸಿನಿಮಾ  ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭ
ತೆಲುಗು ನಿರ್ದೇಶಕನ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಹ್ಯಾಟ್ರಿಕ್ ಹೀರೋ

ಈ ಹಿಂದೆ ಶಿವಣ್ಣ ಅಭಿನಯದ‌ 'ಕಿಲ್ಲಿಂಗ್ ವೀರಪ್ಪನ್' ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದ ಹಾಗೂ ತೆಲುಗಿನಲ್ಲಿ 'ಆಫೀಸರ್', 'ಗುಡ್ ಲಕ್ ಸಖಿ' ಸಿನಿಮಾ ನಿರ್ಮಿಸಿರುವ ನಿರ್ಮಾಪಕ ಸುಧೀರ್ ಚಂದ್ರ ಪಡಿರಿ 'ಸುಧೀರ್ ಚಂದ್ರ ಫಿಲಂ ಕಂಪನಿ' ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.

ಓದಿ: ಗಂಧದಗುಡಿ ಅದ್ಧೂರಿಯಾಗಿ ಬಿಡುಗಡೆ: 30 ಹಳ್ಳಿಗಳ ಮಕ್ಕಳಿಗೆ ಫ್ರೀ ಶೋ ನೀಡಲಿರುವ ಅಪ್ಪು ಫ್ಯಾನ್ಸ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.