ETV Bharat / sports

ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ: ಜಸ್ಪ್ರೀತ್​, ಹರ್ಷಲ್​ ಕಮ್​ಬ್ಯಾಕ್​

author img

By

Published : Sep 12, 2022, 5:42 PM IST

Updated : Sep 12, 2022, 8:32 PM IST

ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯುವ ಟಿ 20 ವಿಶ್ವಕಪ್​ಗೆ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದೆ. ಇದಲ್ಲದೇ, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ವಿರುದ್ಧದ ಸರಣಿಗೂ ಆಟಗಾರರನ್ನು ಆಯ್ಕೆ ಮಾಡಿದೆ.

india-squad
ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾ ಪ್ರಕಟ

ನವದೆಹಲಿ: ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯುವ ಟಿ20 ವಿಶ್ವಕಪ್​ ಮತ್ತು ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೂ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಗಾಯಗೊಂಡಿದ್ದ ಜಸ್ಪ್ರೀತ್​ ಬೂಮ್ರಾ ಮತ್ತು ಹರ್ಷಲ್​ ಪಟೇಲ್​ ತಂಡಕ್ಕೆ ವಾಪಸ್​ ಆಗಿದ್ದಾರೆ. ಗಾಯಗೊಂಡು ಸರ್ಜರಿಗೆ ಒಳಗಾಗಿರುವ ಆಲ್​ರೌಂಡರ್​ ರವೀಂದ್ರ ಜಡೇಜಾ ಸ್ಥಾನ ಪಡೆದಿಲ್ಲ.

ಅಕ್ಟೋಬರ್​ 16 ರಿಂದ ಆಸ್ಟ್ರೇಲಿಯಾದಲ್ಲಿ ಟಿ20 ಸಮರ ನಡೆಯಲಿದ್ದು, ರೋಹಿತ್​ ಶರ್ಮಾ ನೇತೃತ್ವದ 15 ಸದಸ್ಯರ ಬಲಿಷ್ಠ ತಂಡವನ್ನು ಬಿಸಿಸಿಐ ಆಯ್ಕೆ ಮಾಡಿದೆ. ಗಾಯದ ಸಮಸ್ಯೆಗೀಡಾಗಿ ಚೇತರಿಸಿಕೊಂಡಿರುವ ವೇಗಿಗಳಾದ ಜಸ್ಪ್ರೀತ್​ ಬೂಮ್ರಾ, ಹರ್ಷಲ್​ ಪಟೇಲ್​ರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಅರ್ಷದೀಪ್​ ಇನ್​, ಆವೇಶ್​ಖಾನ್​ ಔಟ್​: ಏಷ್ಯಾಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ಕ್ಯಾಚ್​ ಬಿಟ್ಟು ಟೀಕೆಗೆ ಗುರಿಯಾಗಿದ್ದ ಯುವ ವೇಗಿ ಅರ್ಷದೀಪ್​ ಸಿಂಗ್​ಗೆ ಅವಕಾಶ ನೀಡಲಾಗಿದೆ. ಇನ್ನೊಬ್ಬ ವೇಗಿ ಆವೇಶ್​ ಖಾನ್​ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಅನುಭವಿ ವೇಗಿ ಮಹಮದ್​ ಶಮಿಗೆ ಏಷ್ಯಾ ಕಪ್​ ತಂಡದಲ್ಲಿ ಸ್ಥಾನ ನೀಡದ್ದಕ್ಕೆ ಟೀಕೆ ವ್ಯಕ್ತವಾಗಿತ್ತು.

ಅಚ್ಚರಿ ಎಂಬಂತೆ ವಿಶ್ವಕಪ್​ ತಂಡದಲ್ಲೂ ಅವರಿಗೆ ಸ್ಥಾನ ನೀಡಲಾಗಿಲ್ಲ. ಮೀಸಲು ಆಟಗಾರರಲ್ಲಿ ಶ್ರೇಯಸ್​ ಅಯ್ಯರ್​, ರವಿ ಬಿಷ್ಣೋಯಿ, ದೀಪಕ್​​ ಚಹರ್​ ಜೊತೆಗೆ ಶಮಿಗೆ ಸ್ಥಾನ ನೀಡಲಾಗಿದೆ.

ರವೀಂದ್ರ ಜಡೇಜಾಗಿಲ್ಲ ಚಾನ್ಸ್: ಏಷ್ಯಾ ಕಪ್​ ವೇಳೆ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದ ಆಲ್​ರೌಂಡರ್​ ರವೀಂದ್ರ ಜಡೇಜಾಗೆ ಟಿ20 ವಿಶ್ವಕಪ್​ ತಂಡಕ್ಕೆ ಪರಿಗಣಿಸಲಾಗಿಲ್ಲ. ಸರ್ಜರಿಗೆ ಒಳಗಾಗಿರುವ ಜಡೇಜಾ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ವಿಶ್ವಕಪ್​ಗೆ ಇನ್ನೂ ಕೇವಲ 5 ವಾರಗಳು ಬಾಕಿ ಇರುವ ಕಾರಣ ಜಡೇಜಾ ಲಭ್ಯತೆ ಅನುಮಾನದ ಕಾರಣ ಅವರ ಬದಲಾಗಿ ಅಕ್ಸರ್​ ಪಟೇಲ್​ಗೆ ಆಲ್​ರೌಂಡರ್​ ಆಗಿ ಅವಕಾಶ ನೀಡಲಾಗಿದೆ.

ಗಾಯದಿಂದ ಚೇತರಿಸಿಕೊಂಡಿರುವ ಜಸ್ಪ್ರೀತ್​ ಬೂಮ್ರಾ ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಮತ್ತು ಟಿ20 ವಿಶ್ವಕಪ್​ ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ. ಮಹಮದ್​ ಶಮಿಗೆ ಆಸ್ಟ್ರೇಲಿಯಾ, ಆಫ್ರಿಕಾ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಟಿ20 ವಿಶ್ವಕಪ್​ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯಾ, ಆರ್.ಅಶ್ವಿನ್, ಯಜುವೇಂದ್ರ ಚಹಲ್​, ಅಕ್ಸರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು - ಮಹಮದ್​ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್.

ಆಸ್ಟ್ರೇಲಿಯಾ ಸರಣಿಗೆ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯಾ, ಆರ್. ಅಶ್ವಿನ್, ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಮಹಮ್ಮದ್. ಶಮಿ, ಹರ್ಷಲ್ ಪಟೇಲ್, ದೀಪಕ್ ಚಹರ್, ಜಸ್ಪ್ರೀತ್ ಬೂಮ್ರಾ.

ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯಜುವೇಂದ್ರ ಚಹಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಮಹಮ್ಮದ್ ಶಮಿ, ಹರ್ಷಲ್ ಪಟೇಲ್, ದೀಪಕ್ ಚಹರ್, ಜಸ್ಪ್ರೀತ್ ಬುಮ್ರಾ.

ಇದನ್ನು ಓದಿ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಗೆ ಶಿಖರ್ ಧವನ್​​ ಕ್ಯಾಪ್ಟನ್‌: ಬಿಸಿಸಿಐ

Last Updated : Sep 12, 2022, 8:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.