ETV Bharat / sports

ಭಾರತ-ನ್ಯೂಜಿಲ್ಯಾಂಡ್ ಏಕದಿನ​ ಕ್ರಿಕೆಟ್ ಸರಣಿ ಮುಂದೂಡಿಕೆ: ಕಾರಣ?

author img

By

Published : Sep 16, 2021, 4:58 PM IST

2023ರ ಏಕದಿನ ವಿಶ್ವಕಪ್​​ ಟೂರ್ನಿ ಭಾಗವಾಗಿ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಂಡು ಮೂರು ಏಕದಿನ ಪಂದ್ಯಗಳ ಸರಣಿಯಲ್ಲಿ ಭಾಗಿಯಾಗಬೇಕಾಗಿತ್ತು. ಆದರೆ ಇದೀಗ ಸರಣಿ ಮುಂದೂಡಿಕೆಯಾಗಿದೆ.

Team India Tour Of New Zealand Postponed
Team India Tour Of New Zealand Postponed

ನವದೆಹಲಿ: ಐಸಿಸಿ ಟಿ-20 ವಿಶ್ವಕಪ್​​ ಟೂರ್ನಮೆಂಟ್​ ಮುಕ್ತಾಯದ ನಂತರ ಟೀಂ ಇಂಡಿಯಾ ನ್ಯೂಜಿಲ್ಯಾಂಡ್​ ಪ್ರವಾಸ ಕೈಗೊಳ್ಳಬೇಕಾಗಿತ್ತು. ಆದರೆ 2022ರವರೆಗೆ ಈ ಸರಣಿ ಮುಂದೂಡಿಕೆಯಾಗಿದೆ.

ನ್ಯೂಜಿಲ್ಯಾಂಡ್​ನಲ್ಲಿ ಕಳೆದ ಕೆಲ ದಿನಗಳಿಂದ ಕೊರೊನಾ ಸೋಂಕಿತ ಪ್ರಕರಣಗಳಲ್ಲಿ ಏರಿಕೆ ಕಂಡು ಬರುತ್ತಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದಂತೆ ನ್ಯೂಜಿಲ್ಯಾಂಡ್​ ಕ್ರಿಕೆಟ್​ ಮಂಡಳಿ ವಕ್ತಾರರು ಮಾಹಿತಿ ಖಚಿತಪಡಿಸಿದ್ದಾರೆ. ಮೇಲಿಂದ ಮೇಲೆ ಐಸಿಸಿ ಆಯೋಜಿತ ಟೂರ್ನಿಗಳಿರುವ ಕಾರಣ ಹಾಗೂ ಕೋವಿಡ್​​ನಿಂದಾಗಿ ಸರಣಿ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Team India Tour Of New Zealand Postponed
ವಿರಾಟ್​ ಕೊಹ್ಲಿ-ಕೇನ್​ ವಿಲಿಯಮ್ಸನ್​​

2023ರ ಐಸಿಸಿ ಏಕದಿನ ವಿಶ್ವಕಪ್​ ಟೂರ್ನಿ​ ಕ್ವಾಲಿಫೈಯರ್​​​ ಭಾಗವಾಗಿ ಟೀಂ ಇಂಡಿಯಾ ಹಾಗೂ ನ್ಯೂಜಿಲ್ಯಾಂಡ್​​ ನಡುವೆ ಮೂರು ಏಕದಿನ ಪಂದ್ಯಗಳ ಸರಣಿ ಆಯೋಜನೆಗೊಂಡಿತ್ತು. ಆದರೆ 2022ರಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​ವರೆಗೂ ಈ ದ್ವಿಪಕ್ಷೀಯ ಸರಣಿ ಮುಂದೂಡಿಕೆಯಾಗಿದೆ.

ಇದನ್ನೂ ಓದಿ: ಪಾಕಿಸ್ತಾನ-ಅಫ್ಘಾನಿಸ್ತಾನ ಗಡಿಯಲ್ಲಿ ಉಗ್ರರ ದಾಳಿ: ಪಾಕ್‌ನ 7 ಯೋಧರು ಸಾವು

ದುಬೈನಲ್ಲಿ ಆಯೋಜನೆಗೊಂಡಿರುವ ಟಿ-20 ವಿಶ್ವಕಪ್​ ಮುಕ್ತಾಯವಾಗುತ್ತಿದ್ದಂತೆ ಟೀಂ ಇಂಡಿಯಾ ನವೆಂಬರ್ ತಿಂಗಳಲ್ಲಿ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಬೇಕಾಗಿತ್ತು. ಆದರೆ ಇದೀಗ ಮುಂದೂಡಿಕೆಯಾಗಿದೆ. ವಿಶೇಷವೆಂದರೆ ಟೂರ್ನಿ ಮುಂದೂಡಿಕೆಯಾಗಿರುವುದಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ಮಂಡಳಿ ಇಲ್ಲಿಯವರೆಗೆ ಯಾವುದೇ ರೀತಿಯ ಮಾಹಿತಿ ಹಂಚಿಕೊಂಡಿಲ್ಲ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.