ETV Bharat / entertainment

ಪ್ರಭುದೇವ ನಟನೆಯ 'WOLF' ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವಣ್ಣ

author img

By

Published : Feb 4, 2023, 4:35 PM IST

ನಟ ಪ್ರಭುದೇವ ಅಭಿನಯದ ವೂಲ್ಫ್ (wolf) ಚಿತ್ರದ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಅನ್ನು ನಟ ಶಿವ ರಾಜ್​ಕುಮಾರ್​ ಬಿಡುಗಡೆ ಮಾಡಿದ್ದಾರೆ.

Wolf movie first look
ವೂಲ್ಫ್ ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಪ್ರಭುದೇವ ಅಭಿನಯದ ಚಿತ್ರಕ್ಕೆ ಶಿವಣ್ಣ ಸಾಥ್

H20 ಹಾಗೂ 123 ಸಿನಿಮಾಗಳು ಆದ ಮೇಲೆ ಹಲವು ವರ್ಷಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿರುವ ಪ್ರತಿಭಾನ್ವಿತ ನಟ ಪ್ರಭುದೇವ. ಇಂಡಿಯನ್ ಮೈಕಲ್ ಜಾಕ್ಸನ್ ಅಂತಾ ಕರೆಸಿಕೊಂಡಿರುವ ಪ್ರಭುದೇವ, ಈಗಾಗಲೇ ಬಿಡುಗಡೆ ಕಂಡಿರುವ ದಿವಂಗತ ಪುನೀತ್​ ರಾಜ್​ಕುಮಾರ್​ ನಟನೆಯ ಲಕ್ಕಿಮ್ಯಾನ್ ಚಿತ್ರದ ಮೂಲಕ ಕನ್ನಡ ಚಿತ್ರರಂಗದ ಕಡೆ ಮುಖ ಮಾಡಿದ್ದಾರೆ. ಸದ್ಯ ಕನ್ನಡದಲ್ಲಿ ಮೂರು‌ ಚಿತ್ರಗಳಲ್ಲಿ ಅಭಿನಯ ಮಾಡುತ್ತಿರುವ ಪ್ರಭುದೇವ ಅವರು ಹ್ಯಾಟ್ರಿಕ್​ ಹೀರೋ ಶಿವ ರಾಜ್​ಕುಮಾರ್ ಜೊತೆಯೂ ಒಂದು ಸಿನಿಮಾ‌ ಮಾಡುತ್ತಿದ್ದಾರೆ.

ವೂಲ್ಫ್ ಫಸ್ಟ್ ಲುಕ್ ಬಿಡುಗಡೆ ಮಾಡಿದ ಶಿವಣ್ಣ: ಈ ಮಧ್ಯೆ ಪ್ರಭುದೇವ ವೂಲ್ಫ್ (wolf) ಎಂಬ ಪ್ಯಾನ್‌ ಇಂಡಿಯಾ ಸಿನಿಮಾ ಮಾಡುತ್ತಿರೋದು ನಿಮಗೆಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಈ ಸಿನಿಮಾಗೆ ಹ್ಯಾಟ್ರಿಕ್ ಹೀರೋ ಶಿವ ರಾಜ್​ಕುಮಾರ್ ಸಾಥ್ ಸಿಕ್ಕಿದೆ. ಈ ಚಿತ್ರದ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಅನಾವರಣ ಮಾಡಿ ಗೆಳೆಯ ಪ್ರಭುದೇವ ಸಿನಿಮಾಗೆ ಕರುನಾಡ ಚಕ್ರವರ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ‌.

ವೂಲ್ಫ್ ಶೂಟಿಂಗ್​ ಕಂಪ್ಲೀಟ್​: ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಪ್ರಭುದೇವ ಮುಖ್ಯಭೂಮಿಕೆಯಲ್ಲಿರೋ ವೂಲ್ಫ್ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಬಹುಕೋಟಿ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರವನ್ನು ಪಾಂಡಿಚೆರಿ, ಚೆನೈ, ಬೆಂಗಳೂರು, ಅಂಡಮಾನ್ ನಿಕೋಬಾರ್ ಮುಂತಾದ ಕಡೆಗಳನ್ನು 65 ದಿನಗಳ ಚಿತ್ರೀಕರಣ ಮಾಡಲಾಗಿದೆ.

ಇದನ್ನೂ ಓದಿ: ಖೆಯೊಸ್ ಸಿನಿಮಾ‌ ಮೂಲಕ ಮತ್ತೆ ಅದೃಷ್ಟ ಪರೀಕ್ಷೆಗಿಳಿದ ಶಶಿಕುಮಾರ್ ಪುತ್ರ ಅಕ್ಷಿತ್

ಪ್ರಭುದೇವ ಜೊತೆ ಅಂಜು ಕುರಿಯನ್, ಲಕ್ಷ್ಮಿ ರೈ, ಪುಷ್ಪ ಖ್ಯಾತಿಯ ಅನಸೂಯ ಮುಂತಾದವರು ಅಭಿನಯಿಸಿದ್ದಾರೆ. ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: ಹಿರಿಯ ಕಲಾವಿದರು ಹಾಗೂ ತಂತ್ರಜ್ಞರ ಸಹಾಯಕ್ಕಾಗಿ ಶುರುವಾಗಲಿದೆ ಟೆಲಿವಿಷನ್ ಪ್ರಿಮಿಯರ್ ಕ್ರಿಕೆಟ್ ಲೀಗ್ 2

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣ‌ ಮಾಡಿದ್ದಾರೆ. ಸದ್ಯ ಫಸ್ಟ್ ಲುಕ್​ನಿಂದ ಗಮನ‌ ಸೆಳೆಯುತ್ತಿರೋ ವೋಲ್ಫ್ ಚಿತ್ರ ಸದ್ಯದಲ್ಲೇ ಬಿಡುಗಡೆ ಆಗಲಿದೆ.

ಇದನ್ನೂ ಓದಿ: 'ವೂಲ್ಫ್'​​​ ಆಗಿ ಬರಲಿದ್ದಾರೆ ಪ್ರಭುದೇವ; ಡ್ಯಾನ್ಸ್​ಕಿಂಗ್​ ಚಿತ್ರದ ಶೂಟಿಂಗ್​ ಮುಕ್ತಾಯ

ದಿವಂಗತ ಪುನೀತ್​ ರಾಜ್​ಕುಮಾರ್​ ಅಭಿನಯದ ಕೊನೆಯ ಚಿತ್ರ ಲಕ್ಕಿಮ್ಯಾನ್. ನಟ ಡಾರ್ಲಿಂಗ್ ಕೃಷ್ಣ, ಸಂಗೀತ ಶೃಂಗೇರಿ ಹಾಗೂ ರೋಹಿಣಿ ಪ್ರಕಾಶ್ ಮುಖ್ಯ ಭೂಮಿಕೆಯಲ್ಲಿದ್ದ ಈ ಚಿತ್ರ ಕಳೆದ ಸೆಪ್ಟೆಂಬರ್​ ತಿಂಗಳಿನಲ್ಲಿ ತೆರೆಕಂಡು ಪ್ರೇಕ್ಷಕರ ಮನ ಗೆದ್ದಿತ್ತು. ಪುನೀತ್ ರಾಜ್​ಕುಮಾರ್ ಮತ್ತು ಪ್ರಭುದೇವ ಒಟ್ಟಿಗೆ ನೃತ್ಯ ಮಾಡಿದ್ದು, ಈ ಚಿತ್ರದ ವಿಶೇಷತೆ ಆಗಿತ್ತು. ಈ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರ ಮಾಡಿ, ದೇವರ ರೂಪದಲ್ಲಿ ಕಾಣಿಸಿಕೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.