ETV Bharat / international

ಬ್ರಿಟನ್​ ಪ್ರಧಾನಿ ಹುದ್ದೆಗೆ ಮತ್ತಷ್ಟು ಸನಿಹ.. ಎರಡನೇ ಸುತ್ತಿನಲ್ಲೂ ಸುನಕ್​ ಭಾರೀ ಮುನ್ನಡೆ

author img

By

Published : Jul 14, 2022, 9:15 PM IST

ಯುಕೆ ಪ್ರಧಾನಿ ಹುದ್ದೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ರಿಷಿ ಸುನಕ್ ಮತ್ತಷ್ಟು ಮುನ್ನಡೆ ಸಾಧಿಸಿದ್ದು, ಎರಡನೇ ಹಂತದಲ್ಲೂ ಬೃಹತ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

Rishi Sunak
Rishi Sunak

ಯಕೆ(ಲಂಡನ್​): ಬೋರಿಸ್ ಜಾನ್ಸನ್​​​ ಅವರ ರಾಜೀನಾಮೆಯಿಂದ ತೆರವಾಗಿರುವ ಯುನೈಟೆಡ್​​ ಕಿಂಗ್​ಡಮ್​ ಪ್ರಧಾನಿ ಹುದ್ದೆಗೆ ಈಗಾಗಲೇ ಮತದಾನ ಆರಂಭಗೊಂಡಿದೆ. ಮೊದಲ ಸುತ್ತಿನಲ್ಲಿ ಮುನ್ನಡೆ ಪಡೆದುಕೊಂಡಿದ್ದ ರಿಷಿ ಸುನಕ್​ ಇದೀಗ ಎರಡನೇ ಸುತ್ತಿನ ಮತದಾನದಲ್ಲೂ ಹೆಚ್ಚು ಮತ ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರಧಾನಿ ಹುದ್ದೆಗೆ ಮತ್ತಷ್ಟು ಹತ್ತಿರವಾಗಿದ್ದಾರೆ.

ಗುರುವಾರ ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಬ್ರಿಟನ್​ ಮಾಜಿ ಹಣಕಾಸು ಸಚಿವ ರಿಷಿ ಸುನಕ್​​ 101 ಮತ ಪಡೆದುಕೊಳ್ಳುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಇದರ ಜೊತೆಗೆ ಪ್ರಧಾನಿ ರೇಸ್​​ನಲ್ಲಿ ಓರ್ವ ಅಭ್ಯರ್ಥಿ ಹೊರಬಿದ್ದಿದ್ದಾರೆ. ಎರಡನೇ ಸುತ್ತಿನಲ್ಲಿ ಪೆನ್ನಿ ಮೊರ್ಡಾಂಟ್​​ 83 ಮತ ಹಾಗೂ ವಿದೇಶಾಂಗ ಕಾರ್ಯದರ್ಶಿ ಲಿಜ್​ ಟ್ರಸ್​ 64 ಮತ ಪಡೆದುಕೊಂಡಿದ್ದಾರೆ. ಅಟಾರ್ನಿ ಜನರಲ್​​ ಸುಯೆಲ್ಲಾ 27 ಮತ ಪಡೆದು ರೇಸ್​ನಿಂದ ಹೊರಬಿದ್ದಿದ್ದಾರೆ.

ನಿನ್ನೆ ನಡೆದ ಮೊದಲ ಸುತ್ತಿನ ಮತದಾನದಲ್ಲಿ ರಿಷಿ ಸುನಕ್​ 88 ಮತ ಪಡೆದುಕೊಂಡು ಮುನ್ನಡೆ ಸಾಧಿಸಿದ್ದರು. ಇದೀಗ ಎರಡನೇ ಹಂತದಲ್ಲೂ ಅವರು ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಪ್ರಧಾನಿ ರೇಸ್​ನಲ್ಲಿ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದ್ದಾರೆ. ರಿಷಿ ಸುನಕ್​ ಇನ್ಪೋಸಿಸ್​​ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯರಾಗಿದ್ದಾರೆ.

ಪ್ರಧಾನಿ ಹುದ್ದೆಗೆ ಸ್ಪರ್ಧಿಸಲು ಕನಿಷ್ಠ 20 ಸಂಸದರ ಬೆಂಬಲ ಅಗತ್ಯವಿದ್ದು, ಅಷ್ಟು ಸಂಸದರು ಬೆಂಬಲ ಸೂಚಿಸಿದರೆ ಮೊದಲ ಸುತ್ತಿನಲ್ಲಿ ಅರ್ಹತೆ ಪಡೆಯುತ್ತಾರೆ. ಇದೀಗ ಸುನಕ್​ ಅವರಿಗೆ ಬೆಂಬಲ ಸಿಕ್ಕಿರುವ ಕಾರಣ ಮುನ್ನಡೆ ಸಾಧಿಸಿದ್ದರು ಇನ್ನೂ ಎರಡನೇ ಸುತ್ತು ಪ್ರವೇಶಿಸಬೇಕಾದರೆ 30 ಸಂಸದರ ಬೆಂಬಲ ಸಿಗಬೇಕು. ಇದರಲ್ಲೂ ಕನ್ಸರ್ವೇಟಿವ್ ಪಕ್ಷದ ರಿಷಿ ಸುನಕ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸದ್ಯ ರೇಸ್​ನಲ್ಲಿ ಐವರು ಮಾತ್ರ ಉಳಿದುಕೊಂಡಿದ್ದು, ಯುಕೆ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್​ ಅವರ ಉತ್ತರಾಧಿಕಾರಿಯಾಗಿ ಯಾರು ಆಯ್ಕೆಯಾಗುತ್ತಾರೆಂಬುದು ಇದೀಗ ಹೆಚ್ಚಿನ ಕುತೂಹಲ ಮೂಡಿಸಿದೆ.

ಇದನ್ನೂ ಓದಿರಿ: ಇಂಗ್ಲೆಂಡ್​ ಪ್ರಧಾನಿ ಆಯ್ಕೆ: 1ನೇ ಸುತ್ತಿನಲ್ಲಿ ರಿಷಿ ಸುನಕ್​​ಗೆ ಹೆಚ್ಚಿನ ಮತ.. ಪ್ರಧಾನಿ ರೇಸ್​​ನಲ್ಲಿ ಮುನ್ನಡೆ

ಹಲವು ಹಗರಣಗಳು, ಕೊರೊನಾ ಸಂದರ್ಭದಲ್ಲಿ ನಿಯಮ ಮೀರಿ ಸಂತೋಷಕೂಟ ಸೇರಿದಂತೆ ಅನೇಕ ಗಂಭೀರ ಪ್ರಕರಣಗಳು ಕೇಳಿ ಬಂದ ಕಾರಣ ಬೋರಿಸ್ ಜಾನ್ಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.