ETV Bharat / sports

ಏಳನೇ ಬಾರಿ ಸರಣಿ ಗೆಲ್ಲುವ ತವಕದಲ್ಲಿ ಭಾರತ.. ನ್ಯೂಜಿಲ್ಯಾಂಡ್​ಗೆ‘ಮಾಡು ಇಲ್ಲವೇ ಮಡಿ ಪಂದ್ಯ

author img

By

Published : Jan 21, 2023, 8:21 AM IST

ಭಾರತ ಮತ್ತು ನ್ಯೂಜಿಲ್ಯಾಂಡ್​ ನಡುವಿನ ಎರಡನೇ ಪಂದ್ಯ ಇಂದು ನಡೆಯಲಿದೆ. ರಾಯಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯ ನ್ಯೂಜಿಲ್ಯಾಂಡ್​ಗೆ‘ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

india vs new zealand ODI Series  india vs new zealand 2nd ODI  IND vs NZ ODI Series  ಏಳನೇ ಬಾರಿ ಸರಣಿ ಗೆಲ್ಲುವ ತವಕದಲ್ಲಿ ಭಾರತ  ನ್ಯೂಜಿಲ್ಯಾಂಡ್​ಗೆ‘ಮಾಡು ಇಲ್ಲವೇ ಮಡಿ ಪಂದ್ಯ  ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣ  ಮೊದಲ ಪಂದ್ಯದಲ್ಲಿ ರೋಚಕ ಜಯ  ನ್ಯೂಜಿಲೆಂಡ್ ಸವಾಲನ್ನು ಮೆಟ್ಟಿ ನಿಲ್ಲುವ ಗುರಿ  ಟಿಮ್ ಸೌಥಿ ಮತ್ತು ಟ್ರೆಂಟ್ ಬೌಲ್ಟ್ ಅನುಪಸ್ಥಿತಿ
ಏಳನೇ ಬಾರಿ ಸರಣಿ ಗೆಲ್ಲುವ ತವಕದಲ್ಲಿ ಭಾರತ

ರಾಯಪುರ: ಮೊದಲ ಪಂದ್ಯದಲ್ಲಿ ರೋಚಕ ಜಯ ಸಾಧಿಸಿರುವ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್​ ಸವಾಲನ್ನು ಮೆಟ್ಟಿ ನಿಲ್ಲುವ ಗುರಿ ಹೊಂದಿದೆ. ಮೊದಲ ಪಂದ್ಯವನ್ನು ಗೆದ್ದಿರುವ ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಭಾರತ ತಂಡ ಇಂದಿನ ಪಂದ್ಯದಲ್ಲಿ ಗೆದ್ದರೆ ತವರಿನಲ್ಲಿ ನ್ಯೂಜಿಲ್ಯಾಂಡ್​ ವಿರುದ್ಧ ಸತತ 7ನೇ ಏಕದಿನ ಸರಣಿಯನ್ನು ಗೆಲ್ಲಲಿದೆ. ನ್ಯೂಜಿಲ್ಯಾಂಡ್​ ಇದುವರೆಗೆ ಭಾರತದಲ್ಲಿ ಒಂದೇ ಒಂದು ಏಕದಿನ ಸರಣಿಯನ್ನು ಗೆಲ್ಲಲು ಸಾಧ್ಯವಾಗಿಲ್ಲ. ಇದಕ್ಕೂ ಮೊದಲು ಭಾರತದ ನೆಲದಲ್ಲಿ ಉಭಯ ತಂಡಗಳ ನಡುವೆ ಆರು ಏಕದಿನ ಸರಣಿಗಳು ನಡೆದಿದ್ದು, ಅದರಲ್ಲಿ ಭಾರತ ಎಲ್ಲ ಸರಣಿಯನ್ನು ತನ್ನದಾಗಿಸಿಕೊಂಡಿದೆ.

ಶನಿವಾರದಂದು ರಾಯ್‌ಪುರದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಮೈದಾನದಲ್ಲಿ ಸರಣಿಯ ಎರಡನೇ ಪಂದ್ಯ ನಡೆಯಲಿದೆ. 49,000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಕ್ರಿಕೆಟ್ ಸ್ಟೇಡಿಯಂನಲ್ಲಿ 2013 ಮತ್ತು 2015 ರಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌ನ (ಈಗ ಡೆಲ್ಲಿ ಕ್ಯಾಪಿಟಲ್ಸ್) ಎರಡು IPL ಪಂದ್ಯಗಳನ್ನು ಆಯೋಜಿಸಲಾಗಿತ್ತು. ಚಾಂಪಿಯನ್ಸ್ ಲೀಗ್ T20ಯ ಎಂಟು ಪಂದ್ಯಗಳನ್ನು ಸಹ ಇಲ್ಲೇ ನಡೆದಿದ್ದವು. ರೋಹಿತ್ ಶರ್ಮಾ ನೇತೃತ್ವದ ತಂಡವು ರಾಯ್‌ಪುರದಲ್ಲಿ ಸರಿಪಡಿಸಲು ಬಯಸುವ ಕೆಲವು ಲೋಪದೋಷಗಳಿವೆ. ಎದುರಾಳಿ ತಂಡಕ್ಕೆ ಬ್ಯಾಟಿಂಗ್ ಮೂಲಕ ತಿರುಗೇಟು ನೀಡಲು ಅವಕಾಶ ನೀಡುತ್ತಿಲ್ಲ. ತಮ್ಮ ಕೊನೆಯ ಆರು ODIಗಳಲ್ಲಿ, ಭಾರತವು ಮೆಹಿದಿ ಹಸನ್ ಮಿರಾಜ್, ದಸುನ್ ಶನಕ ಮತ್ತು ಇತ್ತೀಚೆಗೆ ಬ್ರೇಸ್‌ವೆಲ್ ಅವರಂತಹ ಬ್ಯಾಟ್ಸ್‌ಮನ್‌ಗಳಿಗೆ ಶತಕಗಳನ್ನು ಗಳಿಸುವ ಅವಕಾಶವನ್ನು ನೀಡಿದೆ.

ಮತ್ತೊಂದೆಡೆ, ಟಿಮ್ ಸೌಥಿ ಮತ್ತು ಟ್ರೆಂಟ್ ಬೌಲ್ಟ್ ಅನುಪಸ್ಥಿತಿಯಲ್ಲಿ ನ್ಯೂಜಿಲ್ಯಾಂಡ್​ ತಂಡ ತಮ್ಮ ಬೌಲಿಂಗ್ ದಾಳಿಯನ್ನು ಉತ್ತಮಗೊಳಿಸಲು ಬಯಸುತ್ತದೆ. ಹೆನ್ರಿ ಶಿಪ್ಲಿ, ಬ್ಲೇರ್ ಟಿಕ್ನರ್ ಮತ್ತು ಲಾಕಿ ಫರ್ಗುಸನ್ ಹೈದರಾಬಾದ್‌ನಲ್ಲಿ ನಡೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಲಿಲ್ಲ. ಲೆಗ್ ಸ್ಪಿನ್ನರ್ ಇಶ್ ಸೋಧಿ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಅವರ ಬದಲಿಗೆ ಆಡುವ 11ರ ಬಳಗದಲ್ಲಿ ಯಾರು ಸ್ಥಾನ ಪಡೆಯುತ್ತಾರೆ ಎಂಬುದು ಕುತೂಹಲಕಾರಿಯಾಗಿದೆ.

ರಾಯ್‌ಪುರ ಪಿಚ್ ವರದಿ: ರಾಯ್‌ಪುರ ಪಿಚ್ ವೇಗದ ಬೌಲರ್‌ಗಳನ್ನು ನಿರಾಶೆಗೊಳಿಸಬಹುದಾಗಿದೆ. ಆದ್ದರಿಂದ ಬ್ಯಾಟ್ಸ್‌ಮನ್‌ಗಳು ದೊಡ್ಡ ಸ್ಕೋರ್ ಮಾಡುವುದನ್ನು ತಡೆಯಲು ಬೌಲಿಂಗ್​ ವಿಭಾಗದಲ್ಲಿ ಬದಲಾವಣೆಗಳನ್ನು ಅವಲಂಬಿಸಬೇಕಾಗುತ್ತದೆ. ಆದರೆ, ಚೆಂಡು ಹಳೆಯದಾದ ತಕ್ಷಣ ಸ್ಪಿನ್ನರ್‌ಗಳಿಗೆ ಸಾಕಷ್ಟು ನೆರವು ಸಿಗಲಿದೆ. ಆಟವು ಮುಂದುವರೆದಂತೆ ಈ ಪಿಚ್​ನಲ್ಲಿ ಬ್ಯಾಟಿಂಗ್ ಮಾಡಲು ಸುಲಭವಾಗುತ್ತದೆ. ಆದ್ದರಿಂದ ಯಾವುದೇ ತಂಡವು ರಾಯ್‌ಪುರದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಬಯಸುತ್ತದೆ.

ಎರಡೂ ತಂಡಗಳು ಇಂತಿವೆ..

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ರಜತ್ ಪಾಟಿದಾರ್, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಉಮ್ರಾನ್ ಮಲಿಕ್.

ನ್ಯೂಜಿಲ್ಯಾಂಡ್​​ ತಂಡ: ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (c & wk), ಮೈಕೆಲ್ ಬ್ರೇಸ್‌ವೆಲ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್, ಜೇಕಬ್ ಬ್ರಫ್‌ವೆಲ್, ಮರ್ಕಬ್ ಚಾಪ್‌ವೆಲ್, ಮತ್ತು ಹೆನ್ರಿ ಶಿಪ್ಲಿ.

ಓದಿ: ಎಫ್‌ಐಎಚ್ ಪುರುಷರ ಹಾಕಿ ವಿಶ್ವಕಪ್ 2023: ಕೊನೆಯ ಐದು ಸೆಕೆಂಡ್​ಗಳಲ್ಲಿ ಪಂದ್ಯ ಡ್ರಾ ಮಾಡಿಕೊಂಡ ಅರ್ಜೆಂಟೀನಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.