ETV Bharat / international

ಕೆನಡಾದಲ್ಲಿ ಭಾರತ ಮೂಲದ ಒಂದೇ ಕುಟುಂಬದ ನಾಲ್ವರು ಸಾವು: ವಿಪರೀತ ಚಳಿ​​ ಕಾರಣ?

author img

By

Published : Jan 28, 2022, 12:03 PM IST

ಕೆನಡಾದಲ್ಲಿ ಅಮೆರಿಕ ಗಡಿಯಲ್ಲಿರುವ ಮನಿಟೋಬಾ ಎಂಬಲ್ಲಿ ಗುಜರಾತ್ ಮೂಲದ ಕುಟುಂಬವೊಂದರ ನಾಲ್ವರು ಸಾವನ್ನಪ್ಪಿದ್ದು, ಅವರ ಸಾವಿಗೆ ಚಳಿ ಕಾರಣವಾಗಿದೆ ಎಂಬ ಪ್ರಾಥಮಿಕ ಮಾಹಿತಿ ಹೊರ ಬಿದ್ದಿದೆ.

Indian family found dead near US-Canada border identified
ಕೆನಡಾದಲ್ಲಿ ಭಾರತ ಮೂಲದ ಒಂದೇ ಕುಟುಂಬದ ನಾಲ್ವರು ಸಾವು

ಟೊರೊಂಟೋ(ಕೆನಡಾ): ಮೂರು ವರ್ಷದ ಮಗು ಸೇರಿ ಒಂದೇ ಕುಟುಂಬದ ನಾಲ್ವರು ಭಾರತೀಯ ಸಾವನ್ನಪ್ಪಿರುವ ಘಟನೆ ಕೆನಡಾದಲ್ಲಿ ಅಮೆರಿಕ ಗಡಿಯಲ್ಲಿರುವ ಮನಿಟೋಬಾ ಎಂಬಲ್ಲಿ ನಡೆದಿರುವ ಬಗ್ಗೆ ಕೆನಡಾದ ಪ್ರಾಧಿಕಾರ ಭಾರತದ ಹೈಕಮಿಷನ್ ಮಾಹಿತಿ ನೀಡಿದೆ.

ಜನವರಿ 19ರಂದು ಘಟನೆ ನಡೆದಿದ್ದು, ಜಗದೀಶ್ ಬಲದೇವಭಾಯ್ ಪಟೇಲ್ (39), ವೈಶಾಲಿಬೆನ್ ಜಗದೀಶ್‌ಕುಮಾರ್ ಪಟೇಲ್ (37), ವಿಹಂಗಿ ಜಗದೀಶ್‌ಕುಮಾರ್ ಪಟೇಲ್ (11) ಮತ್ತು ಧಾರ್ಮಿಕ್ ಜಗದೀಶ್‌ಕುಮಾರ್ ಪಟೇಲ್ (3) ಮೃತಪಟ್ಟವರಾಗಿದ್ದಾರೆ.

ಭಾರತದ ಹೈಕಮಿಷನ್‌ನ ಅಧಿಕಾರಿಗಳು ಮೃತರ ಮುಂದಿನ ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಜೊತೆಗೆ ಅವರಿಗೆ ಎಲ್ಲ ಬೆಂಬಲವನ್ನು ಒದಗಿಸಲಾಗುತ್ತಿದೆ. ಮನಿಟೋಬಾ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ ಮೃತದೇಹಗಳನ್ನು ವಶಕ್ಕೆ ಪಡೆದಿದೆ ಎಂದು ಭಾರತೀಯ ಹೈಕಮಿಷನ್ ಹೇಳಿದೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಸಾವಿಗೆ ಚಳಿ ಕಾರಣ: ಹೆಪ್ಪುಗಟ್ಟಿದ ರೀತಿಯಲ್ಲಿ ಮೃತದೇಹಗಳು ಪತ್ತೆಯಾಗಿದ್ದು, ವಿಪರೀತ ಚಳಿಯ ಕಾರಣದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರು ಗುಜರಾತ್ ಮೂಲದವರಾಗಿದ್ದು, ಅವರು ಸ್ಥಳೀಯ ಏಜೆಂಟ್​ಗಳ ಸಹಾಯವನ್ನು ಪಡೆದಿದ್ದರೇ? ಎಂಬ ಬಗ್ಗೆ ಗುಜರಾತ್ ಅಪರಾಧ ತನಿಖಾ ಇಲಾಖೆ ಮಾಹಿತಿ ನೀಡಿದೆ.

ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್ ಮತ್ತು ಟೊರೊಂಟೊದಲ್ಲಿರುವ ಭಾರತದ ಕಾನ್ಸುಲೇಟ್ ಕಚೇರಿ ಈ ಘಟನೆಯ ತನಿಖೆಗೆ ಎಲ್ಲ ರೀತಿಯ ಬೆಂಬಲ ನೀಡುವುದನ್ನು ಮುಂದುವರೆಸಿದೆ. ಈ ಕುರಿತಂತೆ ಕೆನಡಾದ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಮೂವರು ಪೊಲೀಸರ ಮೇಲೆ ಗುಂಡಿನ ದಾಳಿ.. ಕಾರಿನಲ್ಲಿ ದುಷ್ಕರ್ಮಿ ಪರಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.