ETV Bharat / sports

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​​: ಟಾಸ್​ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ..ಆರಂಭಿಕನಾಗಿ ರೋಹಿತ್!

author img

By

Published : Oct 2, 2019, 10:12 AM IST

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಟಾಸ್​ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದೆ.

ಟಾಸ್​ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ವಿಶಾಖಪಟ್ಟಣ: ದಕ್ಷಿಣ ಆಫ್ರಿಕಾ ವಿರುದ್ಧದ ನಡೆಯುತ್ತಿರುವ ಮೊದಲ ಟೆಸ್ಟ್​ ಪಂದ್ಯದಲ್ಲಿ ಟಾಸ್​ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದೆ.

ಮೂರು ಟೆಸ್ಟ್​ ಪಂದ್ಯಗಳ ಮೊದಲ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯುತ್ತಿದ್ದು, ಕನ್ನಡಿಗ ಮಯಾಂಕ್ ಅಗರ್ವಾಲ್ ಮತ್ತು ರೋಹಿತ್​ ಶರ್ಮಾ ಇನ್ನಿಂಗ್ಸ್​ ಆರಂಭಿಸಿದ್ದಾರೆ.

ನಿನ್ನೆಯಷ್ಟೆ ಆಡುವ 11ರ ಬಳಗವನ್ನ ಬಿಸಿಸಿಐ ಪ್ರಕಟಣೆ ಮಾಡಿತ್ತು. ವೇಗಿ ಜಸ್ಪ್ರಿತ್ ಬೂಮ್ರಾ ಅನುಪಸ್ಥಿತಿಯಲ್ಲಿ ಇಶಾಂತ್​ ಶರ್ಮಾ ಮತ್ತು ಮೊಹಮ್ಮದ್​ ಶಮಿ ಬೌಲಿಂಗ್ ವಿಭಾಗವನ್ನ ಮುನ್ನಡೆಸಲಿದ್ದಾರೆ. ಸ್ಪಿನ್​ ವಿಭಾಗದಲ್ಲಿ ಆರ್. ಅಶ್ವಿನ್ ಮತ್ತು ರವೀಂದ್ರ ಜಡೇಜ ಸ್ಥಾನ ಪಡೆದುಕೊಂಡಿದ್ದಾರೆ. 11ರ ಬಳಗದಲ್ಲಿ ರಿಷಭ್ ಪಂತ್ ಬದಲು ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಸ್ಥಾನ ಪಡೆದುಕೊಂಡಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.