ETV Bharat / entertainment

ಓದೆಲಾ ರೈಲ್ವೆ ಸ್ಟೇಷನ್​ನಲ್ಲಿ ಕನ್ನಡದ ಸಿಂಹ… ವಸಿಷ್ಠನ ಅಭಿನಯಕ್ಕೆ ತೆಲುಗು ಪ್ರೇಕ್ಷಕ ಫಿದಾ

author img

By

Published : Aug 27, 2022, 8:57 AM IST

Odela Railway Station
ಓದೆಲಾ ರೈಲ್ವೆ ಸ್ಟೇಷನ್​ ಸಿನಿಮಾ

ಗಾಯಕನಾಗಿ ತೆಲುಗು ಚಿತ್ರಕ್ಕೆ ಪರಿಚಿತರಾಗಿದ್ದ ವಸಿಷ್ಠ ಸಿಂಹ ಈಗ ಓದೆಲಾ ರೈಲ್ವೆ ಸ್ಟೇಷನ್ ಚಿತ್ರದಲ್ಲಿ ನಾಯಕನಾಗಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿದ್ದಾರೆ.

ಸ್ಯಾಂಡಲ್ ವುಡ್​​ನಲ್ಲಿ ತೀಕ್ಷಣ ನೋಟ, ಗಮನ ಸೆಳೆಯುವ ಅಭಿನಯ, ಕೇಳುಗರನ್ನು ಮಂತ್ರ ಮುಗ್ದರನ್ನಾಗಿ ಮಾಡುವ ಕಂಚಿನ ಕಂಠದ ಗಾಯಕ ಕಂ ನಾಯಕ ವಸಿಷ್ಠ ಸಿಂಹ 'ಓದೆಲಾ ರೈಲ್ವೆ ಸ್ಟೇಷನ್' ಮೂಲಕ ತೆಲುಗು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ಈ ಚಿತ್ರ ಈಗ ಆಹಾ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು, ಚಿಟ್ಟೆ ಅಭಿನಯಕ್ಕೆ ತೆಲುಗು ಸಿನಿ ಪ್ರೇಕ್ಷಕರು ಫಿದಾ ಆಗಿದ್ದಾರೆ.

Odela Railway Station
ಓದೆಲಾ ರೈಲ್ವೆ ಸ್ಟೇಷನ್​ ಸಿನಿಮಾ

ಈ ಸಿನಿಮಾದಲ್ಲಿ ವಸಿಷ್ಠ ಸಿಂಹ, ತಿರುಪತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಧೋಬಿಯಾಗಿ ಮಿಂಚಿದ್ದಾರೆ. ಈವರೆಗೆ ಮಾಡಿರದಂತಹ ವಿಶಿಷ್ಟ ಪಾತ್ರದಲ್ಲಿ ವಸಿಷ್ಠ ಅಮೋಘವಾಗಿ ಅಭಿನಯಿಸಿದ್ದು, ಚೊಚ್ಚಲ ತೆಲುಗು ಸಿನಿಮಾದಲ್ಲಿ ಸಿಂಹ ಗೆದ್ದಿದ್ದಾರೆ. ಈ ಚಿತ್ರದಲ್ಲಿ ವಸಿಷ್ಠ ನಾಯಕನಾಗಿಯೂ ಹಾಗೂ ಖಳನಾಯಕನಾಗಿ ಅಬ್ಬರಿಸಿದ್ದಾರೆ.

Odela Railway Station
ಓದೆಲಾ ರೈಲ್ವೆ ಸ್ಟೇಷನ್​ ಸಿನಿಮಾ

'ಓದೆಲಾ ರೈಲ್ವೆ ಸ್ಟೇಷನ್' ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಖರೀಮ್ ನಗರದಲ್ಲಿ ನಡೆದ ಘಟನೆಯೊಂದನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಯುವ ನಿರ್ದೇಶಕ ಅಶೋಕ್ ತೇಜ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಹೆಬಾ ಪಟೇಲ್ ವಸಿಷ್ಠನಿಗೆ ಜೋಡಿಯಾಗಿ ನಟಿಸಿದ್ದಾರೆ.

Odela Railway Station
ಓದೆಲಾ ರೈಲ್ವೆ ಸ್ಟೇಷನ್​ ಸಿನಿಮಾ

ಗಾಯಕನಾಗಿ ತೆಲುಗು ಚಿತ್ರಕ್ಕೆ ಪರಿಚಿತರಾಗಿದ್ದ ವಸಿಷ್ಠ ಸಿಂಹ ಈಗ ನಾಯಕನಾಗಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿದ್ದಾರೆ. ಈ ಮೂಲಕ ತೆಲುಗು ನೆಲದಲ್ಲಿ ಗಾಯನದ ಜೊತೆಗೆ ಕಲಾ ಸೇವೆಯನ್ನೂ ಮುಂದುವರೆಸಲಿದ್ದಾರೆ. ಸದ್ಯ ವಸಿಷ್ಠ Love..ಲಿ, ಹೆಡ್ ಬುಷ್, ಸಿಂಬಾ, ತಲ್ವಾರ್ ಪೇಟೆ, ಡೇವಿಲ್ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಇದನ್ನೂ ಓದಿ: 'ನಾರಪ್ಪ' ನಂತ್ರ ಟಾಲಿವುಡ್​ನಲ್ಲಿ ಫುಲ್​ ಬ್ಯುಸಿಯಾದ ವಸಿಷ್ಠ ಸಿಂಹ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.