ETV Bharat / sports

ಒಡಿಶಾ ರೈಲು ಅಪಘಾತ - ಸಾವಿನ ಸಂಖ್ಯೆ 261ಕ್ಕೆ ಏರಿಕೆ: ಸಂತಾಪ ಸೂಚಿಸಿದ ಕ್ರಿಕೆಟ್​ ತಾರೆಯರು..!

author img

By

Published : Jun 3, 2023, 12:58 PM IST

Updated : Jun 3, 2023, 1:28 PM IST

ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ಭೀಕರ ರೈಲು ದುರಂತಕ್ಕೆ ಕ್ರಿಕೆಟ್​ ತಾರೆಯರು ಕಂಬನಿ ಮಿಡಿದಿದ್ದಾರೆ.

Odisha Train accident
ಒಡಿಶಾ ರೈಲು ಅಪಘಾತ

ಒಡಿಶಾದ ಬಾಲಸೋರ್​ನಲ್ಲಿ ಸಂಭವಿಸಿದ ಭೀಕರ ರೈಲು ದುರಂತ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಬಾಲಸೋರ್​ನಲ್ಲಿ ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಈವರೆಗೆ 261 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುತ್ತಿದೆ. ಸಾವಿರಾರು ಜನರು ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರ ಜೊತೆಗೆ ಕ್ರಿಕೆಟ್​ ದಿಗ್ಗಜರು ಕೂಡ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಟ್ವೀಟ್​ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ವಿರಾಟ್​ ಕೊಹ್ಲಿ ಟ್ವೀಟ್​: ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸುದ್ದಿ ಕೇಳಿ ನನಗೆ ತೀವ್ರ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗಾಗಿ ನಾನು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಭಾರತೀಯ ಕ್ರಿಕೆಟಿಗ ವಿರಾಟ್​ ಕೊಹ್ಲಿ ಟ್ವೀಟ್​ ಮಾಡಿದ್ದಾರೆ.

  • Saddened to hear about the tragic train accident in Odisha. My thoughts and prayers go out to the families who lost their loved ones and wishing a speedy recovery to the injured.

    — Virat Kohli (@imVkohli) June 3, 2023 " class="align-text-top noRightClick twitterSection" data=" ">

ಗೌತಮ್​ ಗಂಭೀರ್​ ಪ್ರತಿಕ್ರಿಯೆ: "ಒಡಿಶಾದಲ್ಲಿ ಅಪಾರ ಪ್ರಾಣಹಾನಿ ಸಂಭವಿಸಿದೆ. ಸಂತ್ರಸ್ತ ಕುಟುಂಬಗಳಿಗೆ ದೇವರು ಶಕ್ತಿ ನೀಡಲಿ. ಗಾಯಗೊಂಡವರು ಆದಷ್ಟು ಬೇಗನೆ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಾಷ್ಟ್ರ ನಿಮ್ಮೊಂದಿಗೆ ನಿಂತಿದೆ" ಎಂದು ಟೀಂ ಇಂಡಿಯಾ ಆಟಗಾರ ಗೌತಮ್​ ಗಂಭೀರ್​ ಟ್ವೀಟ್​ ಮಾಡಿ ಸಂತ್ರಸ್ತರಿಗೆ ಧೈರ್ಯ ತುಂಬಿದ್ದಾರೆ.

  • Devastated by the loss of lives in Odisha. May god give strength to the families of victims. Wishing speedy recovery to those injured. Nation stands with you.

    — Gautam Gambhir (@GautamGambhir) June 3, 2023 " class="align-text-top noRightClick twitterSection" data=" ">

ಇದನ್ನೂ ಓದಿ: ಒಡಿಶಾ ರೈಲು ದುರಂತ: ಸಹಾಯವಾಣಿ ಆರಂಭ, ಬೆಂಗಳೂರಿನಿಂದ ಹೊರಡುವ ರೈಲುಗಳು ರದ್ದು.. ಹಲವರ ಪರದಾಟ!

ವೀರೇಂದ್ರ ಸೆಹ್ವಾಗ್‌ ಸಂತಾಪ: "ಒಡಿಶಾದಲ್ಲಿ ಕೋರಮಂಡಲ್​ ಎಕ್ಸ್​ಪ್ರೆಸ್​ ರೈಲು ದುರಂತ ಕೇಳಿದಾಗ ಅತ್ಯಂತ ದುಃಖವಾಯಿತು. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿರುವ ಎಲ್ಲ ಕುಟುಂಬಗಳಿಗೆ ಸಂತಾಪ ಸೂಚಿಸುತ್ತಿದ್ದೇನೆ ಮತ್ತು ಗಾಯಗೊಂಡವರು ಆದಷ್ಟು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತಿದ್ದೇನೆ" ಎಂದು ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್​ ಸಂತಾಪ ಸೂಚಿಸಿದ್ದಾರೆ.

ಹರ್ಭಜನ್​​ ಸಿಂಗ್ ಟ್ವೀಟ್​:​ "ಒಡಿಶಾದಲ್ಲಿ ಕೋರಮಂಡಲ್​ ಎಕ್ಸ್​ಪ್ರೆಸ್​ ಮತ್ತು ಇನ್ನೊಂದು ಪ್ಯಾಸೆಂಜರ್​ ರೈಲಿನ ನಡುವೆ ಸಂಭವಿಸಿದ ಭೀಕರ ಅಪಘಾತದ ಬಗ್ಗೆ ತಿಳಿದು ನೋವಾಗಿದೆ. ನನ್ನ ಪ್ರಾರ್ಥನೆಗಳು ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡವರ ಕುಟುಂಬಗಳೊಂದಿಗೆ ಇರುತ್ತವೆ. ಒಡಿಶಾದ ಸರ್ಕಾರ ಆದಷ್ಟು ಬೇಗ ಪ್ರಯಾಣಿಕರನ್ನು ರಕ್ಷಿಸಿ" ಎಂದು ಕ್ರಿಕೆಟಿಗ ಹರ್ಭಜನ್​ ಸಿಂಗ್​ ಟ್ವೀಟ್​ ಮಾಡಿದ್ದಾರೆ.

ಪರಿಹಾರ ಘೋಷಿಸಿದ ಪ್ರಧಾನಿ ಮೋದಿ: ಪ್ರಧಾನಿ ನರೇಂದ್ರ ಮೋದಿಯವರು ಮೃತರ ಕುಟುಂಬಗಳುಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ. ಮೃತರ ಸಂಬಂಧಿಕರಿಗೆ ತಲಾ 10 ಲಕ್ಷ ಮತ್ತು ಗಂಭೀರ ಗಾಯಗೊಂಡವರಿಗೆ ತಲಾ 2 ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಹೇಳಿದ್ದಾರೆ.

ಇದನ್ನೂ ಓದಿ: ಕೋರಮಂಡಲ್​ಗೆ ರೈಲಿಗೆ 'ಕರಾಳ ಶುಕ್ರವಾರ': 14 ವರ್ಷಗಳ ಹಿಂದೆ ಹಳಿತಪ್ಪಿ ನಡೆದಿತ್ತು ದುರಂತ!

Last Updated : Jun 3, 2023, 1:28 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.