ETV Bharat / sports

ಜಾರ್ಖಂಡ್‌ ಜನರಿಗೆ ವಿದ್ಯುತ್ ವ್ಯತ್ಯಯ ಸಮಸ್ಯೆ; ಧೋನಿ ಮನೆಗೂ ತಟ್ಟಿದ ಪವರ್ ಕಟ್ ಬಿಸಿ

author img

By

Published : Sep 20, 2019, 6:34 PM IST

ಸಾಂದರ್ಭಿಕ ಚಿತ್ರ

ವಿದ್ಯುತ್​ ಕಡಿತದ ಬಗ್ಗೆ ಧೋನಿ ಪತ್ನಿ ಸಾಕ್ಷಿ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಟ್ವೀಟ್​ ಮಾಡಿದ್ದಾರೆ.

ರಾಂಚಿ: ಭಾರತಕ್ಕೆ ಎರಡು ವಿಶ್ವಕಪ್ ಕ್ರಿಕೆಟ್​ ಗೆದ್ದುಕೊಟ್ಟ ಮಾಜಿ ನಾಯಕ ಎಂ.ಎಸ್​ ಧೋನಿ ಅವರ ಮನೆಗೆ ಸುಮಾರು 5 ಗಂಟೆಗಳ ಕಾಲ ವಿದ್ಯುತ್ ಕಡಿತಗೊಂಡ ಘಟನೆ ನಡೆದಿದೆ.

ಗುರುವಾರ ಏಕಾಏಕಿ ವಿದ್ಯುತ್​ ಕಡಿತದ ಬಗ್ಗೆ ಧೋನಿ ಪತ್ನಿ ಸಾಕ್ಷಿ ಅವರು ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಟ್ವೀಟ್​ ಮಾಡಿದ್ದಾರೆ. ಬಹುತೇಕ ನೆಟ್ಟಿಗರು ಸಾಕ್ಷಿ ಅವರಿಗೆ ಬೆಂಬಲ ಸೂಚಿಸಿದ್ದು, ಈ ಟ್ವೀಟ್​ ಅನ್ನು ಜಾರ್ಖಂಡ್​ ಮುಖ್ಯಮಂತ್ರಿ ಅವರಿಗೆ ಟ್ಯಾಗ್ ಮಾಡಿದ್ದಾರೆ.

'ಜಾರ್ಖಂಡ್​ನ ಜನರು ನಿತ್ಯ ವಿದ್ಯುತ್ ಕಡಿತದ ಸಮಸ್ಯೆ ಎದುರಿಸುತ್ತಿದ್ದಾರೆ. ಪ್ರತಿ ದಿನ ಸುಮಾರು 4ರಿಂದ 7 ಗಂಟೆಯವರೆಗೂ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದೆ. ಸೆಪ್ಟೆಂಬರ್ 19ರಂದು ಐದು ಗಂಟೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುತ್ತಾರೆ ಎಂಬ ಭರವಸೆ ಇದೆ' ಎಂದು ಬರೆದುಕೊಂಡಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.