ಸೆಟ್ಟೇರಿದ ಹೊಂಬಾಳೆ ಫಿಲಂಸ್ ನಿರ್ಮಾಣದ 12ನೇ ಪ್ಯಾನ್ ಇಂಡಿಯಾ ಚಿತ್ರ

author img

By

Published : Oct 10, 2022, 11:57 AM IST

dhoomam

ಹೊಂಬಾಳೆ ಫಿಲಂಸ್ ನಿರ್ಮಾಣದ 12ನೇ ಚಿತ್ರ ಧೂಮಂ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡುತ್ತಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ನಿರ್ಮಿಸುತ್ತಿರುವ ಧೂಮಂ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ 12ನೇ ಚಿತ್ರವಾಗಿದೆ.

ಲೂಸಿಯಾ ಹಾಗೂ ಯೂಟರ್ನ್ ಸಿನಿಮಾಗಳನ್ನು ನಿರ್ದೇಶನ ಮಾಡಿರೋ ಪವನ್ ಕುಮಾರ್ ಈ ಚಿತ್ರದ ನಿರ್ದೇಶನ‌ ಮಾಡುತ್ತಿದ್ದಾರೆ. ಮಲಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಧೂಮಂ ಸಿನಿಮಾ ನಿರ್ಮಾಣವಾಗುತ್ತಿದೆ.

dhoomam
ಧೂಮಂ ಮುಹೂರ್ತ ಸಮಾರಂಭ

ಮಲೆಯಾಳಂನ ಹೆಸರಾಂತ ನಟ ಫಹಾದ್ ಫಾಸಿಲ್ ಹಾಗೂ ಅಪರ್ಣ ಬಾಲಮುರಳಿ (ಸೂರರೈ ಪೊಟ್ರು) ನಾಯಕ, ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕಿರಗಂದೂರು ಆರಂಭ ಫಲಕ ತೋರಿದರು.

dhoomam
ಧೂಮಂ ಮುಹೂರ್ತ ಸಮಾರಂಭ

ಇದನ್ನೂ ಓದಿ: ಪವನ್ - ಫಹಾದ್​ ಕಾಂಬಿನೇಶನ್​​ನ ಧೂಮಂ ಚಿತ್ರೀಕರಣ ಆರಂಭ

ಶೈಲಜಾ ವಿಜಯ್ ಕಿರಗಂದೂರು ಕ್ಯಾಮರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. 'ಕೆಜಿಎಫ್' ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಮುಂದಿನ ತಿಂಗಳಿನಿಂದ ಧೂಮಂ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಧೂಮಂ ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಹಾಗೂ ಪ್ರೀತಾ ಜಯರಾಮನ್ ಛಾಯಾಗ್ರಹಣವಿದೆ. ಒಂದರ ಮೇಲೆ ಒಂದು ಹಿಟ್ ಚಿತ್ರಗಳನ್ನು ನೀಡುತ್ತಿರುವ ಹೊಂಬಾಳೆ ಫಿಲಂಸ್ ಹಾಗೂ ಪ್ರತಿಭಾವಂತ ನಿರ್ದೇಶಕ ಪವನ್ ಕುಮಾರ್ ಕಾಂಬಿನೇಶನ್​ನಲ್ಲಿ‌ ಮೂಡಿ ಬರುತ್ತಿರುವ ಈ ಚಿತ್ರದ ಪೋಸ್ಟರ್ ಈಗಾಗಲೇ ಕುತೂಹಲ ಹುಟ್ಟಿಸಿದ್ದು, ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ: ನುಡಿದಂತೆ ನಡೆದ ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಗಂದೂರು : ಆಕ್ಸಿಜನ್ ಪ್ಲಾಂಟ್‌ಗಳ ನಿರ್ಮಾಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.