ETV Bharat / entertainment

ಪುನೀತ್‌ ಬಯೋಗ್ರಫಿ 'ನೀನೇ ರಾಜಕುಮಾರ' 4ನೇ ಆವೃತ್ತಿ ಬಿಡುಗಡೆ

author img

By

Published : Dec 16, 2022, 6:38 PM IST

ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು 'ನೀನೇ ರಾಜಕುಮಾರ' ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಇಂದು ಬೆಂಗಳೂರಿನ ಪಿ.ಆರ್.ಕೆ ಕಚೇರಿಯಲ್ಲಿ ಬಿಡುಗಡೆ ಮಾಡಿದರು.

Neene rajakumara 4th edition released
''ನೀನೇ ರಾಜಕುಮಾರ'' 4ನೇ ಆವೃತ್ತಿ ಬಿಡುಗಡೆ

ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದ ಪುನೀತ್ ರಾಜ್​ಕುಮಾರ್ ಅವರ ಬಯೋಗ್ರಫಿ 'ನೀನೇ ರಾಜಕುಮಾರ' ಹನ್ನೊಂದು ತಿಂಗಳಲ್ಲಿ ನಾಲ್ಕನೇ ಮರುಮುದ್ರಣ ಕಂಡಿದೆ. ಅಶ್ವಿನಿ ಪುನೀತ್ ರಾಜ್​​ಕುಮಾರ್ ಅವರು ಹೊಸ ಆವೃತ್ತಿಯನ್ನು ಬಿಡುಗಡೆಗೊಳಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಲೇಖಕ ಡಾ.ಶರಣು ಹುಲ್ಲೂರು, ಪ್ರಕಾಶಕ ಜಮೀಲ್ ಸಾವಣ್ಣ ಮತ್ತು ಪಿ.ಆರ್.ಕೆಯ ಸತೀಶ್ ಉಪಸ್ಥಿತರಿದ್ದರು.

ಮಾರ್ಚ್ 15, 2022ರಂದು ಮೊದಲ ಬಾರಿಗೆ ಪುಸ್ತಕವನ್ನು ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದರು. ಆ ನಂತರ ಪುಸ್ತಕವು ಅಮೆಜಾನ್, ಸಪ್ನಾ ಸೇರಿದಂತೆ ಹಲವೆಡೆ ಮಾರಾಟ ವಿಷಯದಲ್ಲಿ ಮುಂಚೂಣಿಯಲ್ಲಿತ್ತು. ಅಲ್ಲಿಂದ ಈವರೆಗೂ ಸತತ ನಾಲ್ಕು ಮುದ್ರಣಗಳನ್ನು ಕಂಡು, ಇನ್ನೂ ದಾಖಲೆ ರೀತಿಯಲ್ಲಿ ಮಾರಾಟವಾಗುತ್ತಿದೆ. ಈ ಪುಸ್ತಕದೊಂದಿಗೆ ಪುನೀತ್ ಅವರ ಸಹಿ ಇರುವಂತಹ ಫೋಟೋ ಮತ್ತು ಬುಕ್ ಮಾರ್ಕ್ ಕೂಡ ಉಚಿತವಾಗಿ ಕೊಡಲಾಗುತ್ತಿದೆ.

ಈ ವರ್ಷದಲ್ಲಿ ಕನ್ನಡದಲ್ಲಿ ಬಂದ ಬಯೋಗ್ರಫಿಗಳಲ್ಲಿ ಅತೀ ಹೆಚ್ಚು ಮಾರಾಟ ಕಂಡ ಪುಸ್ತಕ ಎನ್ನುವ ಹೆಗ್ಗಳಿಕೆ ನೀನೇ ರಾಜಕುಮಾರ ಪುಸ್ತಕದ್ದು. ಪುನೀತ್ ಬಾಲ್ಯದಿಂದ ಹಿಡಿದು ನಿಧನದವರೆಗೂ ಅವರ ಬದುಕನ್ನು ಲೇಖಕರು ಕಟ್ಟಿಕೊಟ್ಟಿದ್ದಾರೆ. ಪುನೀತ್ ಸಿನಿಮಾ, ಸಮಾಜಸೇವೆ, ಜೀವನದಲ್ಲಿ ನಡೆದ ಘಟನೆಗಳು ಮತ್ತು ಕನ್ನಡ ಸಿನಿಮಾ ರಂಗದ ಸಂಕ್ಷಿಪ್ತ ಚರಿತ್ರೆ ಪುಸ್ತಕದಲ್ಲಿ ಅಡಕವಾಗಿದೆ. ಅಲ್ಲದೇ ಅಪರೂಪದ ಫೋಟೋಗಳನ್ನೂ ನೋಡಬಹುದು.

ಇದನ್ನೂ ಓದಿ: ಹಿಂದಿ ಬಿಗ್ ಬಾಸ್: ಸಲ್ಮಾನ್​ ಖಾನ್​ ಜೊತೆ ವಿಕ್ಕಿ ಕೌಶಲ್ ಮೋಜು ಮಸ್ತಿ

ಪುನೀತ್ ಅವರ ಸಾಕಷ್ಟು ಸಂದರ್ಶನಗಳನ್ನು ಮಾಡಿದ್ದ ಪತ್ರಕರ್ತ ಶರಣು ಹುಲ್ಲೂರು, ಅನೇಕ ಅಪರೂಪದ ಸಂಗತಿಗಳನ್ನು ಬರೆದಿದ್ದಾರೆ. ಖ್ಯಾತ ಪತ್ರಕರ್ತರಾದ ಮುರಳೀಧರ ಖಜಾನೆ ಮುನ್ನುಡಿ ಬರೆದಿದ್ದು, ಜೋಗಿ ಹಿನ್ನುಡಿ ಬರೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.