ಭಾರತದಲ್ಲಿ 400, ವಿಶ್ವದಲ್ಲಿ 700: ಸಾವಿರ ಕೋಟಿ ರೂ. ಕಲೆಕ್ಷನ್ ಮಾಡುತ್ತಾ 'ಜವಾನ್'?!

ಭಾರತದಲ್ಲಿ 400, ವಿಶ್ವದಲ್ಲಿ 700: ಸಾವಿರ ಕೋಟಿ ರೂ. ಕಲೆಕ್ಷನ್ ಮಾಡುತ್ತಾ 'ಜವಾನ್'?!
Jawan Box Office Collection: ಜವಾನ್ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ನಟನೆಯ 'ಜವಾನ್' ಬಾಕ್ಸ್ ಆಫೀಸ್ನಲ್ಲಿ ಬಿರುಗಾಳಿ ಎಬ್ಬಿಸಿದೆ. ಬಿಡುಗಡೆಗೂ ಮುನ್ನವೇ ಸಖತ್ ಸದ್ದು ಮಾಡಿದ್ದ ಈ ಸಿನಿಮಾ ತೆರೆಕಂಡ ಬಳಿಕ ಬಾಕ್ಸ್ ಆಫೀಸ್ ವಿಚಾರವಾಗಿ ಎಲ್ಲರ ಹುಬ್ಬೇರಿಸಿದೆ. ಈಗಾಗಲೇ ಹಲವು ದಾಖಲೆಗಳನ್ನು ಮುರಿದಿರುವ 'ಜವಾನ್' ಚಿತ್ರತಂಡ ಶುಕ್ರವಾರದಂದು ಸಕ್ಸಸ್ ಪಾರ್ಟಿ ಹಮ್ಮಿಕೊಂಡಿತ್ತು.
ಜವಾನ್ ಕಳೆದ ಗುರುವಾರ, ಸೆಪ್ಟೆಂಬರ್ 7ರಂದು ಚಿತ್ರಮಂದಿರಗಳಲ್ಲಿ ತೆರೆಕಂಡಿತು. ಭಾರತೀಯ ಬಾಕ್ಸ್ ಆಫೀಸ್ನಲ್ಲಿ 400 ಕೋಟಿ ರೂ. ಗಡಿ ದಾಟಿದ್ದರೆ, ಜಾಗತಿಕ ಗಲ್ಲಾಪೆಟ್ಟಿಗೆಯಲ್ಲಿ ಈವರೆಗೆ 700 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. 10ನೇ ದಿನ ಬಾಕ್ಸ್ ಆಫೀಸ್ ಸಂಖ್ಯೆ ಶೇ.50 ರಷ್ಟು ಏರುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ವಾರಾಂತ್ಯ ಆದ ಹಿನ್ನೆಲೆ 'ಜವಾನ್' ಸಿನಿಮಾ ಅತಿ ಹೆಚ್ಚು ಕಲೆಕ್ಷನ್ ಮಾಡಲಿದೆ ಅನ್ನೋದು ಸಿನಿಮಾ ಪಂಡಿತರ ಅಭಿಪ್ರಾಯ.
ಜವಾನ್ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿನ ಗಮನಾರ್ಹ ಪ್ರಯಾಣಕ್ಕೆ ಸಾಕ್ಷಿಯಾಗಿದೆ. ಭಾರತೀಯ ಬಾಕ್ಸ್ ಆಫೀಸ್ನಲ್ಲಿ 9 ದಿನಗಳಲ್ಲಿ 400 ಕೋಟಿ ರೂ. ಗಡಿ ದಾಟಿದೆ. ಈಗಾಗಲೇ ಹಲವು ದಾಖಲೆ ಪುಡಿಗಟ್ಟಿರುವ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಹೊಸ ಬಾಕ್ಸ್ ಆಫೀಸ್ ದಾಖಲೆ ಬರೆಯಲು ಸಜ್ಜಾಗಿದೆ. ಎರಡನೇ ವಾರಾಂತ್ಯದಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿರುವ ಜವಾನ್, ಶನಿವಾರ ಕಲೆಕ್ಷನ್ ವಿಚಾರದಲ್ಲಿ ಎಲ್ಲರ ಹುಬ್ಬೇರಿಸಲಿದೆ ಎಂದು ಅಂದಾಜಿಸಲಾಗಿದೆ. ದಕ್ಷಿಣ ಚಿತ್ರರಂಗದ ಸ್ಟಾರ್ ಡೈರೆಕ್ಟರ್ ಅಟ್ಲೀ ನಿರ್ದೇಶನದ ಈ ಸಿನಿಮಾ ಮತ್ತಷ್ಟು ದಾಖಲೆ ಬರೆಯಲಿ ಅನ್ನೋದು ಸಿನಿಪ್ರಿಯರ ಹಾರೈಕೆ.
ಸಿನಿ ಉದ್ಯಮದ ಟ್ರ್ಯಾಕರ್ ಸ್ಯಾಕ್ನಿಲ್ಕ್ ವರದಿ ಪ್ರಕಾರ, ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಕಲೆಕ್ಷನ್ನಲ್ಲಿ ಏರಿಕೆ ಆಗಲಿದೆ. ಭಾರತೀಯ ಬಾಕ್ಸ್ ಆಫೀಸ್ನಲ್ಲಿ 10ನೇ ದಿನ ಅಂದರೆ ಇಂದು 32 ಕೋಟಿ ರೂ. ಗಳಿಸಬಹುದು. ನಿನ್ನೆ ಅಂದರೆ 9ನೇ ದಿನ 20.61 ಕೋಟಿ ರೂ. ಗಳಿಸಿದೆ. ಇದಕ್ಕೆ ಹೋಲಿಸಿದರೆ, ಇಂದಿನ ಕಲೆಕ್ಷನ್ನಲ್ಲಿ ಗಮನಾರ್ಹ ಬೆಳವಣಿಗೆ ಆಗಲಿದೆ. ವರದಿಗಳ ಪ್ರಕಾರ, ಭಾರತೀಯ ಗಲ್ಲಾಪೆಟ್ಟಿಗೆಯಲ್ಲಿ ಜವಾನ್ ಸಿನಿಮಾ 9 ದಿನಗಳಲ್ಲಿ ಒಟ್ಟು 442.49 ಕೋಟಿ ರೂ. ವ್ಯವಹಾರ ನಡೆಸಿದೆ. ಮತ್ತು ವಿಶ್ವಾದ್ಯಂತ ಸುಮಾರು 700 ಕೋಟಿ ರೂ. ಕಲೆಕ್ಷನ್ ಮಾಡಿದೆ.
-
Director Atlee About Thalapathy Vijay In Jawan Success Meet🔥#Leo @actorvijay pic.twitter.com/BIY6fdsgX1
— Vijay_Karthik_ (@Karthik_VFC2) September 15, 2023
ಶಾರುಖ್ ಹಾಗೂ ಗೌರಿ ದಂಪತಿಯ ಚಲನಚಿತ್ರ ನಿರ್ಮಾಣ ಸಂಸ್ಥೆ ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಜವಾನ್ ಚಿತ್ರಕ್ಕೆ ಬಂಡವಾಳ ಹೂಡಿದೆ. ಸೆಪ್ಟೆಂಬರ್ 7 ರಂದು ಹಿಂದಿ, ತಮಿಳು, ತೆಲುಗು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಯಿತು. ಕಿಂಗ್ ಖಾನ್ ಜೊತೆ ಸೌತ್ ಲೇಡಿ ಸೂಪರ್ಸ್ಟಾರ್ ನಯನತಾರಾ ಮತ್ತು ವಿಜಯ್ ಸೇತುಪತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪಠಾಣ್ ನಟಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
-
"The next 5 films will be huge" - #ShahRukhKhan at #Jawan Success Press Meet in Mumbai.@iamsrk#SRK pic.twitter.com/bYmSssXtBb
— Team Shah Rukh Khan Fan Club (@teamsrkfc) September 15, 2023
