Omicron ಭೀತಿ: ತನ್ನ ಮದುವೆಯನ್ನು ರದ್ದುಪಡಿಸಿದ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ

author img

By

Published : Jan 23, 2022, 4:55 PM IST

New Zealand PM Jacinda Ardern

New Zealand PM Jacinda Ardern cancels her wedding amid Omicron surge: ಕೊರೊನಾ ವೈರಸ್ ವಿಶ್ವದಾದ್ಯಂತ ವೇಗವಾಗಿ ಹರಡುತ್ತಿದೆ. ನ್ಯೂಜಿಲೆಂಡ್ ಕೂಡ ಇದಕ್ಕೆ ಹೊರತಾಗಿಲ್ಲ. ಈ ನಡುವೆ ಸಾಂಕ್ರಾಮಿಕ ರೋಗದಿಂದಾಗಿ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ತಮ್ಮ ಮದುವೆಯನ್ನು ರದ್ದುಗೊಳಿಸಿದ್ದಾರೆ.

ವೆಲ್ಲಿಂಗ್ಟನ್ (ನ್ಯೂಜಿಲೆಂಡ್): ಕೊರೊನಾ ರೂಪಾಂತರಿ ಓಮಿಕ್ರಾನ್​​ನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ತಮ್ಮ ಮದುವೆಯನ್ನು ರದ್ದುಗೊಳಿಸಿರುವುದಾಗಿ ಭಾನುವಾರ ತಿಳಿಸಿದ್ದಾರೆ.

ನನ್ನ ಮದುವೆಯೂ ಮುಂದಿನ ದಿನಗಳಲ್ಲಿ ನಡೆಯುವುದಿಲ್ಲ. ದೇಶದ ಇತರ ಪ್ರಜೆಗಳಂತೆ ನಾನೂ ಈ ಸಾಂಕ್ರಾಮಿಕದ ಪರಿಣಾಮವನ್ನು ಅನುಭವಿಸುತ್ತೇನೆ. ಸೋಂಕಿನಿಂದ ಹೆಚ್ಚು ಸಂಕಷ್ಟಕ್ಕೊಳಗಾದ ನ್ಯೂಜಿಲೆಂಡ್​​ನ ಸಾವಿರಾರು ಮಂದಿಯಲ್ಲಿ ನಾನೂ ಒಬ್ಬಳಾಗುತ್ತೇನೆ ಎಂದು ಅರ್ಡೆರ್ನ್ ಹೇಳಿದ್ದಾರೆ.

ಇದನ್ನೂ ಓದಿ: ಅಧ್ಯಕ್ಷ ಕ್ಸಿ ಜಿನ್​ಪಿಂಗ್ ಕಠಿಣ ನೀತಿಗಳೇ ಚೀನಾದ ಆರ್ಥಿಕತೆಗೆ ಅಪಾಯ ತಂದೊಡ್ಡಲಿವೆ: ವರದಿ

ನ್ಯೂಜಿಲೆಂಡ್‌ನಲ್ಲಿ ಕೋವಿಡ್ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ವಿವಾಹ ಸಮಾರಂಭಕ್ಕೆ ಪೂರ್ಣವಾಗಿ ಲಸಿಕೆ ಪಡೆದ 100 ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಕೋವಿಡ್​ ತಡೆಗಟ್ಟಲು ರೆಡ್​ ಸೆಟ್ಟಿಂಗ್​​ ನಿರ್ಬಂಧಗಳನ್ನು ನ್ಯೂಜಿಲೆಂಡ್​ನಲ್ಲಿ ಜಾರಿಗೊಳಿಸಲಾಗಿದ್ದು, ಇದು ಮುಂದಿನ ತಿಂಗಳ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ. ಹೀಗಾಗಿ ಪ್ರಧಾನಿ ತಮ್ಮ ಮದುವೆಯನ್ನು ರದ್ದುಗೊಳಿಸಿದ್ದಾರೆ ಎನ್ನಲಾಗ್ತಿದೆ.

ಎರಡನೇ ಕೋವಿಡ್​​-19 ಲಸಿಕೆ ಮತ್ತು ಬೂಸ್ಟರ್ ಡೋಸ್​ ನಡುವಿನ ಅಂತರವನ್ನು ಆರು ತಿಂಗಳಿನಿಂದ ನಾಲ್ಕು ತಿಂಗಳಿಗೆ ಇಳಿಸಲಾಗಿದೆ. ವಿದೇಶದಿಂದ ಬರುವ ಪ್ರಯಾಣಿಕರಿಗೆ 7 ರಿಂದ 10 ದಿನಗಳ ಕ್ವಾರಂಟೈನ್​ನನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಯಮಗಳು ಸೇರಿದಂತೆ ಇತರ ಮುನ್ನೆಚ್ಚರಿಕೆ ಕ್ರಮಗಳಿಗೆ ನ್ಯೂಜಿಲೆಂಡ್​​ನ ಕ್ಯಾಬಿನೆಟ್​ ಒಪ್ಪಿಗೆ ನೀಡಿದೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.