ETV Bharat / sports

ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ: ಕಿಶನ್​ ಬದಲು ಭರತ್​ಗೆ ಅವಕಾಶ

author img

By ETV Bharat Karnataka Team

Published : Dec 17, 2023, 9:04 PM IST

ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ
ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ

ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್​ ಸರಣಿಗೂ ಮುನ್ನ ಭಾರತ ತಂಡದಲ್ಲಿ ಬದಲಾವಣೆ ಮಾಡಲಾಗಿದೆ. ವಿಕೆಟ್​ ಕೀಪರ್​ ಇಶಾನ್​ ಕಿಶನ್​ರನ್ನು ತಂಡದಿಂದ ಕೈಬಿಡಲಾಗಿದೆ.

ಜೋಹಾನ್ಸ್‌ಬರ್ಗ್/ಹೈದರಾಬಾದ್: ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣಗಳಿಗಾಗಿ ಸರಣಿಯನ್ನು ತಪ್ಪಿಸಿಕೊಳ್ಳಲಿದ್ದು, ಇವರ ಬದಲಿಗೆ ಕೆ.ಎಸ್.ಭರತ್​ ಅವರನ್ನು ಹೆಚ್ಚುವರಿ ವಿಕೆಟ್​ ಕೀಪರ್​ ಆಗಿ ಆಯ್ಕೆ ಮಾಡಲಾಗಿದೆ.

ಮುಂಬರುವ ಟೆಸ್ಟ್ ಸರಣಿಗೆ ಇಶಾನ್​ ಕಿಶನ್​ರನ್ನು ಎರಡನೇ ವಿಕೆಟ್​ ಕೀಪರ್​ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ, ವೈಯಕ್ತಿಕ ಕಾರಣಗಳಿಗಾಗಿ ಅವರು ಸರಣಿಯಿಂದ ವಿರಾಮ ಪಡೆಯಲು ಬಯಸಿದ್ದಾರೆ. ಹೀಗಾಗಿ ಟೆಸ್ಟ್ ತಂಡದಿಂದ ಕೈಬಿಡಲಾಗಿದೆ ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.

ಎಡಗೈ ಬ್ಯಾಟರ್​ ಇಶಾನ್ ಕಿಶನ್ ವೆಸ್ಟ್ ಇಂಡೀಸ್‌ ವಿರುದ್ಧ ಟೆಸ್ಟ್​ ಕ್ರಿಕೆಟ್​ ಮಾದರಿಗೆ ಪಾದಾರ್ಪಣೆ ಮಾಡಿದ್ದರು. ಇಲ್ಲಿಯವರೆಗೆ, 25 ವರ್ಷದ ಕಿಶನ್ ಕೇವಲ ಎರಡು ಟೆಸ್ಟ್‌ಗಳನ್ನು ಆಡಿದ್ದಾರೆ. ಅದರಲ್ಲಿ 78 ರನ್ ಗಳಿಸಿದ್ದಾರೆ. ಅಜೇಯ 52 ಅವರ ಗರಿಷ್ಠ ಸ್ಕೋರ್ ಆಗಿದೆ. 30 ವರ್ಷದ ಕೆ.ಎಸ್.ಭರತ್ ಫೆಬ್ರವರಿ 2023ರಲ್ಲಿ ನಾಗ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್​ಗೆ ಎಂಟ್ರಿ ನೀಡಿದ್ದರು.

ಭರತ್ ಇಲ್ಲಿಯವರೆಗೆ 5 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ಪೈಕಿ 44 ಗರಿಷ್ಠ ಸ್ಕೋರ್‌ನೊಂದಿಗೆ 129 ರನ್ ಗಳಿಸಿದ್ದಾರೆ. 12 ಕ್ಯಾಚ್‌ಗಳು ಮತ್ತು 1 ಸ್ಟಂಪಿಂಗ್ ಸಹ ಹೊಂದಿದ್ದಾರೆ. ಬ್ಯಾಟಿಂಗ್​ನಲ್ಲಿ ವೈಫಲ್ಯ ಕಾಣುತ್ತಿರುವ ಕಾರಣ ಅವರಿಗೆ ಸರಣಿಯಲ್ಲಿ ಅವಕಾಶ ಸಿಗುವುದು ಕಷ್ಟವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಒಂದು ಬಾಕ್ಸಿಂಗ್​ ಡೇ ಟೆಸ್ಟ್​ ಇದ್ದು, ಅದರಲ್ಲಿ ಕೆ.ಎಲ್.ರಾಹುಲ್​ ವಿಕೆಟ್​ ಕೀಪಿಂಗ್​ ಜವಾಬ್ದಾರಿ ನಿಭಾಯಿಸುವ ಸಾಧ್ಯತೆ ಇದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಡಿಸೆಂಬರ್ 26ರಿಂದ ಆರಂಭವಾಗಲಿದೆ. ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ಮೊದಲ ಟೆಸ್ಟ್‌ ನಡೆಯಲಿದೆ. ಎರಡನೇ ಟೆಸ್ಟ್ ಜನವರಿ 3ರಿಂದ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ನಡೆಯಲಿದೆ.

ಭಾರತ- ಪರಿಷ್ಕೃತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಕೆ.ಎಲ್.ರಾಹುಲ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್ (ಉಪನಾಯಕ), ಪ್ರಸಿದ್ಧ್ ಕೃಷ್ಣ ಮತ್ತು ಕೆಎಸ್ ಭರತ್ (ವಿಕೆಟ್ ಕೀಪರ್).

ಇದನ್ನೂ ಓದಿ: ಮೊದಲ ಏಕದಿನ ಪಂದ್ಯ: ದ.ಆಫ್ರಿಕಾ ವಿರುದ್ಧ ಭಾರತಕ್ಕೆ 8 ವಿಕೆಟ್​ಗಳ ಭರ್ಜರಿ ಜಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.