ETV Bharat / entertainment

ಸಿಹಿ ಸುದ್ದಿ ನೀಡಿದ ರಿಷಬ್ ಶೆಟ್ಟಿ: 'ಕಾಂತಾರ 2' ಸಿನಿಮಾದ ಬರವಣಿಗೆ ಪ್ರಾರಂಭ

author img

By

Published : Mar 23, 2023, 11:42 AM IST

ಯುಗಾದಿ ಹಬ್ಬದ ಶುಭ ಸಂದರ್ಭದಲ್ಲಿ ಕಾಂತಾರ ಚಿತ್ರತಂಡ ಶುಭ ಸುದ್ದಿ ನೀಡಿದೆ. ಕಾಂತಾರ ಪ್ರೀಕ್ವೆಲ್‌ ಬರವಣಿಗೆ ಪ್ರಾರಂಭವಾಗಿದೆ ಎಂದು ಡಿವೈನ್ ಸ್ಟಾರ್​ ​ರಿಷಬ್ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ.

Kantara
ಕಾಂತಾರ

ಬೆಂಗಳೂರು: ಸ್ಯಾಂಡಲ್‌ವುಡ್​ನ ಬಹು ಬೇಡಿಕೆ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿದ್ದ 'ಕಾಂತಾರ'‌ ಸಿನಿಮಾ ಕೋಟಿ ಕೋಟಿಗಟ್ಟಲೆ ಲೂಟಿ ಮಾಡುವ ಜೊತೆಗೆ ಹೊಸ ದಾಖಲೆಯನ್ನೇ ಸೃಷ್ಟಿಸಿತ್ತು. ಇದೀಗ, ಕಾಂತಾರ 2 ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಯುಗಾದಿ ಹಬ್ಬದಂದು ಹೊಂಬಾಳೆ ಫಿಲ್ಮ್ಸ್ ಸಿಹಿ ಸುದ್ದಿ ಕೊಟ್ಟಿದೆ.

ಹೌದು, ಬುಧವಾರ ರಿಷಬ್ ಶೆಟ್ಟಿ ತಮ್ಮ ಅಧಿಕೃತ ಟ್ವಿಟರ್​ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದು, "ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು. 'ಕಾಂತಾರ' ಸಿನಿಮಾದ ಮುಂದಿನ ಹೆಜ್ಜೆಗೆ ಕಾಲಿಟ್ಟಿದ್ದೇವೆ. ಕಾಂತಾರ 2 ಸಿನಿಮಾದ ಕನ್ನಡ ಬರವಣಿಗೆ ಆರಂಭವಾಗಿದೆ. ಸ್ಕ್ರಿಪ್ಟ್‌ನ ಕೆಲಸ ಪ್ರಾರಂಭಿಸಿದ್ದೇನೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಕೆಜಿಎಫ್‌, ಕಾಂತಾರ ಆಯ್ತು ಮುಂದೇನು?: ಹೊಂಬಾಳೆ ಸಂಸ್ಥೆಯಿಂದ ಬರಲಿವೆ ಈ ಸಿನಿಮಾಗಳು!

ಸಾಮಾಜಿಕ ಮಾಧ್ಯಮಗಳಲ್ಲಿ ಹೊಂಬಾಳೆ ಫಿಲ್ಮ್ಸ್ ಕೂಡ ಈ ಕುರಿತು ಮಾಹಿತಿ ಹಂಚಿಕೊಂಡಿದೆ, ರಿಷಬ್‌ ಶೆಟ್ಟಿ ಮತ್ತು ತಂಡದ ಫೋಟೋ ಶೇರ್​ ಮಾಡಿ, ಯುಗಾದಿ ಮತ್ತು ಹೊಸ ವರ್ಷದ ಈ ಶುಭ ಸಂದರ್ಭದಲ್ಲಿ ಕಾಂತಾರದ ಎರಡನೇ ಭಾಗದ ಬರವಣಿಗೆ ಪ್ರಾರಂಭವಾಗಿದೆ ಎಂದು ಘೋಷಿಸಲು ನಾವು ಸಂತೋಷಪಡುತ್ತೇವೆ. ಪ್ರಕೃತಿಯೊಂದಿಗಿನ ನಮ್ಮ ಸಂಬಂಧವನ್ನು ಪ್ರದರ್ಶಿಸುವ ಮತ್ತೊಂದು ಆಕರ್ಷಕ ಕಥೆಯನ್ನು ನಿಮ್ಮ ಮುಂದೆ ತರಲು ನಾವು ಮುಂದಾಗಿದ್ದೇವೆ ಎಂದು ಹೇಳಿದೆ. ಆದ್ರೆ, ಪಾತ್ರಧಾರಿಗಳ ಬಗ್ಗೆ ಯಾವುದೇ ಗುಟ್ಟು ಬಿಟ್ಟು ಕೊಟ್ಟಿಲ್ಲ.

ಇನ್ನು 'ಕಾಂತಾರ’ ಚಿತ್ರತಂಡದಿಂದ ಹೊರಬಿದ್ದ ಈ ಅಪ್‌ಡೇಟ್‌ ನೋಡಿದ ಅಭಿಮಾನಿಗಳು ಕಾಮೆಂಟ್​ ಮೂಲಕ ಅಭಿನಂದನೆ ಜೊತೆ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಕಾಂತಾರ 2 ಕಥೆ ಕೆಲಸ ಚುರುಕು.. ಫೋನ್ ಸ್ವಿಚ್​​ ಆಫ್ ಮಾಡಿಕೊಂಡ ಡಿವೈನ್ ಸ್ಟಾರ್

ಕಳೆದ ವರ್ಷ ಭಾರತೀಯ ಚಿತ್ರರಂಗದಲ್ಲಿ ಭಾರಿ ಸದ್ದು ಮಾಡಿದ ಸಿನಿಮಾಗಳಲ್ಲಿ 'ಕಾಂತಾರ' ಚಿತ್ರ ಕೂಡ ಒಂದಾಗಿದೆ. ಅಷ್ಟೇ ಅಲದೆ, ಕನ್ನಡ ಚಿತ್ರರಂಗದ ಹಿರಿಮೆಯನ್ನು ಉತ್ತುಂಗಕ್ಕೆ ಕೊಂಡೊಯ್ದ, ವಿದೇಶಗಳಲ್ಲಿ ಕೂಡ ಸದ್ದು ಮಾಡಿತ್ತು. ಪ್ರೇಕ್ಷಕರ ಬಹು ಬೇಡಿಕೆಯ ಮೇರೆಗೆ ತೆಲುಗು, ತಮಿಳು, ಹಿಂದಿ, ಮಲಯಾಳಂ ಭಾಷೆಗೆ ಡಬ್​ ಆಗಿ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಪಡೆದಿತ್ತು. 'ಕಾಂತಾರ'ದ ಕನ್ನಡ ಮತ್ತು ಹಿಂದಿ ಆವೃತ್ತಿಯು ಕ್ರಮವಾಗಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 14 ರಂದು ಬಿಡುಗಡೆಯಾಗಿತ್ತು. ಇದೀಗ ಚಿತ್ರದ ಮತ್ತೊಂದು ಭಾಗ ಸಿದ್ಧವಾಗ್ತಿದೆ.

ಇದನ್ನೂ ಓದಿ : ರಿಷಬ್ ಶೆಟ್ಟಿಯಿಂದ ನೇಮ ಸೇವೆ.. ಕಾಂತಾರ 2ಗೆ ಅಣ್ಣಪ್ಪನ ಅಪ್ಪಣೆ ಆದೇಶ

ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ಮತ್ತು ಚಲುವೇಗೌಡ ನಿರ್ಮಿಸಿರುವ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ, ಸಪ್ತಮಿ ಗೌಡ ಮತ್ತು ಕಿಶೋರ್ ಕುಮಾರ್ ಜಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ : ವರಾಹರೂಪಂ ಕೃತಿಸ್ವಾಮ್ಯ ಉಲ್ಲಂಘನೆ ಪ್ರಕರಣ: ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಹೇಳಿಕೆ ದಾಖಲಿಸಿಕೊಂಡ ಕೇರಳ ಪೊಲೀಸರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.