ETV Bharat / sports

ಮಹಿಳಾ ಕ್ರಿಕೆಟ್​ ನಿಷೇಧಿಸಿದ್ರೆ ಪುರುಷ ತಂಡದ ಜೊತೆ ನಾವು ಟೆಸ್ಟ್​ ಆಡಲ್ಲ: ತಾಲಿಬಾನ್​ಗೆ ಆಸ್ಟ್ರೇಲಿಯಾ ಎಚ್ಚರಿಕೆ

author img

By

Published : Sep 9, 2021, 3:27 PM IST

ಅಫ್ಘಾನಿಸ್ತಾನದಲ್ಲಿ ಹೊಸ ಸರ್ಕಾರ ರಚನೆ ಮಾಡಿರುವ ತಾಲಿಬಾನ್​ಗೆ ಆಸ್ಟ್ರೇಲಿಯಾ ಕ್ರಿಕೆಟ್​​ ಖಡಕ್​ ಎಚ್ಚರಿಕೆ ನೀಡಿದೆ. ಮಹಿಳಾ ಕ್ರಿಕೆಟ್ ನಿಷೇಧ ಮಾಡಿದ್ರೆ ತಾವು ನಿಮ್ಮ ಪುರುಷ ತಂಡದೊಂದಿಗೆ ಈಗಾಗಲೇ ಆಯೋಜನೆಗೊಂಡಿರುವ ಏಕೈಕ ಟೆಸ್ಟ್​ ಪಂದ್ಯ ರದ್ಧುಗೊಳಿಸುವುದಾಗಿ ಎಚ್ಚರಿಕೆಯ ಸಂದೇಶ ರವಾನಿಸಿದೆ.

Criket Australia
Criket Australia

ಕಾಬೂಲ್​(ಅಫ್ಘಾನಿಸ್ತಾನ): ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕ್ರಿಕೆಟ್ ಸೇರಿದಂತೆ ಇತರೆ ಕ್ರೀಡೆಗಳನ್ನು ಆಡಲು ಅನುಮತಿ ನೀಡುವುದಿಲ್ಲ ಎಂದು ತಾಲಿಬಾನ್​ ಈಗಾಗಲೇ ಕಟ್ಟಪ್ಪಣೆ ಹೊರಡಿಸಿದೆ. ಈ ಬೆನ್ನಲ್ಲೇ ಕ್ರಿಕೆಟ್​ ಆಸ್ಟ್ರೇಲಿಯಾ ಮಹತ್ವದ ನಿರ್ಧಾರ ಕೈಗೊಂಡಿದೆ.

ಒಂದು ವೇಳೆ ತಾಲಿಬಾನ್​​ ಮಹಿಳಾ ಕ್ರಿಕೆಟ್​ ಬ್ಯಾನ್ ಮಾಡಿದ್ರೆ, ನಾವು ಅಫ್ಘಾನಿಸ್ತಾನ ಪುರುಷ ತಂಡದೊಂದಿಗೆ ನಡೆಯಬೇಕಿರುವ ಏಕೈಕ ಟೆಸ್ಟ್​ ಪಂದ್ಯದಲ್ಲೂ ಭಾಗಿಯಾಗುವುದಿಲ್ಲ ಎಂದು ಪ್ರಕಟಣೆ ಹೊರಡಿಸಿದೆ.

ಈ ಕುರಿತಾಗಿ ಟ್ವಿಟರ್​​ನಲ್ಲಿ ಮಾಹಿತಿ ಹಂಚಿಕೊಂಡಿರುವ ಕ್ರಿಕೆಟ್ ಆಸ್ಟ್ರೇಲಿಯಾ, ಜಾಗತಿಕವಾಗಿ ಮಹಿಳೆಯರು ಎಲ್ಲ ವಿಭಾಗಗಳಲ್ಲೂ ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಕ್ರಿಕೆಟ್ ಸೇರಿದಂತೆ ಎಲ್ಲ ವಿಭಾಗದ ಕ್ರೀಡೆಗಳಲ್ಲಿ ಅವರನ್ನು ಬೆಂಬಲಿಸುವುದು ಆಸ್ಟ್ರೇಲಿಯಾದ ಆದ್ಯ ಕರ್ತವ್ಯ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ​​ ಮಹಿಳಾ ಕ್ರಿಕೆಟ್​ಗೆ ನಿಷೇಧ ಹೇರಿದರೆ, ನಾವು ಅಫ್ಘಾನಿಸ್ತಾನ ಪುರುಷ ತಂಡದೊಂದಿಗೆ ಟೆಸ್ಟ್​ ಕ್ರಿಕೆಟ್​ ಆಡುವುದಿಲ್ಲ. ಈ ಟೆಸ್ಟ್​ ಪಂದ್ಯ ರದ್ದುಗೊಳಿಸಬೇಕಾಗುತ್ತದೆ ಎಂದು ತಿಳಿಸಿದೆ.

ನವೆಂಬರ್​ ತಿಂಗಳಲ್ಲಿ ಅಫ್ಘಾನಿಸ್ತಾನದೊಂದಿಗೆ ಹೋಬರ್ಟ್​​ನಲ್ಲಿ ಆಸ್ಟ್ರೇಲಿಯಾ ಐತಿಹಾಸಿಕ ಏಕೈಕ ಟೆಸ್ಟ್​ ಪಂದ್ಯ ಆಯೋಜಿಸಿದೆ. ಇದೀಗ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಯಾವುದೇ ಕ್ರೀಡೆಗಳನ್ನು ಆಡಲು ಅವಕಾಶವಿಲ್ಲ ಎಂದು ತಾಲಿಬಾನ್ ಆದೇಶ ಹೊರಡಿಸುತ್ತಿದ್ದಂತೆ ಕಾಂಗರೂ ದೇಶ ಈ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಕ್ರಿಕೆಟ್ ಸೇರಿದಂತೆ ಕ್ರೀಡೆಗಳನ್ನು ಆಡಲು ಅನುಮತಿಸುವುದಿಲ್ಲ : ತಾಲಿಬಾನ್

ಕಳೆದ ಎರಡು ದಿನಗಳ ಹಿಂದೆ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದರ ಬೆಳವಣಿಗೆಯ ನಡುವ ಮಹಿಳೆಯರು ಕ್ರಿಕೆಟ್ ಆಡುವುದು ಅನಿವಾರ್ಯವಲ್ಲ. ಕ್ರಿಕೆಟ್​ನಲ್ಲಿ ಅವರು ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿ ಎದುರಿಸಬಹುದು. ಇಸ್ಲಾಂ ಮಹಿಳೆಯರನ್ನು ನೋಡಲು ಅನುಮತಿಸುವುದಿಲ್ಲ ಎಂದು ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಹೇಳಿದ್ದಾನೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.