ETV Bharat / sitara

ದಾದಾ ಸಾಹೇಬ್​​​​ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಕನ್ನಡದ ಹಿರಿಯ ನಿರ್ದೇಶಕ!

author img

By

Published : Sep 25, 2019, 2:08 AM IST

ಕೇಂದ್ರ ಸರ್ಕಾರ ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಈ ಬಾರಿ ಬಾಲಿವುಡ್ ಬಿಗ್ ಬಿ ಅಮಿತಾಬ್​ ಬಚ್ಚನ್​ ಅವರಿಗೆ ಲಭಿಸಿದೆ. ಈ ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿ ಕನ್ನಡದ ಹೆಸರಾಂತ ನಿರ್ದೇಶಕ ಟಿ.ಎಸ್.ನಾಗಾಭರಣ ಇರೋದು ವಿಶೇಷ. ಇವರೊಂದಿಗೆ ಹಿರಿಯ ಗಾಯಕಿ ಆಶಾ ಬೋಂಸ್ಲೆ, ಅನಿಲ್ ಕಪೂರ್, ರಮೇಶ್ ಸಿಪ್ಪಿ, ಕರಣ್ ಜೋಹರ್​ರನ್ನು ಒಳಗೊಂಡ ಸಮಿತಿ ಈ ಆಯ್ಕೆ ಮಾಡಿದೆ.

ಕನ್ನಡದ ಹೆಸರಾಂತ ನಿರ್ದೇಶಕ ಟಿಎಸ್ ನಾಗಾಭರಣ

ಬಾಲಿವುಡ್ ಬಿಗ್ ಬಿ ಅಮಿತಾಬ್​​ ಬಚ್ಚನ್ ಅವರಿ​ಗೆ ಕೇಂದ್ರ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಯಾದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಈ ವಿಷಯವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜವಡೇಕರ್ ಟ್ವಿಟರ್ ಮೂಲಕ ತಿಳಿಸಿ, ಬಿಗ್ ಬಿಗೆ ಶುಭಾಶಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ನೀಡುವ ಈ ಪ್ರತಿಷ್ಠಿತ ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿ ಕನ್ನಡದ ಹೆಸರಾಂತ ನಿರ್ದೇಶಕ ಟಿ.ಎಸ್.ನಾಗಾಭರಣ, ಹಿರಿಯ ಗಾಯಕಿ ಆಶಾ ಬೋಂಸ್ಲೆ, ಅನಿಲ್ ಕಪೂರ್, ರಮೇಶ್ ಸಿಪ್ಪಿ, ಕರಣ್ ಜೋಹರ್​ ಇದ್ದಾಋಎ. ಈ ಸಮಿತಿ ಫಾಲ್ಕೆ ಪ್ರಶಸ್ತಿಗೆ ಅಮಿತಾಬ್​​ ಅವರನ್ನು ಒಮ್ಮತದಿಂದ ಆಯ್ಕೆ ಮಾಡಿದೆ.

ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದ ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅಮಿತಾಬ್​​ ಬಚ್ಚನ್ ಅವರಿಗೆ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಲ್ಲದೆ ಬಿಗ್-ಬಿ ಅವರಿಗೆ ಈಗಾಗಲೇ ಕೇಂದ್ರ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ, ಪದ್ಮ ಭೂಷಣ, ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದ್ದು, ಈಗ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನೂ ಅಮಿತಾಬ್​​​ ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಕೇಂದ್ರ ಸರ್ಕಾರ ನೀಡುವ ಅತ್ಯುನ್ನತ ಗೌರವವಾದ ಈ ಪ್ರಶಸ್ತಿ 1995ರಲ್ಲೇ ಕನ್ನಡದ ಮೇರುನಟ ಡಾ. ರಾಜ್ ಕುಮಾರ್ ಅವರಿಗೆ ಲಭಿಸಿದೆ.

Intro:ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಕನ್ನಡದ ಹಿರಿಯ ನಿರ್ದೆಶಕ..!!


ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಕೇಂದ್ರ ಸರ್ಕಾರ ನೀಡುವ ಅತ್ಯುನ್ನತ ಗೌರವ ಪ್ರಶಸ್ತಿಯಾದ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಲಭಿಸಿದೆ. ಈ ವಿಷಯವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜವಡೇಕರ್ ಅವರು ಟ್ವಿಟ್ಟರ್ ಮೂಲಕ ತಿಳಿಸಿ, ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಶುಭಾಶಯ ತಿಳಿಸಿದ್ದಾರೆ. ಕೇಂದ್ರ ಸರ್ಕಾರ ನೀಡುವ ಈ ಪ್ರತಿಷ್ಠಿತ ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿ ಕನ್ನಡದ ಹೆಸರಾಂತ ನಿರ್ದೇಶಕ ಟಿಎಸ್ ನಾಗಾಭರಣ, ಹಿರಿಯ ಗಾಯಕಿ ಆಶಾ ಭೋಸ್ಲೆ , ಅನಿಲ್ ಕಪೂರ್ ರಮೇಶ್ ,ಸಿಪ್ಪಿ ಕರಣ್ ಜೋಹ್ಹಾರ್, ಅವರುಗಳನ್ನು ಒಳಗೊಂಡ ಸಮಿತಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಗೆ ಅಮಿತಾಬ್ ಅವರನ್ನು ಒಮ್ಮತ ದಿಂದ ಆಯ್ಕೆ ಮಾಡಿದೆ.Body:ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದ ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ , ಅಮಿತಾಭ್ ಬಚ್ಚನ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. ಅಲ್ಲದೆ ಬಿಗ್-ಬಿ ಅವರಿಗೆ ಈಗಾಗಲೇ ಕೇಂದ್ರ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ಸಿಕ್ಕಿದ್ದು ಈಗ ದಾದಾ ಸಾಹೇಬ್ ಪಾಲ್ಕೆ ಅಮಿತಾಬ್ ಮುಡಿಗೇರಿದೆ.ಇನ್ನೂ ಕೇಂದ್ರ ಸರ್ಕಾರ ನೀಡುವ ಅತ್ಯುನ್ನತಗೌರವವಾದ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ 1995ರಲ್ಲಿ ಕನ್ನಡದ ಮೇರುನಟ ಡಾ ರಾಜ್ ಕುಮಾರ್ ಅವರಿಗೆ ಲಭಿಸಿದೆ.

ಸತೀಶ ಎಂಬಿConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.