ETV Bharat / international

ನೆದರ್ಲ್ಯಾಂಡ್​ನಲ್ಲಿ ಅಸ್ಟ್ರಾಜೆನೆಕಾ ಲಸಿಕೆ ಬಳಕೆ ಸ್ಥಗಿತ

author img

By

Published : Mar 15, 2021, 10:03 AM IST

ಮುಂದಿನ ಎರಡು ವಾರಗಳಲ್ಲಿ ಅಸ್ಟ್ರಾಜೆನೆಕಾ ಲಸಿಕೆ ಬಳಕೆಯನ್ನು ಡಚ್ ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ. ಡಚ್ ಮೆಡಿಸಿನ್ಸ್ ಮೌಲ್ಯಮಾಪನ ಮಂಡಳಿ (ಸಿಬಿಜಿ) ಮುನ್ನೆಚ್ಚರಿಕೆ ಕ್ರಮವಾಗಿ ಅಸ್ಟ್ರಾಜೆನೆಕಾ ಕರೋನಾ ಲಸಿಕೆ ಬಳಕೆಯನ್ನು ನಿಲ್ಲಿಸಲು ಸಲಹೆ ನೀಡಿದೆ.

Netherlands suspends use of AstraZeneca vaccine
ನೆದರ್ಲ್ಯಾಂಡ್​ನಲ್ಲಿ ಅಸ್ಟ್ರಾಜೆನೆಕಾ ಲಸಿಕೆ ಬಳಕೆಯನ್ನು ಸ್ಥಗಿತ

ಮಾಸ್ಕೋ: ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಬಳಕೆಯನ್ನು ಡಚ್ ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ. ಇತ್ತೀಚಿನ ಕೆಲವು ಪ್ರಕರಣಗಳಲ್ಲಿ ಈ ಲಸಿಕೆ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುವಿಕೆಯ ಘಟನೆಗಳು ವರದಿಯಾಗಿವೆ. ಈ ಕಾರಣದಿಂದ ಅಸ್ಟ್ರಾಜೆನೆಕಾ ಲಸಿಕೆ ಬಳಕೆಯನ್ನು ನಿಲ್ಲಿಸುತ್ತಿದ್ದಾರೆ.

ಡಚ್ ಮೆಡಿಸಿನ್ಸ್ ಮೌಲ್ಯಮಾಪನ ಮಂಡಳಿ (ಸಿಬಿಜಿ) ಮುನ್ನೆಚ್ಚರಿಕೆ ಕ್ರಮವಾಗಿ ಅಸ್ಟ್ರಾಜೆನೆಕಾ ಕರೋನಾ ಲಸಿಕೆ ಬಳಕೆಯನ್ನು ಸ್ಥಗಿತಗೊಳಿಸಲು ಸಲಹೆ ನೀಡಿದೆ ಎಂದು ಡಚ್ ಸರ್ಕಾರ ಭಾನುವಾರ ಪ್ರಕಟಿಸಿದೆ.

ಮಾರ್ಚ್ 28 ರವರೆಗೆ ಮುಂದಿನ ಎರಡು ವಾರಗಳಲ್ಲಿ ಅಸ್ಟ್ರಾಜೆನೆಕಾ ಲಸಿಕೆಯನ್ನು ಬಳಸಲಾಗುವುದಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ನಾರ್ವೆಯಲ್ಲಿ ರಕ್ತ ಹೆಪ್ಪುಗಟ್ಟುವ ಘಟನೆಗಳ ಬಗ್ಗೆ ಹೊಸ ಮಾಹಿತಿ ಹೊರಬಿದ್ದಿದ್ದರಿಂದ ಐರ್ಲೆಂಡ್​ನಲ್ಲಿ ಅಸ್ಟ್ರಾಜೆನೆಕಾ ಲಸಿಕೆ ಬಳಕೆಯನ್ನು ಅಮಾನತುಗೊಳಿಸಿದೆ.

ಇದನ್ನೂ ಓದಿ: ಮ್ಯಾನ್ಮಾರ್‌ ರಕ್ತಪಾತಕ್ಕೆ ಖಂಡನೆ ವ್ಯಕ್ತಪಡಿಸಿದ ಕ್ರಿಸ್ಟೀನ್ ಶ್ರೆನರ್ ಬರ್ಗೆನರ್

ಅಸ್ಟ್ರಾಜೆನೆಕಾ ಲಸಿಕೆ ಪಡೆದ ವಯಸ್ಕರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಹೆಚ್ಚಿನ ಪ್ರಕರಣಗಳು ಕಂಡು ಬಂದಿವೆ ಎಂದು ನಾರ್ವೇಜಿಯನ್ ಮೆಡಿಸಿನ್ಸ್ ಏಜೆನ್ಸಿ ಶನಿವಾರ ತಿಳಿಸಿದೆ. ಈ ವಾರದ ಆರಂಭದಲ್ಲಿ, ಡೆನ್ಮಾರ್ಕ್, ಐಸ್ಲ್ಯಾಂಡ್ ಮತ್ತು ನಾರ್ವೆ ಸೇರಿದಂತೆ ಹಲವಾರು ಯುರೋಪಿಯನ್ ರಾಷ್ಟ್ರಗಳು ಅಸ್ಟ್ರಾಜೆನೆಕಾ ಲಸಿಕೆ ಬಳಕೆಯನ್ನು ನಿಲ್ಲಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.