ETV Bharat / jagte-raho

ಚಿಕ್ಕಬಳ್ಳಾಪುರ: ಬೈಕ್ ಕಳ್ಳರನ್ನು ರೆಡ್‌ ಹ್ಯಾಂಡ್ ಆಗಿ ಹಿಡಿದ ಪೊಲೀಸರು

author img

By

Published : Jan 26, 2021, 10:16 PM IST

ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸುಮಾರು 2 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

thief-who-stole-bikes-and-fled-arrested
ಚಿಕ್ಕಬಳ್ಳಾಪುರ: ಬೈಕ್ ಕಳ್ಳರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದ ಖಾಕಿ ಪಡೆ...

ಚಿಕ್ಕಬಳ್ಳಾಪುರ: ಗೌರಿಬಿದನೂರು ಪುರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಕಳ್ಳರನ್ನು ರೆಡ್ ‌ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಜಿಲ್ಲೆಯ ಗೌರಿಬಿದನೂರು ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಬೈಕ್ ಕಳ್ಳರನ್ನು ರೆಡ್‌ ಹ್ಯಾಂಡ್ ಆಗಿ ಹಿಡಿದ ಪೊಲೀಸರು

ಓದಿ: ಸಹೋದರಿಯರಿಗೆ ಚುಡಾಯಿಸಿ, ಅವಾಚ್ಯ ಶಬ್ದದಿಂದ ನಿಂದನೆ ಆರೋಪ: ಪ್ರಕರಣ ದಾಖಲು

ಆರೋಪಿಗಳು ಮಂಜುನಾಥ್ (26), ಶ್ರೀನಿವಾಸ್ (48) ಗುಡಿಬಂಡೆ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಕೃಷಿ ನೀತಿ ವಿರೋಧಿಸಿ ರೈತ ಸಂಘದ ವತಿಯಿಂದ ಬೆಂಗಳೂರಿಗೆ ಟ್ರ್ಯಾಕ್ಟರ್ ಪರೇಡ್ ಹಮ್ಮಿಕೊಂಡಿದ್ದ ವೇಳೆ ಇಂದು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ಪಿಎಸ್​​ಐ ಚಂದ್ರಿಕಾ ಹಾಗೂ ಅವರ ಸಿಬ್ಬಂದಿ ಬೆಂಗಳೂರಿಗೆ ತೆರಳುವ ವಾಹನಗಳ ತಪಾಸಣೆ ಮಾಡಿದ್ದಾರೆ.

ಈ ಸಮಯದಲ್ಲಿ ನಗರದ ನಾಗಪ್ಪ ಬ್ಲಾಕ್​​ನಲ್ಲಿ ಅಪರಿಚಿತರು ಹೀರೋ ಸ್ಪ್ಲೆಂಡರ್ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದನ್ನು ಗಮನಿಸಿದ ಸಿಬ್ಬಂದಿ ಅವರನ್ನು ತಡೆಯಲು ಮುಂದಾದಾಗ ಗಾಬರಿಗೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಬೆನ್ನಟ್ಟಿದ ಪೊಲೀಸರು ಅವರನ್ನು ಹಿಡಿದು ವಿಚಾರಣೆಗೆ ಒಳಪಡಿಸಿದಾಗ ವಾಹನವನ್ನು ಕಳವು ಮಾಡಿಕೊಂಡು ಬರುತ್ತಿರುವುದಾಗಿ ತಿಳಿಸಿದ್ದಾರೆ.

ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಸುಮಾರು 2 ಲಕ್ಷ ರೂ. ಮೌಲ್ಯದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಪಿಎಸ್​​ಐ ಪ್ರಸನ್ನ ಕುಮಾರ್, ಎಎಸ್​​ಐ ಅಂಜಿನಪ್ಪ, ಕಾನ್ಸ್​ಟೇಬಲ್​ಗಳಾದ ಲೋಕೇಶ್, ಗೋಪಿ, ಶಿವಶಂಕರ್, ದೇವರಾಜ್, ಸುರೇಶ್, ಚಾಲಕ ಅಶ್ವತ್ಥ್ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.