ETV Bharat / sports

ಅಂತಿಮ ಟೆಸ್ಟ್​ ಪಂದ್ಯ: ಭಾರತ ವಿರುದ್ಧ ಟಾಸ್​ ಗೆದ್ದ ಇಂಗ್ಲೆಂಡ್​ ಬ್ಯಾಟಿಂಗ್​ ಆಯ್ಕೆ

author img

By

Published : Mar 4, 2021, 9:22 AM IST

ನಾಲ್ಕನೇ ಹಾಗೂ ಕೊನೆಯ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್​ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ದುಕೊಂಡಿದೆ. ಇಂಗ್ಲೆಂಡ್​ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಭಾರತ ತಂಡದಲ್ಲಿ ವೇಗಿ ಬುಮ್ರಾ ಸ್ಥಾನಕ್ಕೆ ಮೊಹಮದ್​​ ಸಿರಾಜ್​ ಆಡಲಿದ್ದಾರೆ.

England have won the toss and have opted to bat fourth test
ಅಂತಿಮ ಟೆಸ್ಟ್​ ಪಂದ್ಯ

ಅಹಮದಾಬಾದ್‌: ಆತಿಥೇಯ ಭಾರತದ ವಿರುದ್ಧ ನಾಲ್ಕನೇ ಹಾಗೂ ಕೊನೆಯ ಟೆಸ್ಟ್​ ಪಂದ್ಯದಲ್ಲಿ ಇಂಗ್ಲೆಂಡ್​ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ಆಯ್ದುಕೊಂಡಿದೆ.

ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಗಳಿಸಿ ಸರಣಿಯಲ್ಲಿ 2-1ರಲ್ಲಿ ಮುನ್ನಡೆ ಪಡೆದಿರುವ ಭಾರತವು ಈ ಟೆಸ್ಟ್​ ಗೆದ್ದು ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಫೈನಲ್‌ ಪ್ರವೇಶಿಸುವ ಹಾದಿಯಲ್ಲಿದೆ.

ಈ ಟೆಸ್ಟ್‌ನಲ್ಲಿ ಡ್ರಾ ಸಾಧಿಸಿದರೂ ಭಾರತ ಲಾರ್ಡ್ಸ್​ನಲ್ಲಿ ನಡೆಯುವ ಫೈನಲ್​ ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಒಂದು ವೇಳೆ ಸೋತರೆ ಇಬ್ಬರ ಜಗಳ ಮೂರನೆಯವನಿಗೆ ಲಾಭ ಎಂಬಂತೆ ಆಸ್ಟ್ರೇಲಿಯಾ ತಂಡ ಫೈನಲ್ ಪ್ರವೇಶಿಸಲಿದೆ.

ಇಂಗ್ಲೆಂಡ್​ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ವೇಗಿಗಳಾದ ಜೋಪ್ರಾ ಆರ್ಚರ್​ ಹಾಗೂ ಸ್ಟುವರ್ಟ್​ ಬ್ರಾಡ್ ಅವ​ರನ್ನು ಕೈಬಿಡಲಾಗಿದೆ. ಅವರ ಬದಲಿಗೆ ಡಾನ್​ ಲಾರೆನ್ಸ್​ ಹಾಗೂ ಡಾಮ್​ ಬೆಸ್​ ಅಂತಿಮ 11ರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಭಾರತ ತಂಡದಲ್ಲಿ ವೇಗಿ ಬುಮ್ರಾ ಸ್ಥಾನದಲ್ಲಿ ಮೊಹಮದ್​​ ಸಿರಾಜ್​ ಆಡಲಿದ್ದಾರೆ.

ಚೆನ್ನೈನಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಭಾರತ 227 ರನ್​ಗಳಿಂದ ಸೋತರೆ, ನಂತರ 2ನೇ ಪಂದ್ಯವನ್ನು 317 ರನ್‌ಗಳ ಭರ್ಜರಿ ಜಯ ಗಳಿಸಿತ್ತು. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಅಹರ್ನಿಶಿ ಟೆಸ್ಟ್​ ಪಂದ್ಯದಲ್ಲಿ 10 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿದೆ.

ಇದನ್ನೂ ಓದಿ: 6 ಬಾಲ್​ಗೆ 6 ಸಿಕ್ಸರ್​ ಸಿಡಿಸಿ ಅಬ್ಬರ: ಯುವರಾಜ್​ ದಾಖಲೆ ಸರಿಗಟ್ಟಿದ ಪೊಲಾರ್ಡ್​!

ಎರಡೂ ತಂಡಗಳು ಹೀಗಿವೆ:

ಭಾರತ: ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿ.ಕೀ), ವಾಷಿಂಗ್ಟನ್ ಸುಂದರ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮದ್ ಸಿರಾಜ್

ಇಂಗ್ಲೆಂಡ್: ಡೊಮಿನಿಕ್ ಸಿಬ್ಲಿ, ಜಾಕ್ ಕ್ರಾಲೆ, ಜಾನಿ ಬೈರ್‌ಸ್ಟೋವ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿ.ಕೀ), ಡೇನಿಯಲ್ ಲಾರೆನ್ಸ್, ಡೊಮಿನಿಕ್ ಬೆಸ್, ಜ್ಯಾಕ್ ಲೀಚ್, ಜೇಮ್ಸ್ ಆಂಡರ್ಸನ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.