ETV Bharat / entertainment

ಸೆ.17ರ ಸಂಜೆ 5 ಗಂಟೆಗೆ ಕಬ್ಜ ಟೀಸರ್ ರಿಲೀಸ್.. ಚಿತ್ರಕ್ಕೆ ಬೆಂಬಲ ಕೊಡಿ ಎಂದ ಕಿಚ್ಚ ಸುದೀಪ್​

author img

By

Published : Sep 14, 2022, 7:15 PM IST

Kabja Teaser Release on September 17th
ಸೆ.17ರ ಸಂಜೆ 5 ಗಂಟೆಗೆ ಕಬ್ಜ ಟೀಸರ್ ರಿಲೀಸ್

ಕಬ್ಜ ಟೀಸರ್ ಸೆಪ್ಟೆಂಬರ್ 17ರ ಸಂಜೆ 5 ಗಂಟೆಗೆ ಬಿಡುಗಡೆ ಆಗಲಿದ್ದು, ಇದೀಗ ಕಿಚ್ಚ ಸುದೀಪ್ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಜೊತೆಗೆ ಟೀಸರ್​ ನೋಡಿ ಶೇರ್ ಮಾಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಪರಭಾಷೆಗೆ ಪೈಪೋಟಿ ಕೊಡುವ ಮಟ್ಟಿಗೆ ಅದ್ಧೂರಿ ಮೇಕಿಂಗ್ ಹಾಗೂ ಬಿಗ್ ಬಜೆಟ್ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಕನ್ನಡ ಚಿತ್ರರಂಗ ಅಲ್ಲದೇ ಭಾರತೀಯ ಚಿತ್ರರಂಗದಲ್ಲಿ ಟೈಟಲ್​​ನಿಂದಲೇ ಹವಾ ಸೃಷ್ಟಿಸಿರೋ ಚಿತ್ರ ಕಬ್ಜ. ನಿರ್ದೇಶಕ ಆರ್.ಚಂದ್ರು ನಿರ್ದೇಶನದಲ್ಲಿ, ರಿಯಲ್​ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಇದಾಗಿದೆ.

ಪೊಸ್ಟರ್​ಗಳಿಂದಲೇ ಹೈಪ್ ಕ್ರಿಯೇಟ್ ಆಗಿರೋ ಕಬ್ಜ ಸಿನಿಮಾದ ಟೀಸರ್ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದೆ. ಹೀಗಿರುವಾಗ ಕಬ್ಜ ಸಿನಿಮಾದ ಟೀಸರ್ ಬಗ್ಗೆ ಕಿಚ್ಚ ಸುದೀಪ್ ಕೌತುಕ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಈ ಚಿತ್ರದ ಟೀಸರ್ ಹೇಗಿರುತ್ತೆ ಅನ್ನೋದರ ಬಗ್ಗೆ ಸಹಜವಾಗಿ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಇದೀಗ ಕಿಚ್ಚ ಸುದೀಪ್ ಚಿತ್ರತಂಡಕ್ಕೆ ಆಲ್ ದಿ ಬೆಸ್ಟ್ ಹೇಳಿದ್ದಾರೆ. ಜೊತೆಗೆ ಟೀಸರ್​ ನೋಡಿ ಶೇರ್ ಮಾಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.

ನಟ ಸುದೀಪ್

ಪ್ಯಾನ್ ಇಂಡಿಯಾ ಸಿನಿಮಾ ಕಬ್ಜ ಟೀಸರ್ ಸೆಪ್ಟೆಂಬರ್ 17ರ ಸಂಜೆ 5 ಗಂಟೆಗೆ ಆನಂದ್ ಆಡಿಯೋದಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಆರ್ ಚಂದ್ರು ತಿಳಿಸಿದ್ದಾರೆ. ಈಗಾಗಲೇ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್​ಗೆ ಈ ಸಿನಿಮಾ ಸಖತ್ ಸೌಂಡ್ ಮಾಡುತ್ತಿದೆ‌. ರಿಯಲ್ ಸ್ಟಾರ್ ಉಪೇಂದ್ರ ಅವರ ಜೋಡಿಯಾಗಿ ಸೌತ್ ಬ್ಯೂಟಿ ಶ್ರೇಯಾ ಸರಣ್ ಕಾಣಿಸಿಕೊಂಡಿದ್ದಾರೆ.

ಇದರ ಜೊತೆಗೆ ಐ ಮೂವಿ ಖ್ಯಾತಿಯ ಕಾಮರಾಜನ್, ನವಾಬ್ ಷಾ, ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು, ತೆಲುಗಿನ ಬೇಡಿಕೆಯ ನಟರಾದ ಪೊಸನಿ ಕೃಷ್ಣ ಮುರಳಿ ಮತ್ತು ಮುರಳಿ ಶರ್ಮಾ ಕಬ್ಜ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

ಎಂಟಿಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆರ್.ಚಂದ್ರು ಅವರೇ ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯೂಸರ್ ಆಗಿ ರಾಜಶೇಖರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ, ರವಿವರ್ಮ, ವಿಕ್ರಂಮೋರ್, ವಿಜಯ್​ ಅವರ ಸಾಹಸ ನಿರ್ದೇಶನ ಚಿತ್ರಕಿದೆ.

ಇದನ್ನೂ ಓದಿ: ಕನ್ನಡದ ಬಿಗ್ ಬಾಸ್ ಒಟಿಟಿ ಶೋ.. ವಿನ್ನರ್ ಯಾರಾಗ್ತಾರೆ, ಮಾಜಿ ಸ್ಪರ್ಧಿಗಳು ಹೇಳೋದೇನು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.