ಶೇ 80 ರಷ್ಟು ಮಳೆಯಲ್ಲೇ ಚಿತ್ರೀಕರಣವಾಗಿರೋ 'ಮಾನ್ಸೂನ್ ರಾಗ': ರಿಲೀಸ್ ಡೇಟ್​ ಯಾವಾಗ ಗೊತ್ತಾ?

author img

By

Published : Aug 6, 2022, 1:14 PM IST

Mansoon Raaga

Monsoon Raaga Trailer: ಡಾಲಿ ಧನಂಜಯ್, ರಚಿತಾ ರಾಮ್ ನಟನೆಯ 'ಮಾನ್ಸೂನ್ ರಾಗ' ಸಿನಿಮಾ ಟ್ರೈಲರ್‌ ರಿಲೀಸ್ ಆಗಿದೆ. ಅಂದಹಾಗೆ ಇದು ಭಾವನಾತ್ಮಕವಾಗಿರುವ ಮ್ಯೂಸಿಕಲ್ ಸಿನಿಮಾ ಎಂದು ಟ್ರೈಲರ್‌ ನೋಡಿದಾಗ ಗೊತ್ತಾಗುತ್ತಿದೆ.

'ಮಾನ್ಸೂನ್ ರಾಗ' ಶೀರ್ಷಿಕೆಯಿಂದಲೇ ಕನ್ನಡ ಚಿತ್ರರಂಗದಲ್ಲಿ ಟಾಕ್ ಆಗುತ್ತಿರುವ ಚಿತ್ರ. 'ನಟ ರಾಕ್ಷಸ' ಎಂದೇ ಖ್ಯಾತಿ ಪಡೆದಿರುವ ಡಾಲಿ ಧನಂಜಯ್, ಡಿಂಪಲ್ ಕ್ವೀನ್ ರಚಿತಾ ರಾಮ್ ಮೊದಲ ಬಾರಿಗೆ ಒಟ್ಟಾಗಿ ಸ್ಕ್ರೀನ್ ಹಂಚಿಕೊಂಡಿರುವ ನಿರೀಕ್ಷೆಯ ಸಿನಿಮಾ. ಸದ್ಯ ಹಾಡುಗಳಿಂದಲೇ ಸಿನಿ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿರೋ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಿನ್ನೆ ನಡೆಯಿತು.

ಟ್ರೈಲರ್ ಬಿಡುಗಡೆ ನಂತರ ಚಿತ್ರದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ರಚಿತಾ ರಾಮ್, "ಡಾಲಿ ಧನಂಜಯ ಅವರು ನಿಜಕ್ಕೂ ನಟ ರಾಕ್ಷಸ. ಅವರ ಜೊತೆ ನಟಿಸೋದು ನನಗೂ ಚಾಲೆಂಜಿಂಗ್ ಆಗಿತ್ತು. ಈ ಚಿತ್ರದ ಸಂಭಾಷಣೆ ತುಂಬ ಚೆನ್ನಾಗಿದೆ. ಇಡೀ ಸಿನಿಮಾ ತುಂಬ ಚೆನ್ನಾಗಿ ಮೂಡಿಬಂದಿದೆ.

ನಾನು ಈ ಚಿತ್ರದಲ್ಲಿ ಲೈಂಗಿಕ ಕಾರ್ಯಕರ್ತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಲೈಂಗಿಕ ಕಾರ್ಯಕರ್ತೆ ಪಾತ್ರವನ್ನು ತುಂಬ ನೀಟ್ ಆಗಿ ತೋರಿಸಿದ್ದಾರೆ. ಪುಷ್ಪಕ ವಿಮಾನ ಸಿನಿಮಾದಲ್ಲಿ ನಾನು ನಟಿಸಿದ್ದೆ, ಅದೇ ತಂಡ ಈ ಸಿನಿಮಾ ಮಾಡಿದೆ. ಮತ್ತೆ ಅವರ ಜೊತೆ ಕೆಲಸ ಮಾಡಿದ್ದು ತುಂಬ ಖುಷಿ ಕೊಟ್ಟಿದೆ. ಮಾನ್ಸೂನ್ ಸಮಯದಲ್ಲಿ ಸಿನಿಮಾದ ಶೂಟಿಂಗ್ ಮಾಡಿದ್ದೆವು. ಆದರೆ, ಮಾನ್ಸೂನ್ ಸಮಯದಲ್ಲೇ ರಿಲೀಸ್ ಆಗತ್ತೆ ಅಂತ ಗೊತ್ತಿರಲಿಲ್ಲ. ಈ ಸಿನಿಮಾ ಹಾಡುಗಳನ್ನು ಕೇಳಿದರೆ ಮೈ ರೋಮಾಂಚನವಾಗುತ್ತದೆ. ಪ್ರತಿ ಪಾತ್ರವನ್ನು ಕೂಡ ತುಂಬ ಅದ್ಭುತವಾಗಿ ತೋರಿಸಿದ್ದಾರೆ" ಎಂದರು.

ಸಿನಿಮಾ ಚನ್ನಾಗಿ ಬಂದಿದೆ- ಡಾಲಿ: ಬಳಿಕ ಮಾತನಾಡಿದ ಡಾಲಿ ಧನಂಜಯ್ , ಸಿನಿಮಾ ತುಂಬ ಚೆನ್ನಾಗಿ ಬಂದಿದೆ. ರಚಿತಾ ರಾಮ್ ಜೊತೆ ಮೊದಲ ಬಾರಿಗೆ ನಟಿಸಿದ್ದೇನೆ. ಸ್ಯಾಂಡಲ್‌ವುಡ್‌ನಲ್ಲಿ ಬ್ಯುಸಿ ಇರುವ ನಟಿ ರಚಿತಾ ಅವರು ನನ್ನ ಜೊತೆ ಅದ್ಭುತವಾಗಿ ಆರಾಮಾಗಿ ನಟಿಸಿದ್ದಾರೆ. ಸುಹಾಸಿನಿ, ಯಶಾ ಶಿವಕುಮಾರ್ ಅವರು ಕೂಡ ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ದಯವಿಟ್ಟು ನೋಡಿ. ಇಲ್ಲಿ ಮುಜುಗರ ಆಗುವಂತಹ ದೃಶ್ಯ ಇಲ್ಲ, ಇಡೀ ಕುಟುಂಬ ಕೂತು ಸಿನಿಮಾ ನೋಡಬಹುದು, ಇಡೀ ರಾತ್ರಿಯೆಲ್ಲ ಮಳೆಯಲ್ಲಿ ಸಿನಿಮಾ ಶೂಟಿಂಗ್ ಮಾಡಿದ್ದೇವೆ ಅಂದರು.

ಇದುವರೆಗೂ ನೋಡಿರದ ಪಾತ್ರದಲ್ಲಿ ಡಿಂಪಲ್​: 'ಮಾನ್ಸೂನ್ ರಾಗ' ಚಿತ್ರದ ನಿರ್ದೇಶಕ ಎಸ್ ರವೀಂದ್ರನಾಥ್ ಮಾತನಾಡಿ, ಇದುವರೆಗೂ ನೋಡಿರದ ಪಾತ್ರದಲ್ಲಿ ರಚಿತಾ ರಾಮ್ ಕಾಣಿಸಿಕೊಂಡಿದ್ದಾರೆ. ಕೆಲವೊಂದು ದೃಶ್ಯದಲ್ಲಿ ಧನಂಜಯ, ರಚಿತಾ ರಾಮ್ ಅವರು ಚಾಲೆಂಜಿಂಗ್ ಆಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್ ಅವರು ಸೀರಿಯಸ್ ಆಗಿದ್ದೂ, ನಗಿಸುತ್ತಾರೆ. ಸುಹಾಸಿನಿ, ಅಚ್ಯುತ್ ಕುಮಾರ್ ಅವರ ಕಾಂಬಿನೇಶನ್ ಅದ್ಭುತವಾಗಿ ಬಂದಿದೆ. ಯಶಾ ಶಿವಕುಮಾರ್ ಅವರ ಡ್ಯಾನ್ಸ್ ಹೇಗಿದೆ ಎಂದು 'ರಾಗ ಸುಧಾ' ಎಂಬ ಹಾಡಲ್ಲಿ ನೋಡಿದ್ದೀರಿ, ಅಭಿನಯವನ್ನು ನೀವು ಸಿನಿಮಾದಲ್ಲಿ ನೋಡಬಹುದು ಎಂದರು.

ಇನ್ನು ಚಿತ್ರದ ನಿರ್ಮಾಪಕ ವಿಖ್ಯಾತ್ ಮಾತನಾಡಿ, ಶೇ 80ರಷ್ಟು ಸಿನಿಮಾ ಮಳೆಯಲ್ಲಿ ಶೂಟಿಂಗ್ ಮಾಡಲಾಗಿದೆ. ನಾವು ಸುಮ್ಮನೆ ಕಲಾವಿದರನ್ನು ಕರೆದುಕೊಂಡು ಸಿನಿಮಾ ಮಾಡೋದಿಲ್ಲ, ಸಿನಿಮಾ ಕಂಟೆಂಟ್‌ ಜನರಿಗೆ ರೀಚ್ ಆಗಬೇಕು ಅನ್ನೋದು ನಮ್ಮ ಉದ್ದೇಶ ಎಂದು ಹೇಳಿದರು.

ಚಿತ್ರದಲ್ಲಿ ಧನಂಜಯ್ , ರಚಿತಾ ರಾಮ್ ಮಾತ್ರವಲ್ಲದೇ ಅಚ್ಯುತ್ ಕುಮಾರ್, ಸುಹಾಸಿನಿ, ಶೋಭರಾಜ್, ಯಶಾ ಶಿವಕುಮಾರ್ ನಟಿಸಿದ್ದಾರೆ. ಗುರು ಕಶ್ಯಪ್ ಸಂಭಾಷಣೆ ಬರೆದಿದ್ದಾರೆ. ಎಸ್ ಕೆ ರಾವ್ ಛಾಯಾಗ್ರಹಣ, ಅನುಪ್ ಸೀಳಿನ್ ಸಂಗೀತ ಚಿತ್ರಕ್ಕಿದೆ. ಸದ್ಯಕ್ಕೆ ಟ್ರೈಲರ್ ಸಿನಿಮಾ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದ್ದು, ರಾಜ್ಯಾದ್ಯಂತ ಆಗಸ್ಟ್ 19ಕ್ಕೆ ರಿಲೀಸ್ ಆಗುತ್ತಿದೆ.

ಇದನ್ನೂ ಓದಿ: ಸೋದರಿ ನೆನೆದು ಕಣ್ಣೀರಿಟ್ಟ ಸೂಪರ್‌ಸ್ಟಾರ್ ಅಕ್ಷಯ್​ ಕುಮಾರ್​ ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.