ETV Bharat / entertainment

ಒನ್ ಅಂಡ್ ಹಾಫ್​: ಶ್ರೇಯಸ್ ಚಿಂಗಾ ಜೊತೆ ತೆರೆ ಹಂಚಿಕೊಂಡ ಮಾನ್ವಿತಾ ಹರೀಶ್

author img

By ETV Bharat Karnataka Team

Published : Nov 24, 2023, 8:28 PM IST

ಒನ್ ಅಂಡ್ ಹಾಫ್​ ಸಿನಿಮಾದ ಫಸ್ಟ್ ಲುಕ್ ಅನಾವರಣಗೊಂಡಿದೆ.

one and half
'ಒನ್ ಅಂಡ್ ಹಾಫ್'

ಕನ್ನಡ ಚಿತ್ರರಂಗದಲ್ಲಿ ಹೊಸಬರ ಆಗಮನವಾಗುತ್ತಿದೆ. ವಿಭಿನ್ನ ಬಗೆಯ ಕಥಾಹಂದರವುಳ್ಳ ಚಿತ್ರಗಳ ಮೂಲಕ ಹೊಸಬರು ಪ್ರೇಕ್ಷಕರೆದುರು ಬರುತ್ತಿದ್ದಾರೆ. ಕಂಟೆಂಟ್​ಗೆ ಹೆಚ್ಚು ಮಹತ್ವ ಕೊಡಲಾಗುತ್ತಿದೆ. ಹೊಸ ತಂಡದಿಂದ ನಿರ್ಮಾಣಗೊಳ್ಳುತ್ತಿರುವ ಸಿನಿಮಾವೇ 'ಒನ್ ಅಂಡ್ ಹಾಫ್'.

one and half
'ಒನ್ ಅಂಡ್ ಹಾಫ್'

ಒನ್ ಅಂಡ್ ಹಾಫ್​ ಸಿನಿಮಾದ ಫಸ್ಟ್ ಲುಕ್: ರಂಗ್ಬಿರಂಗಿ, ಡೇವಿಡ್, ದಿ ವೆಕೆಂಟ್ ಹೌಸ್ ಸಿನಿಮಾಗಳ ಮೂಲಕ ಪರಿಚಿತರಾಗಿರುವ ಶ್ರೇಯಸ್ ಚಿಂಗಾ ಅವರು 'ಒನ್ ಅಂಡ್ ಹಾಫ್' ಸಿನಿಮಾ ಮೂಲಕ ನಿರ್ದೇಶಕರ ಕುರ್ಚಿ ಅಲಂಕರಿಸಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿಯೂ ಈ ತಂಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಶ್ರೇಯಸ್ ಚಿಂಗಾ ಜೊತೆ ಟಗರು ಪುಟ್ಟಿ ಮಾನ್ವಿತಾ ಹರೀಶ್ ಸ್ಕ್ರೀನ್ ಶೇರ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಸುಲಕ್ಷ್ಮೀ ಫಿಲಂಸ್ ನಿರ್ಮಾಣ ಸಂಸ್ಥೆಯ ಲೋಗೋ ಮತ್ತು ಒನ್ ಅಂಡ್ ಹಾಫ್​ ಸಿನಿಮಾದ ಫಸ್ಟ್ ಲುಕ್ ಅನಾವರಣಗೊಂಡಿದೆ.

ಶ್ರೇಯಸ್ ಚಿಂಗಾ ಮಾತನಾಡಿ, ''ಒನ್ ಅಂಡ್ ಹಾಫ್''​ ಕಂಪ್ಲೀಟ್ ಕಾಮಿಡಿ ಸಿನಿಮಾ. ಶೂಟಿಂಗ್ ಇಂದು ಶುರುವಾಗಿದೆ. ಮಾನ್ವಿತಾ ಹರೀಶ್ ಅವರು​​ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಬೆಂಗಳೂರು, ಗೋವಾ ಭಾಗದಲ್ಲಿ ಚಿತ್ರೀಕರಣ ನಡೆಸಲು ಯೋಜನೆ ಹಾಕಿಕೊಂಡಿದ್ದೇವೆ. ಮಣಿಕಾಂತ್ ಕದ್ರಿ ಅವರ ಸಂಗೀತ ನಮ್ಮ ಸಿನಿಮಾಗಿರಲಿದೆ ಎಂದು ತಿಳಿಸಿದರು.

one and half
'ಒನ್ ಅಂಡ್ ಹಾಫ್' ತಂಡ

ನಟಿ ಮಾನ್ವಿತಾ ಹರೀಶ್ ಮಾತನಾಡಿ, ಈ ಸಿನಿಮಾ ಮಾಡಲು ಬಹಳ ಕಾರಣಗಳಿವೆ. ಶ್ರೇಯಸ್ ಅವರು ಹೇಳಿದ ಕಥೆ ಇಷ್ಟವಾಯ್ತು. ಅವರು ಉತ್ತಮ ನಟ, ಬರಹಗಾರ. ಒಂದೊಳ್ಳೆ ತಂಡದ ಜೊತೆ ಕೆಲಸ ಮಾಡುತ್ತಿದ್ದೇನೆ. ನನ್ನ ಪಾತ್ರದ ಹೆಸರು ನಿಧಿ, ಟ್ರಬಲ್ ಮೇಕರ್. ಒಂದೊಳ್ಳೆ ಪಾತ್ರ ಎಂದು ಸಂತಸ ಹಂಚಿಕೊಂಡರು.

ನಿರ್ಮಾಪಕ ಚರಣ್ ಸುಬ್ಬಯ್ಯ ಮಾತನಾಡಿ, ನಮ್ಮ ಸಂಸ್ಥೆಗೆ ಸುಲಕ್ಷ್ಮೀ ಫಿಲ್ಮಂಸ್ ಎಂದು ಹೆಸರಿಟ್ಟಿದ್ದೇವೆ. ಸು ಅಂದರೆ ಸುಬ್ಬಯ್ಯ ನಮ್ಮ ತಾತ, ಲಕ್ಷ್ಮೀ ಅಂದರೆ ಅಜ್ಜಿ, ನಮ್ಮ ಮನೆ ಹೆಸರು ಸುಲಕ್ಷ್ಮೀ. ಹೀಗಾಗಿ ನಮ್ಮ ಪ್ರೊಡಕ್ಷನ್ ಹೌಸ್​ಗೆ ಈ ಹೆಸರಿಟ್ಟಿದ್ದೇವೆ. ನಾನು ನಿರ್ಮಾಪಕನಾಗುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ನಾನೋರ್ವ ಚಿತ್ರನಟ. ರಂಗ್ಬಿರಂಗಿ ಅಲ್ಲಿ ನಟಿಸಿದ್ದೇನೆ. ಅಂದೇ ನಾನು ನಿರ್ಮಾಪಕನಾಗುತ್ತೇನೆ ಎಂದಿದ್ದೆ ಎಂದು ತಿಳಿಸಿದರು.

ಇದನ್ನೂ ಓದಿ: 'ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ': ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

ಸಾಧು ಕೋಕಿಲಾ, ಅನಿನಾಶ್ ಯೆಳಂದೂರ್, ಸುಚೇಂದ್ರ ಪ್ರಸಾದ್, ಸ್ಪರ್ಶ ರೇಖಾ, ಅನಂತು, ಸುಂದರಶ್ರೀ, ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕುಮಾರ್, ಮಹಾಂತೇಶ್ ಹಿರೇಮಠ್, ನಿಕಿತಾ ದೋರ್ತೊಡಿ, ಲಲಿತಾ ನಾಯಕ್, ರೋಹಿತ್ ಅರುಣ್, ಅಮಾನ್, ರಾಖಿ ಭೂತಪ್ಪ ತಾರಾಬಳಗದಲ್ಲಿದ್ದಾರೆ. ವಿಶೇಷ ಅಂದರೆ ಸಿನಿಮಾದಲ್ಲಿ ಹೀರೋಗೆ ಕನ್ನಡ ಎಂಬ ಹೆಸರಿಡಲಾಗಿದೆ.

ಇದನ್ನೂ ಓದಿ: ಮಗಳ ಹೆಸರನ್ನು ಟ್ಯಾಟೂ ಹಾಕಿಸಿಕೊಂಡ ರಣ್​​​ಬೀರ್ ಕಪೂರ್: ವಿಡಿಯೋ ನೋಡಿ

ದೇವೇಂದ್ರ ಅವರ ಛಾಯಾಗ್ರಹಣ, ಮಣಿಕಾಂತ್ ಕದ್ರಿ ಅವರ ಸಂಗೀತ ಈ ಒನ್ ಅಂಡ್ ಆಫ್ ಸಿನಿಮಾಕ್ಕಿದೆ. ರೊಮ್ಯಾಂಟಿಕ್ ಕಾಮಿಡಿ ಕಥಾಹಂದರವುಳ್ಳ ಒನ್ ಅಂಡ್ ಆಫ್ ಸಿನಿಮಾವನ್ನು ಸುಲಕ್ಷ್ಮೀ ಫಿಲಂಸ್ ಅಡಿ ಚರಣ್ ಸುಬ್ಬಯ್ಯ ನಿರ್ಮಾಣ ಮಾಡುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.