ETV Bharat / jagte-raho

ಪಂಜಾಬ್​ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ: ಇಬ್ಬರ ದುರ್ಮರಣ

author img

By

Published : Sep 24, 2020, 1:52 PM IST

ಪಂಜಾಬ್​ನ ಮೊಹಾಲಿ ಜಿಲ್ಲೆಯ ಡೇರಾ ಬಾಸ್ಸಿ ಪ್ರದೇಶದಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

2 killed after building collapses in Punjab
ಪಂಜಾಬ್​ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ

ಮೊಹಾಲಿ (ಪಂಜಾಬ್): ಬರೋಬ್ಬರಿ 41 ಜನರನ್ನು ಬಲಿ ಪಡೆದ ಮಹಾರಾಷ್ಟ್ರದ ಭಿವಂಡಿಯಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದ ನೆನಪು ಮಾಸುವ ಮುನ್ನವೇ ಪಂಜಾಬ್​ನಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ.

ಪಂಜಾಬ್​ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ

ಇದೀಗ ಪಂಜಾಬ್​ನ ಮೊಹಾಲಿ ಜಿಲ್ಲೆಯ ಡೇರಾ ಬಾಸ್ಸಿ ಪ್ರದೇಶದಲ್ಲಿರುವ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಡೇರಾ ಬಾಸ್ಸಿ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಕುಲದೀಪ್ ಬಾವಾ ತಿಳಿಸಿದ್ದಾರೆ.

ಕಟ್ಟಡದ ಅವಶೇಷಗಳಡಿ ಇನ್ನೂ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.